ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಿಸಲು ಬಂಗಾರಪ್ಪ ಮಗನಾಗಿ ಸಹಾಯ: ಸಚಿವ ಮಧು ಬಂಗಾರಪ್ಪ

Date:

ರಾಜ್ಯದ ಬಿಸಿಯೂಟ ನೌಕರರ ಪರವಾಗಿ ಎಂದಿಗೂ ನಾನು ಜೊತೆ ಇರುತ್ತೇನೆ. ಮಾನ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಮಗನಾಗಿ ನಿಮಗೆಲ್ಲ ಸಹಾಯ ಮಾಡಲು ಸಿದ್ಧನಿದ್ದೇನೆ ಎಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಶ್ರೀ ಮಧು ಬಂಗಾರಪ್ಪ ಬಿಸಿಯೂಟ ನೌಕರರಿಗೆ ಭರವಸೆ ನೀಡಿದ್ದಾರೆ.

- Advertisement -

ಸ್ವಾತಂತ್ರ್ಯ ಉದ್ಯಾನವನದಲ್ಲಿ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟಿಸುತ್ತಿರುವ ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್ ಸದಸ್ಯರನ್ನು ಇಂದು ವಿಧಾನಸೌಧದದಲ್ಲಿನ ತಮ್ಮ ಕಚೇರಿಗೆ ಕರೆಸಿಕೊಂಡು, ಅವರೊಂದಿಗೆ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಈ ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಅವರು, ಕನಿಷ್ಠ ವೇತನ ನೀಡುವುದು, ಬಿಸಿಯೂಟ ತಯಾರಕರಿಗೆ ಇಡುಗಂಟು ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಗಳನ್ನು ಸಚಿವರ ಮುಂದೆ ಮಂಡಿಸಿದರು.

“ಕನಿಷ್ಠ ವೇತನ ದರಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಇದರಲ್ಲಿ ನಾನೂ ಸದಸ್ಯನಿದ್ದೇನೆ. ಬಿಸಿಯೂಟ ನೌಕರರ ಸಮಸ್ಯೆಗಳ ಬಗ್ಗೆ ಖಂಡಿತ ಗಮನವಿದೆ. ಸರ್ಕಾರದ ಅಂಗ ನೀವು. ನಮ್ಮ ಮಕ್ಕಳನ್ನು ನೀವೂ ನೋಡಿಕೊಳ್ಳುತ್ತಿದ್ದೀರಿ. ನಿಮ್ಮ ಬಗ್ಗೆ ನನಗೆ ಸಹಾನುಭೂತಿ ಇದೆ. ನಿಮ್ಮ ಕಷ್ಟಕ್ಕೆ ಸ್ಪಂದಿಸುವುದು ನನ್ನ ಕರ್ತವ್ಯ. ಸರ್ಕಾರದ ನಿಯಮಗಳ ಅಡಿಯಲ್ಲಿ ನಿಮಗೇನು ಸಹಾಯ ಮಾಡಲು ಆಗುತ್ತದೆಯೋ ಅದನ್ನೆಲ್ಲ ಮಾಡುತ್ತೇನೆ” ಎಂದು ನಿಯೋಗಕ್ಕೆ ಭರವಸೆ ನೀಡಿದರು.

ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ :

“ಯಾವ ಯಾವ ರಾಜ್ಯದಲ್ಲಿ ಎಷ್ಟು ವೇತನ ನೀಡಲಾಗುತ್ತಿದೆ? ಜೊತೆಗೆ ಬೇರೆ ಬೇರೆ ಸೌಲಭ್ಯಗಳನ್ನು ಹೇಗೆ ವಿತರಿಸಲಾಗುತ್ತಿದೆ? ಕೇಂದ್ರ ಸರ್ಕಾರ ಮತ್ತು ಉಳಿದ ರಾಜ್ಯ ಸರ್ಕಾರಗಳು ಇಡುಗಂಟು ಎಷ್ಟು ನೀಡುತ್ತಿವೆ? ಅದರಲ್ಲೂ ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳ ಸ್ಥಿತಿಗತಿ ಹೇಗಿದೆ? ಎಂಬುದರ ಕುರಿತು ಶೀಘ್ರ ವರದಿ ಕೊಡಿ ಎಂದು ಸ್ಥಳದಲ್ಲೇ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸಚಿವರು ಸೂಚಿಸಿದರು.

“ಅಧಿಕಾರಿಗಳ ಮಾಹಿತಿ ಮತ್ತು ನಿಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಮೂರು ವರ್ಷದ ಅವಧಿಯಲ್ಲಿ ನಾನು ನಿಮಗೆ ಹಲವಾರು ಬಾರಿ ನೆರವಾಗಿದ್ದೇನೆ. ಈಗಲೂ ನಿಮ್ಮ ಕಷ್ಟ ಸುಖಗಳ ಜೊತೆ ಇರುತ್ತೇನೆ ಎಂದು ಹೇಳಿದರ ಸಚಿವರು, ಕಳೆದ ದೀಪಾವಳಿ ಸಂದರ್ಭದಲ್ಲಿ ಹಬ್ಬ ಆಚರಿಸಲು ಮುಂಚಿತವಾಗಿ ನಿಮಗೆಲ್ಲ ಹಣ ಬಿಡುಗಡೆಗೊಳಿಸಿದ್ದೆ ಎಂದು ಸ್ಮರಿಸಿದರು. ನಿಮ್ಮ ಕಷ್ಟವನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ದೂರದ ಊರಿಂದ ಬಂದು, ಹೀಗೆ ದುಡಿಮೆಯ ಹಣವನ್ನು ಖರ್ಚು ಮಾಡಿಕೊಂಡು ಪ್ರತಿಭಟಿಸಬೇಡಿ. ಏನೇ ಇದ್ದರೂ ನೇರವಾಗಿ ನನ್ನ ಮನೆಗೆ ಬನ್ನಿ” ಎಂದು ಸಚಿವರು ಕಿವಿಮಾತು ಹೇಳಿದರು.

ಗೃಹಲಕ್ಷ್ಮಿ ಹಣವನ್ನು ಎಲ್ಲಾ ಬಿಸಿಯೂಟದ ಮಹಿಳಾ ನೌಕರರಿಗೆ ನೀಡಬೇಕು ಎಂದು ನಿಯೋಗವು ಸಚಿವರಿಗೆ ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಸಚಿವರು, “ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ನಿಮ್ಮ ಮನೆಯ ಆರ್ಥಿಕತೆಗೆ ಶಕ್ತಿ ತುಂಬಿವೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತರುತ್ತೇನೆ. ಸಾಧ್ಯತೆ ಇದ್ದರೆ ಗೃಹಲಕ್ಷ್ಮಿ ಹಣವನ್ನು ಕೊಡಿಸೋಣ” ಎಂದು ತಿಳಿಸಿದರು.

ನಿಯೋಗದಲ್ಲಿ ಸಂಘಟನೆಯ ಕಾರ್ಯದರ್ಶಿ ಶ್ರೀಮತಿ ಕಲ್ಪನಾ ವಿ ಜಿ, ಕಜಾಂಚಿ ಪುಷ್ಪಲತಾ ಸದಸ್ಯರಾದ ನಿರ್ಮಲಾ ರಾಮನಗರ, ಉಮಾದೇವಿ, ರಾಜೇಶ್ವರಿ ಪಾಟೀಲ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; NSUIನಿಂದ ವಿನೂತನ ‘ಜೀವಂತ ಶವ’ ಪ್ರತಿಭಟನೆ

ಮತದಾರರ ಹಕ್ಕುಗಳು ಮತ್ತು ಚುನಾವಣಾ ಪ್ರಕ್ರಿಯೆಯ ಮೇಲಿನ ಬೆದರಿಕೆಗಳನ್ನು ಖಂಡಿಸಿ, ಮುಖ್ಯ...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...