ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಓಡಾಟಕ್ಕೆ ಹೈಕೋರ್ಟ್ ಹಸಿರು ನಿಶಾನೆ

Date:

ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ರದ್ದುಗೊಳಿಸಿದೆ.

- Advertisement -

ಓಲಾ, ಊಬರ್ ಮತ್ತಿತರ ಅಗ್ರಿಗೇಟರ್‌ಗಳು ಸಲ್ಲಿಸಿದ ಮೇಲ್ಮನವಿಗಳನ್ನು ವಿಭಾಗೀಯ ಪೀಠ ಮಾನ್ಯ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಬಗ್ಗೆ ಬೈಕ್ ಮಾಲೀಕರು ಅಥವಾ ಅಗ್ರಿಗೇಟರ್ ಗಳು ಸಾರಿಗೆ ವಾಹನಗಳನ್ನಾಗಿ ಬಳಸಲು ಅನುಮತಿ ಕೋರಿ ಮನವಿ ಸಲ್ಲಿಸಬೇಕು. ಕಾನೂನಿನಡಿ ಸರ್ಕಾರ ಪರವಾನಿಗೆ‌ ನೀಡಬೇಕು ಎಂದು ವಿಭಾಗೀಯ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ತಡೆ ನೀಡಲಾಗಿತ್ತು. ಜೂನ್‌ನಲ್ಲಿ ಟ್ಯಾಕ್ಸಿ ಅಗ್ರಿಗೇಟರ್‌ಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆ ತರುವುದು ಆಡಳಿತವೇ?

ಹೈಕೋರ್ಟ್ ಆದೇಶವೇನು? :

ದ್ವಿಚಕ್ರ ವಾಹನ ಮಾಲಕರು ತಮ್ಮ ವಾಹನಗಳನ್ನು ಸಾರಿಗೆ ವಾಹನ (Transport Vehicle) ಎಂದು ನೋಂದಾಯಿಸಲು ಅರ್ಜಿ ಸಲ್ಲಿಸಲು ಮುಕ್ತರಾಗಿದ್ದಾರೆ. ಇಂತಹ ಅರ್ಜಿಗಳನ್ನು ಕಾನೂನು ಪ್ರಕಾರ ಪರಿಗಣಿಸಿ, ವಾಹನ ಮಾಲಕರಿಗೆ ಸಾರಿಗೆ ವಾಹನವಾಗಿ ನೋಂದಣಿ ನೀಡಲು ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ ಆಗಿ ಕಾರ್ಯನಿರ್ವಹಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪ್ರಸ್ತುತ ನಿಯಮಾವಳಿಗಳನ್ನು ಪರಿಶೀಲಿಸಬಹುದಾದರೂ, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನ ಅಥವಾ ಕಾಂಟ್ರಾಕ್ಟ್ ಕ್ಯಾರೇಜ್ ಆಗಿ ಬಳಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ‌ ಹೇಳಿದೆ.

ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 74(2)ರ ಪ್ರಕಾರ ಅಗತ್ಯವೆಂದು ಕಂಡುಬರುವ ಷರತ್ತುಗಳನ್ನು ವಿಧಿಸಬಹುದು. ಅಗ್ರಿಗೇಟರ್‌ಗಳು ಸಹ ಹೊಸದಾಗಿ ಅರ್ಜಿ ಸಲ್ಲಿಸಲು ಸ್ವತಂತ್ರರಾಗಿದ್ದು, ಅಂತಹ ಅರ್ಜಿಗಳನ್ನು ಈ ಆದೇಶದಲ್ಲಿ ನ್ಯಾಯಾಲಯದ ಅವಲೋಕನಗಳು ಹಾಗೂ ಕಾನೂನಿನ ಚೌಕಟ್ಟಿನಡಿಯಲ್ಲಿ ಪರಿಗಣಿಸಬೇಕು ಎಂದು ತಿಳಿಸಿರುವ ಹೈಕೋರ್ಟ್, ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸಿ, ಮೇಲ್ಮನವಿಗಳನ್ನು ಮಾನ್ಯ ಮಾಡಿದೆ. ವಿಸ್ತೃತ ತೀರ್ಪು ಲಭ್ಯವಾಗಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...