ವಿಡಿಯೊ ಕಾನ್ಫರೆನ್ಸ್‌ ಮೂಲಕ ಕಂದಾಯ ವ್ಯಾಜ್ಯಗಳ ವಿಚಾರಣೆ ನಡೆಸುವಂತೆ ಹೈಕೋರ್ಟ್‌ ಸೂಚನೆ

Date:

  • ಆರ್‌ಡಿಪಿಆರ್ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ
  • 8 ವಾರಗಳ ಒಳಗೆ ಸಮಗ್ರ ವರದಿ ಸಲ್ಲಿಸುವಂತೆ ತಾಕೀತು

ರಾಜ್ಯಾದ್ಯಂತ ಅರೆ ನ್ಯಾಯಿಕ ಪ್ರಾಧಿಕಾರಗಳಲ್ಲಿ ನಡೆಯುವ ಕಂದಾಯ ವ್ಯಾಜ್ಯಗಳ ವಿಚಾರಣೆಯನ್ನು ವಿಡಿಯೊ ಕಾನ್ಫರೆನ್ಸ್‌ (ವಿ.ಸಿ) ಮೂಲಕ ನಡೆಸಲು ಪರಿಶೀಲನೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಪಂಚಾಯಿತಿ ಅಧ್ಯಕ್ಷರು 2002ರ ಮಾರ್ಚ್‌ 7ರಂದು ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಬೊಮ್ಮೇನಹಳ್ಳಿ ಕೆಂಪೇಗೌಡ ಎಂಬುವವರ ಹೆಸರಿನಲ್ಲಿದ್ದ ಖಾತೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಮಂಡ್ಯ ಜಿಲ್ಲಾ ಪಂಚಾಯತ್‌ ಅಧ್ಯಕ್ಷರಿಗೆ ಕೆಂಪೇಗೌಡ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಕೆಯಾಗಿ 12 ವರ್ಷಗಳಿಗೂ ಹೆಚ್ಚು ಕಾಲ ಕಳೆದರೂ ವ್ಯಾಜ್ಯ ಬಗೆಹರಿದಿರಲಿಲ್ಲ. ಅಲ್ಲದೆ, ಕೆಂಪೇಗೌಡ ಕೂಡ ಮೃತಪಟ್ಟಿದ್ದರು.

ಅರ್ಜಿಯ ಯಾವುದೇ ವಿಚಾರಣೆ ನಡೆಯದೇ 111ಕ್ಕೂ ಹೆಚ್ಚು ಸಲ ದಿನಾಂಕಗಳನ್ನು ಮುಂದೂಡಲಾಗಿತ್ತು. ಇದೆಲ್ಲದರ ನಡುವೆ, ಅರ್ಜಿದಾರರಿಗೆ ಯಾವುದೇ ಮಾಹಿತಿ ನೀಡದೆ ಅವರ ಅನುಪಸ್ಥಿತಿಯಲ್ಲಿ ಪ್ರಕರಣ ಮುಕ್ತಾಯಗೊಳಿಸಲಾಗಿತ್ತು.

ಕೆಂಪೇಗೌಡರ ಪುತ್ರ ಮಂಜೇಗೌಡ ಅವರು ‘ಪಂಚಾಯತ್ ರಾಜ್‌ ಕಾಯ್ದೆ-1993’ರ ಪ್ರಕಾರ ಜಮೀನಿನ ಖಾತಾ ರದ್ದುಪಡಿಸುವ ಅಧಿಕಾರ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಅಧ್ಯಕ್ಷರಿಗೆ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಜೊತೆಗೆ ಅಧಿಕಾರ ವ್ಯಾಪ್ತಿ ಮೀರಿ ನಮ್ಮ ಪ್ರಕರಣವನ್ನು ವಿಲೇವಾರಿ ಮಾಡಲಾಗಿದೆ ಎಂದು ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ನೇತೃತ್ವದ ಏಕಸದಸ್ಯ ನ್ಯಾಯಪೀಠ, ಮಂಜೇಗೌಡರ ತಂದೆ ಹೆಸರಿನ ಖಾತೆ ರದ್ದುಪಡಿಸಲಾದ ಆದೇಶವನ್ನು ಅಮಾನ್ಯಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? : ಗದಗ | ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ: ಪಿಡಿಓ ಶೈನಾಜ್

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ‘ಹಳೆಯ ಕಂದಾಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಅರೆ ನ್ಯಾಯಾಂಗದ ಕಾರ್ಯಗಳನ್ನು ನಿರ್ವಹಣೆ ಮಾಡುವುದಕ್ಕೆ ಪ್ರತ್ಯೇಕ ತಂಡ ನೇಮಕ ಮಾಡುವ ಬಗ್ಗೆ ಪರಿಶೀಲಿಸಿ, 8 ವಾರಗಳ ಒಳಗೆ ಸಮಗ್ರ ವರದಿ ಸಲ್ಲಿಸಬೇಕು” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತಾಕೀತು ಮಾಡಿದೆ.

ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ‍ಪ್ರಕರಣಗಳ ವಿಚಾರಣೆ ನಡೆಯುತ್ತಿವೆ. ಇದೇ ರೀತಿಯಲ್ಲಿ ಇ–ಆಡಳಿತದ ಸಹಕಾರದಿಂದ ಅರೆ ನ್ಯಾಯಾಂಗ ಪ್ರಾಧಿಕಾರಗಳಲ್ಲಿಯೂ ‘ವಿಡಿಯೊ ಕಾನ್ಫ‌ರೆನ್ಸಿಂಗ್’ ವಿಚಾರಣೆ ನಡೆಸಲು ಸಾಧ್ಯವಿದೆಯೇ ಎಂದು ಪರಿಶೀಲಿಸುವಂತೆಯೂ ಸೂಚಿಸಿದೆ.

“ಅರೆನ್ಯಾಯಿಕ ಪ್ರಾಧಿಕಾರಗಳ ಮುಂದೆ ಬರುವ ಕಂದಾಯ ವ್ಯಾಜ್ಯಗಳ ವಿಚಾರಣೆಗಳನ್ನು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಯಾವುದೇ ಕಾರಣ ನೀಡದೇ ಮುಂದೂಡುವುದು ಅಸ್ಪಷ್ಟವಾಗಿದೆ. ಸೂಕ್ತ ಮತ್ತು ಅಗತ್ಯ ರೀತಿಯಲ್ಲಿ ವಿಚಾರಣೆ ನಡೆಸುತ್ತಿರುವುದು ನ್ಯಾಯಪೀಠದ ಗಮನಕ್ಕೆ ಬಂದಿದ್ದು, ಈ ಹಿಂದೆ ಕೂಡ ಇದೇ ರೀತಿ ನಡೆದುಬಂದಿದೆ” ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಅಂತರ್ಜಾತಿ ಪ್ರೇಮಿಗಳು ಕಾಣೆ; ಸಹೋದರನ ಆಟೋಗೆ ಬೆಂಕಿ ಹಚ್ಚಿದ ಸವರ್ಣೀಯರು

ಅಂತರ್ಜಾತಿಯ ಯುವಕ ತಮ್ಮ ಮಗಳನ್ನು ಪ್ರೀತಿಸಿ ಕರೆದುಕೊಂಡು ಹೋಗಿದ್ದಾನೆಂದು ಕುಪಿತಗೊಂಡ ಯುವತಿಯ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಳಗಾವಿ | ಇಂಗ್ಲಿಷ್‌ ಬ್ಯಾನರ್ ಹರಿದು ಕರವೇ ಕಾರ್ಯಕರ್ತರ ಆಕ್ರೋಶ; ವಶಕ್ಕೆ ಪಡೆದ ಪೊಲೀಸರು

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...