ವಿಧಾನಸಭೆಯಲ್ಲಿ ಅಕ್ರಮಗಳ ಮೇಲೆ ಚರ್ಚೆ: ಎಲ್ಲ ಪಕ್ಷಗಳ ನಾಯಕರು ಭಾಗಿ ಎಂದ ಗೃಹ ಸಚಿವರು

Date:

ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನದ ನಾಲ್ಕನೇ ದಿನವಾದ ಇಂದು ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು ಮತ್ತು ಆನ್‌ಲೈನ್ ಗ್ಯಾಂಬ್ಲಿಂಗ್ ಚಟುವಟಿಕೆಗಳ ಮೇಲೆ ಚರ್ಚೆ ನಡೆದಿದೆ.

- Advertisement -

ಅಧಿವೇಶನದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್‌ ಪವಾರ್‌ ನಿಧನರಾದ ಬಗ್ಗೆ ಸಂತಾಪ ಸೂಚಿಸಿದ ನಂತರ ಮುಖ್ಯ ಚರ್ಚೆಗಳು ಆರಂಭವಾದವು. ಅಕ್ರಮ ಚಟುವಟಿಕೆಗಳ ಹಿಂದೆ ಎಲ್ಲ ರಾಜಕೀಯ ಪಕ್ಷಗಳ ಪ್ರಭಾವಿಗಳೂ ಇದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸದನದಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರು ಅಕ್ರಮ ಮರಳು ಗಣಿಗಾರಿಕೆ ಮತ್ತು ಜೂಜು ಚಟುವಟಿಕೆಗಳ ಬಗ್ಗೆ ಪ್ರಶ್ನೆ ಎತ್ತಿದ್ದರು. ಇದಕ್ಕೆ ಉತ್ತರಿಸಿದ ಗೃಹ ಸಚಿವರು, “ಈ ಅಕ್ರಮಗಳಲ್ಲಿ ಎಲ್ಲ ಪಕ್ಷಗಳ ದೊಡ್ಡ ನಾಯಕರೂ ಶಾಮೀಲಾಗಿದ್ದಾರೆ. ಯಾವುದೇ ಪಕ್ಷಕ್ಕೆ ಇದು ಸೀಮಿತವಲ್ಲ. ಪ್ರಭಾವಿಗಳ ರಕ್ಷಣೆಯಲ್ಲಿ ಈ ಚಟುವಟಿಕೆಗಳು ನಡೆಯುತ್ತಿವೆ” ಎಂದು ಆರೋಪಿಸಿದರು. ಆದರೆ ಯಾರ ಹೆಸರುಗಳನ್ನು ಬಹಿರಂಗಪಡಿಸಲಿಲ್ಲ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯ ಪೊಲೀಸ್ ವ್ಯವಸ್ಥೆ ಕೆಡಲು ಕಾರಣರಾರು?

ಇದಕ್ಕೆ ತೀವ್ರ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್, “ಯಾರು ಆ ದೊಡ್ಡವರು? ಹೆಸರುಗಳನ್ನು ಹೇಳಿ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊ ತೆಗೆದುಕೊಳ್ಳಿ” ಎಂದು ಆಗ್ರಹ ವ್ಯಕ್ತಪಡಿಸಿದರು. ಇದರಿಂದ ಸದನದಲ್ಲಿ ಗದ್ದಲ ಉಂಟಾಗಿ, ಸ್ಪೀಕರ್ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕಾಯಿತು.

ಗೃಹ ಸಚಿವರು ಮತ್ತೆ ಸ್ಪಷ್ಟನೆ ನೀಡಿ, “ನಮಗೆ ಯಾವುದೇ ಮುಲಾಜಿಲ್ಲ. ಎಲ್ಲ ಶಾಸಕರೊಂದಿಗೆ ಸಭೆ ಕರೆದು ಮಾಹಿತಿ ಸಂಗ್ರಹಿಸಿ, ತಕ್ಷಣ ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...

E-KYC: ಸರ್ವರ್‌ಗಿಂತ ದೊಡ್ಡ ಸಮಸ್ಯೆ: ಜನರ ಬದುಕು

ಇ-ಕೆವೈಸಿ ಗಡುವು ವಿಸ್ತರಿಸಿದರೂ ಬದಲಾಗಬೇಕಿರುವುದು ವ್ಯವಸ್ಥೆ; ಕೊಡಗು-ಚಿಕ್ಕಮಗಳೂರು-ಚಾಮರಾಜನಗರದ ಗಡಿ ಹಳ್ಳಿಗಳವರೆಗೆ ತಲುಪಬೇಕಿದೆ...

ಟಿ ನರಸೀಪುರದಲ್ಲಿ ಪ್ರಚೋದನಕಾರಿ ಭಾಷಣ; ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಟಿ ನರಸೀಪುರದಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ...