ಹುಬ್ಬಳ್ಳಿ | ಜೀವ ಬೆದರಿಕೆ ಆರೋಪ; ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಎಫ್‌ಐಆರ್‌

Date:

ಕೊಳಚೆ ನಿರ್ಮೂಲನಾ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದ್ದು, ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್​ ಹಾನಗಲ್ ಹಾಗೂ ಲಕ್ಷ್ಮಣ ಭೋವಿ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಏನಿದು ಪ್ರಕರಣ?

ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ 2023ರ ಡಿ.30 ರಂದು ನಡೆದಿತ್ತು.

ಸಭೆಯ ವೇಳೆ, ನಗರದ ಕೃಷ್ಣಾ ಕಾಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂಬ ದೂರು ಕೇಳಿಬಂದಿತ್ತು. ಈ ಬಗ್ಗೆ ಪರಶುರಾಮ ದಾವಣಗೆರೆ ಎಂಬುವವರು ಅರ್ಜಿಯನ್ನು ಸಲ್ಲಿಸಿದ್ದರು.

ಪರಶುರಾಮ ದಾವಣಗೆರೆ ಅವರು ನೀಡಿದ ಅರ್ಜಿಯನ್ನು ಹಿಂಪಡೆಯುವಂತೆ ಲಕ್ಷ್ಮಣ ಭೋವಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

ಲಕ್ಷ್ಮಣ ಭೋವಿ ಉಪ ಮೇಯರ್ ಸತೀಶ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ ಕುಮ್ಮಕ್ಕಿನಿಂದ ನನಗೆ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿಯ ಸಚಿವ ಸಂಪುಟ ಸೇರಲಿದ್ದಾರಾ ಮಹಾರಾಷ್ಟ್ರದ ಸಂಸದೆ ರಕ್ಷಾ ಖಡ್ಸೆ?

ದೂರು ನೀಡಿದ ಆಧಾರದ ಮೇಲೆ ಆರೋಪಿತರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಪರಶುರಾಮ ಅವರು 4ನೇ ಎಸಿಜಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ 4ನೇ ಎಸಿಜಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ. ಇದೀಗ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...