ಫೆ. 26-27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ, 500ಕ್ಕೂ ಹೆಚ್ಚು ಕಂಪನಿಗಳು ಭಾಗಿ

Date:

ಯುವಜನರು ಸೇರಿದಂತೆ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಫೆ. 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.

- Advertisement -

ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ಯುವ ಸಮೃದ್ಧಿ ಸಮ್ಮೇಳನದ ಉದ್ಯೋಗ ಮೇಳ ಕುರಿತು ಬುಧವಾರ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಹಾಗೂ ಐಟಿ- ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, “ಇದೇ ತಿಂಗಳ 26 ಮತ್ತು 27ರಂದು ಬೆಂಗಳೂರಿನ ಅರಮನೆಯಲ್ಲಿ ಯುವ ಸಮೃದ್ಧಿ ಸಮ್ಮೇಳನ ಎಂಬ ಹೆಸರಿನಡಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿರುವ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿಕೊಡುವ ಮೇಳ ಇದಾಗಿದೆ” ಎಂದು ಹೇಳಿದರು.

“ಈಗಾಗಲೇ ಈ ಮೇಳಕ್ಕೆ ರಾಜ್ಯಾದ್ಯಂತ ಒಟ್ಟು 31 ಸಾವಿರ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ರಿಜಿಸ್ಟರ್ ಮೂಲಕ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವ ಸಾಧ್ಯತೆ ಇದೆ” ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

“ಉದ್ಯೋಗ ಮೇಳದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಹೆಸರಾಂತ 500ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. ಅಂದಾಜು ಒಂದು ಲಕ್ಷ ಹುದ್ದೆಗಳು ನಮ್ಮ ಬಳಿ ಲಭ್ಯವಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನು ಒದಗಿಸಿಕೊಡಲು ಇದು ವೇದಿಕೆಯಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು” ಎಂದು ಸಚಿವರು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

“ಉದ್ಯೋಗ ಮೇಳದಲ್ಲಿ ಅನುಕೂಲ ಕಲ್ಪಿಸುವ ಸದುದ್ದೇಶದಿಂದ 600ಕ್ಕೂ ಹೆಚ್ಚು ಸ್ಟಾಲ್‍ಗಳನ್ನು ಹಾಕಲಾಗಿದೆ. ಅಭ್ಯರ್ಥಿಗಳು ಪ್ರತಿಯೊಂದು ಸ್ಟಾಲಿಗೂ ಭೇಟಿ ನೀಡಿ, ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಎಲ್ಲಿ ಯಾವ ಹುದ್ದೆಗಳು ಖಾಲಿ ಇವೆ ಎಂಬುದರ ಕುರಿತು ಮಾಹಿತಿ ಪಡೆಯಬಹುದು. ಇದಕ್ಕಾಗಿ ಆಯಾ ಕಂಪನಿಗಳ ನುರಿತ ತಜ್ಞರು, ಪರಿಣಿತರು ಇರುತ್ತಾರೆ. ಉದ್ಯೋಗವನ್ನರಸಿ ಬರುವವರಿಗೆ ಸಂಪೂರ್ಣವಾದ ಮಾಹಿತಿ ಲಭ್ಯವಿರಲಿದೆ” ಎಂದು ಪಾಟೀಲ್ ಮಾಹಿತಿ ನೀಡಿದರು.

ದೊಡ್ಡ ಪ್ರಮಾಣದ ಉದ್ಯೋಗ ಮೇಳ: ಖರ್ಗೆ

“ದೇಶದಲ್ಲಿ ದೊಡ್ಡ ಪ್ರಮಾಣದ ಉದ್ಯೋಗ ಮೇಳ ನಡೆದಿದ್ದರೆ ಅದು ನಮ್ಮ ಸರ್ಕಾರದಿಂದ ಮಾತ್ರ. ಇಲ್ಲಿರುವ ಮಾನವ ಸಂಪನ್ಮೂಲ, ಮೂಲ ಸೌಕರ್ಯಗಳು ಸೇರಿದಂತೆ ಹಲವಾರು ಕಾರಣಗಳಿಂದ ದೊಡ್ಡ ದೊಡ್ಡ ಕಂಪನಿಗಳು ಮುಂದೆ ಬಂದಿವೆ. ಯುವಜನತೆ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು” ಎಂದು
ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

“ನಾವು ಕೇವಲ ಉದ್ಯೋಗ ಮಾತ್ರ ಕೊಡುತ್ತಿಲ್ಲ. ಅವರ ಸ್ಕಿಲ್ ಗ್ಯಾಪ್‍ಗಳನ್ನು ಸರಿಮಾಡಲು ನಾವು ಸೆಂಟರ್‌ ಗಳನ್ನು ಮಾಡಿಕೊಂಡಿದ್ದೇವೆ. ಇಲ್ಲಿ ನೋಂದಣಿ ಮಾಡಿಕೊಂಡವರನ್ನು ಟ್ರ್ಯಾಕ್ ಮಾಡಿ ಉದ್ಯೋಗ ಕೊಡಿಸುವ ಪ್ರಯತ್ನ ಮಾಡುತ್ತೇವೆ” ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.

“ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದ್ದು, ಪ್ರಧಾನಿ ಮಂತ್ರಿಗಳು 20 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ದರು. ಯಾವ ಉದ್ಯೋಗವನ್ನೂ ನೀಡಿಲ್ಲ. ಸುಮಾರು 40 ಸಾವಿರ ಉದ್ಯೋಗಗಳನ್ನು ನಾವು ಕಳೆದುಕೊಂಡಿದ್ದೇವೆ. ಎನ್‍ಎಸ್ ಓ ಸರ್ವೆ ಗಳಿಂದ ಬಂದಿರುವ ಮಾಹಿತಿ ಇದು. ಈ ವರದಿ ಬಂದ ಮೇಲೆ ಎನ್‍ಎಸ್‍ಓ ಸರ್ವೆಗಳು ನಿಲ್ಲಿಸಿಬಿಟ್ಟರು. ಯುಪಿಎ ಸರ್ಕಾರ 10 ಸಾವಿರ ಐಟಿಗಳನ್ನು ಸ್ಥಾಪನೆ ಮಾಡಿತ್ತು” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

“ಯುವ ಸಮೃದ್ದಿ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಸಮ್ಮೇಳನಕ್ಕೆ ಬರುವವರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಉಚಿತ ಬಸ್ ವ್ಯವಸ್ಥೆ

“ಉದ್ಯೋಗ ಮೇಳಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಬರುವ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಲು ಮೆಜೆಸ್ಟಿಕ್ ರೈಲ್ವೆ ಹಾಗೂ ಬಸ್ ನಿಲ್ದಾಣಗಳಿಂದ ಮತ್ತು ಶಾಂತಿ ನಗರ ಬಸ್ ನಿಲ್ದಾಣದಿಂದ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಉದ್ಯೋಗ ಮೇಳಕ್ಕಾಗಿ ವಿಶೇಷ ಬಸ್‍ಗಳು ಬರಲಿವೆ” ಎಂದು ಸಚಿವರು ವಿವರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...

ಮೈಸೂರು ದಸರಾ: ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕನಿಗೆ ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

ಮೈಸೂರಿನ ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಪೊಲೀಸರು ನಡೆಸಿದ ಲಘು ಲಾಠಿ...

ಬೆಂಗಳೂರು | ಮಧ್ಯರಾತ್ರಿ 3 ಗಂಟೆಯಾದರೂ ಪಟಾಕಿ ಸದ್ದು; ಫನ್ ವರ್ಲ್ಡ್ ವಿರುದ್ಧ ರಮ್ಯಾ ಕಿಡಿ

ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ...