‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ..’ ಬಿಜೆಪಿಯಿಂದ ಅಭಿಯಾನ; ವಿ.ಸುನಿಲ್ ಕುಮಾರ್ ಪೊಲೀಸ್‌ ವಶಕ್ಕೆ

Date:

ಹುಬ್ಬಳ್ಳಿಯಲ್ಲಿ ಶ್ರೀಕಾಂತ್‌ ಪೂಜಾರಿ ಬಂಧನ ಖಂಡಿಸಿ “ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ…” ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಅಭಿಯಾನ ಆರಂಭಿಸಿ, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

- Advertisement -

‘ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರ ಹಿಡಿದು ಪ್ರತಿಭಟನೆ ನಡೆಸುತ್ತ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ‌ಹೊರಹಾಕಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿ.ಸುನಿಲ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತ್ತ ರಾಜ್ಯ ಬಿಜೆಪಿ ಘಟಕ ಈ ಬಗ್ಗೆ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ, “ಶಾಂತಿಯುತವಾಗಿ ಪ್ರತಿಭಟಿಸುವವರನ್ನು ಬಂಧಿಸುವುದೇ ಸರ್ವಾಧಿಕಾರಿ ಕಾಂಗ್ರೆಸ್‌ ಸರ್ಕಾರದ ನಿಜಗುಣ. ಕರಸೇವಕರನ್ನು ಬಂಧಿಸಿರುವ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಮಾಜಿ ಸಚಿವರಾದ ಸುನಿಲ್‌ ಕುಮಾರ್‌ ಅವರನ್ನು ಏಕಾಏಕಿ ಬಂಧಿಸಿದ ತುಘಲಕ್ ಸರ್ಕಾರಕ್ಕೆ ಧಿಕ್ಕಾರ” ಎಂದು ಟೀಕಿಸಿದೆ.

“ಅಯೋಧ್ಯೆಯಲ್ಲಿ 1992ರಲ್ಲಿ ಭಾಗಿಯಾದ ಕರಸೇವಕರನ್ನು ದ್ವೇಷದ ರಾಜಕಾರಣಕ್ಕಾಗಿ ಬಂಧಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರೇ, ಕರಸೇವೆಯಲ್ಲಿ ಭಾಗಿಯಾದ ಎಲ್ಲ ಕರಸೇವಕರನ್ನು ಬಂಧಿಸುವ ತಾಕತ್ತು ನಿಮ್ಮ ನಿರ್ವೀರ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಇದೆಯೇ” ಎಂದು ಪ್ರಶ್ನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...