ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿ ಕೆ ಶಿವಕುಮಾರ್ ಬದ್ಧರಾಗಬೇಕು: ಸಿಎಂ ಸಿದ್ದರಾಮಯ್ಯ

Date:

ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

- Advertisement -

ಅವರು ಇಂದು ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಬಿಜೆಪಿ ಅಪಪ್ರಚಾರ
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.

ನುಡಿದಂತೆ ನಡೆಸಿದ್ದೇವೆ
ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ನ ಇತಿಹಾಸವನ್ನೇ ತಿರುಚುತ್ತಿರುವ ಭಾಗವತ್!

ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿ.ಕೆ. ಶಿವಕುಮಾರ್ ಬದ್ಧರಾಗಬೇಕು
ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ ಕೆ ಶಿವಕುಮಾರ್ ಒಪ್ಪಬೇಕು ಎಂದರು.

ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆಯುವೆವು
ಹೈ ಕಮಾಂಡ್ ಐದು ತಿಂಗಳ ಹಿಂದೆ ಭೇಟಿಯಾದಾಗ. ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...