ಬಿಜೆಪಿಯಿಂದ ಡಿಸಿಎಂ ಆಫರ್‌ ಇತ್ತು, ನಾನು ಜೈಲುವಾಸ ಆಯ್ದುಕೊಂಡೆ: ಡಿ ಕೆ ಶಿವಕುಮಾರ್‌

Date:

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉಳಿಸಲು ನಾನು ಪ್ರಯತ್ನಿಸುತ್ತಿದ್ದಾಗ, ಬಿಜೆಪಿಯ ಹಿರಿಯ ನಾಯಕರೊಬ್ಬರು ನನಗೆ ಉಪಮುಖ್ಯಮಂತ್ರಿ ಹುದ್ದೆಯ ಆಮಿಷವೊಡ್ಡಿದ್ದರು. ಅದಕ್ಕೆ ಒಪ್ಪದಿದ್ದಲ್ಲಿ ಜೈಲಿಗೆ ಕಳುಹಿಸುವುದಾಗಿ ಬೆದರಿಸಿದ್ದರು. ಆದರೆ, ನಾನು ನನ್ನ ಪಕ್ಷದ ನಿಷ್ಠೆಗೆ ಬದ್ಧನಾಗಿ ಜೈಲನ್ನೇ ಆಯ್ದುಕೊಂಡೆ,” ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಬಿಜೆಪಿಯ ಡಿಸಿಎಂ ಆಫರ್‌ ಬಗ್ಗೆ ಬಾಯಿಬಿಟ್ಟಿದ್ದಾರೆ.

- Advertisement -

ನಗರದ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಲೇಖಕ ಕೆ.ಎಂ. ರಘು ಅವರು ರಚಿಸಿದ ‘ಎ ಸಿಂಬಲ್‌ ಆಫ್‌ ಲಾಯಲ್ಟಿ ಡಿ.ಕೆ. ಶಿವಕುಮಾರ್‌’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. “ಒಂದು ವೇಳೆ ಅಂದು ನಾನು ಡಿಸಿಎಂ ಸ್ಥಾನಕ್ಕೆ ಆಸೆಪಟ್ಟು ಹೋಗಿದ್ದರೆ, ರಾಜ್ಯದ ರಾಜಕೀಯ ಚಿತ್ರಣವೇ ಇಂದು ಸಂಪೂರ್ಣವಾಗಿ ಬದಲಾಗಿರುತ್ತಿತ್ತು,” ಎಂದು ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ಸುಮಾರು ಮೂರು ದಶಕಗಳ ಕಾಲ ರಾಜಕೀಯವಾಗಿ ಹೋರಾಡಿದ್ದರೂ, 2018ರಲ್ಲಿ ಪಕ್ಷದ ನಾಯಕರ ಸೂಚನೆಯಂತೆ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಗೆ ಶ್ರಮಿಸಿದ್ದಾಗಿ ಶಿವಕುಮಾರ್ ನೆನಪಿಸಿಕೊಂಡರು. “ನಾನು ಕುಮಾರಸ್ವಾಮಿಯವರ ಕೈ ಹಿಡಿದು ಮೇಲೆತ್ತುವ ಸಂದರ್ಭವೂ ಬಂತು. ಆದರೆ, ನಾನು ಜೈಲಿಗೆ ಹೋದಾಗ, ‘ನಾವೇನು ದುಡ್ಡು ಹೊಡಿ ಎಂದು ಹೇಳಿದ್ದೆವಾ?’ ಎಂದು ಅವರೇ ನನ್ನನ್ನು ಅಣಕಿಸಿದ್ದು ಬಹಳ ನೋವುಂಟುಮಾಡಿತು,” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನೊಳಗೊಂದು ಆರೆಸ್ಸೆಸ್ ಆನೆ ಅವಿತಿರುವ ದುರಂತ!

ಸೋಲು, ಗೆಲುವು ಹಾಗೂ ಟೀಕೆಗಳನ್ನು ಸಮಾನವಾಗಿ ಸ್ವೀಕರಿಸುವುದಾಗಿ ಹೇಳಿದ ಅವರು, “ನನ್ನ ವಿರೋಧಿಗಳು ಮಾಡುವ ಆರೋಪಗಳು ಅವರಿಗೆ ಸಂತೋಷ ಕೊಡುತ್ತದೆ ಎಂದಾದರೆ ಅದನ್ನು ನಾನು ಸ್ವಾಗತಿಸುತ್ತೇನೆ. ಹಳ್ಳಿಯಿಂದ ಬಂದ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ ನನ್ನ ಕ್ಷೇತ್ರದ ಹಾಗೂ ರಾಜ್ಯದ ಜನತೆಗೆ ನಾನು ಸದಾ ಆಭಾರಿಯಾಗಿದ್ದೇನೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, “2023ರ ಚುನಾವಣೆಯಲ್ಲಿ 136 ಸ್ಥಾನ ಗೆಲ್ಲುವುದಾಗಿ ಹೇಳಿದ್ದ ಶಿವಕುಮಾರ್, ಅಂದೇ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ, ಅವರು ಇಂದಲ್ಲ ನಾಳೆ ಖಂಡಿತವಾಗಿಯೂ ಸಿಎಂ ಆಗುತ್ತಾರೆ,” ಎಂದು ಭವಿಷ್ಯ ನುಡಿದರು.

ಇದೇ ವೇಳೆ, ಪ್ರೊ. ಭಕ್ತರಹಳ್ಳಿ ಕಾಮರಾಜ್ ಅವರು, “ಬೆಂಗಳೂರಿನ ರಸ್ತೆಗಳ ಬಗ್ಗೆ ಎಲ್ಲರೂ ದೂರುತ್ತಿದ್ದಾರೆ. ದಯವಿಟ್ಟು ನಗರವನ್ನು ಶೀಘ್ರವಾಗಿ ಸುಸ್ಥಿತಿಗೆ ತನ್ನಿ,” ಎಂದು ಡಿಕೆಶಿಯವರಲ್ಲಿ ಮನವಿ ಮಾಡಿದರು.

ಖ್ಯಾತ ಸಾಹಿತಿ ಚಂದ್ರಶೇಖರ ಕಂಬಾರ ಮಾತನಾಡಿ, “ಸಾಮಾನ್ಯವಾಗಿ ರಾಜಕಾರಣಿಗಳು ಮತ್ತು ಸಾಹಿತಿಗಳ ನಡುವೆ ಆತ್ಮೀಯತೆ ಬೆಳೆಯುವುದಿಲ್ಲ. ಆದರೆ, ಡಿ.ಕೆ. ಶಿವಕುಮಾರ್ ಅವರೊಂದಿಗೆ ಮುಕ್ತವಾಗಿ ಬೆರೆಯಲು ಇಷ್ಟವಾಗುತ್ತದೆ. ಅವರ ವ್ಯಕ್ತಿತ್ವವೇ ಬಹಳ ವಿಭಿನ್ನವಾದದ್ದು,” ಎಂದು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ, ತಾವು ಬರೆದಿರುವ ಎರಡು ಪುಸ್ತಕಗಳ ಬಗ್ಗೆಯೂ ಶಿವಕುಮಾರ್ ಮಾಹಿತಿ ನೀಡಿದರು. “ಹಮೀದ್ ಪಾಳ್ಯ ಅವರ ಸಹಕಾರದೊಂದಿಗೆ ‘ನೀರಿನ ಹೆಜ್ಜೆ’ ಎಂಬ ಪುಸ್ತಕ ಬರೆದಿದ್ದೇನೆ. ಅದನ್ನು ನವೆಂಬರ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆ ಮಾಡಲಿದ್ದಾರೆ. ನಂತರ, ‘ಗಾಂಧಿ ಭಾರತ’ ಎಂಬ ಇನ್ನೊಂದು ಕೃತಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಲೋಕಾರ್ಪಣೆಗೊಳಿಸುವ ಸಿದ್ಧತೆಯಲ್ಲಿದ್ದೇವೆ,” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...