ನ.​ 24ರೊಳಗೆ ಕಾಂತರಾಜ್ ಜಾತಿ ಗಣತಿ ವರದಿ ಸಲ್ಲಿಸುತ್ತೇನೆ: ಜಯಪ್ರಕಾಶ್​ ಹೆಗ್ಡೆ

Date:

ಜಾತಿಗಣತಿ ವರದಿಗೆ ಒಕ್ಕಲಿಗರು ಸಭೆ ಸೇರಿ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೇ ಮಹತ್ವದ ಹೇಳಿಕೆ ನೀಡಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ, ‘ಕಾಂತರಾಜ ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯನ್ನು ನವೆಂಬರ್ 24ರೊಳಗೆ ಸರ್ಕಾರಕ್ಕೆ ಸಲ್ಲಿಕೆ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕೆಲದಿನಗಳ ಹಿಂದಷ್ಟೇ ಸಭೆ ನಡೆಸಿದ್ದ ಒಕ್ಕಲಿಗರ ಸಂಘ, ಜಾತಿಗಣತಿ ವರದಿ ಸ್ವೀಕರಿಸಿ ತಿರಸ್ಕರಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ತೀರ್ಮಾನಿಸಿತ್ತು. ಇದರ ಬೆನ್ನಲ್ಲೇ ಜಯಪ್ರಕಾಶ್​ ಹೆಗ್ಡೆಯವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಸೃಷ್ಟಿಸಿದೆ.

ಜಾತಿಗಣತಿ ವರದಿ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿರುವ ಜಯಪ್ರಕಾಶ್​ ಹೆಗ್ಡೆ, ‘ನಿರ್ಮಲಾನಂದ ಶ್ರೀಗಳು, ಈಶ್ವರಪ್ಪನವರೆಲ್ಲ ಯಾವ ಅರ್ಥದಲ್ಲಿ ಹೇಳಿದ್ದಾರೋ ಎನ್ನುವುದು ನನಗೆ ಗೊತ್ತಿಲ್ಲ. ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂತರಾಜ್‌ ವರದಿಗೆ ಬಲಿಷ್ಠರ ವಿರೋಧ ಸಾಮಾಜಿಕ ನ್ಯಾಯದ ವಿರೋಧ

‘ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮರು ಪರಿಶೀಲನೆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ವರದಿ ಸರಿ ಇಲ್ಲ ಎಂದು ಯಾವ ಆಧಾರದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ’ ಎಂದು ಹೇಳಿದ್ದಾರೆ.

ಜಾತಿಗಣತಿ ವಿಚಾರವಾಗಿ ಮಾತನಾಡಿದ್ದ ಸಚಿವ ಕೆಎಸ್ ಈಶ್ವರಪ್ಪ, ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು ಎಂದು ಹೇಳಿದ್ದರು. ಅಲ್ಲದೇ ಮಾಜಿ ಸಚಿವ ಕೆ.ಗೋಪಾಲಯ್ಯ, ಕಾಂತರಾಜ್ ವರದಿಯಿಂದ ಒಕ್ಕಲಿಗರಿಗೆ ನಷ್ಟವಾಗಲಿದೆ ಎಂದಿದ್ದರು.

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಜಾತಿ ಗಣತಿ ವರದಿ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ಬಳಿಕ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ‘ರೇವ್‌ ಪಾರ್ಟಿ’ ಪ್ರಕರಣಕ್ಕೆ...

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...

ಪಠ್ಯಪುಸ್ತಕ ಪರಿಷ್ಕರಣೆ | ಕೆಲವು ಪದ ಮತ್ತು ವಾಕ್ಯಗಳಲ್ಲಷ್ಟೇ ಬದಲಾವಣೆ: ಸಚಿವ ಮಧು ಬಂಗಾರಪ್ಪ

"ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು...