ನನ್ನ ಸೋಲಿಗೆ ಕಾರಣ ಯಾರು ಎಂದು ವಿಜಯೇಂದ್ರಗೆ ಗೊತ್ತಿದೆ, ಕ್ರಮ ಕೈಗೊಳ್ಳದಿದ್ದರೆ ಸಿಡಿದೇಳುವುದು ಖಚಿತ: ವಿ ಸೋಮಣ್ಣ ಎಚ್ಚರಿಕೆ

Date:

ನನ್ನ ಸೋಲಿಗೆ ಕಾರಣ ಯಾರು ಎಂಬುದು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಗೊತ್ತಿದೆ. ಅವರ ಮೇಲೆ ಶೀಘ್ರ ಕ್ರಮ ಆಗದಿದ್ದರೆ ನಾನು ಸಿಡಿದೇಳುವುದು ಖಚಿತ ಎಂದು ಮಾಜಿ ಸಚಿವ ವಿ ಸೋಮಣ್ಣ ಎಚ್ಚರಿಕೆ ನೀಡಿದರು.

- Advertisement -

ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಲೋಕಸಭೆ ಚುನಾವಣೆ ಇರುವುದರಿಂದ ಕೆಲ ವಿಚಾರ ಮಾತನಾಡಲ್ಲ. ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಂಡು, ಎಲ್ಲ ಸರಿಪಡಿಸುವುದು, ಬಿಡುವುದು ಅವರಿಗೆ ಬಿಟ್ಟಿದ್ದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಇನ್ನೂ ಯುವಕ. ಅವನು ಬೆಳೆಯಬೇಕು, ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದ್ದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು. ಇದರ ಮೇಲೆ ಅವರಿಗೇ ಅಂಟಿಕೊಂಡು ಹೋಗುತ್ತಾನೆ ಅಂದರೇ ನಾನು ಬೇರೆ ಮಾತಾಡಬೇಕಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

”ಆರ್‌ ಅಶೋಕ್ ಜೊತೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ. ಅವರು ನನ್ನ ಭೇಟಿಗೆ ಪ್ರಯತ್ನ ಮಾಡಿದ್ದರು. ನಾನು ಮತ್ತು ಅಶೋಕ್ ಸ್ನೇಹಿತರು. ಅಶೋಕ್ ಮೊದಲು ಶಾಸಕನಾದಾಗ ನಾನು ಮಂತ್ರಿಯಾಗಿದ್ದೆ. ವಿಪಕ್ಷ ನಾಯಕ ಅಶೋಕ್​ ನನಗಿಂತ 14 ವರ್ಷ ಚಿಕ್ಕವರು. ಅಶೋಕ್ ಮೇಲೆ ನನಗೆ ಪ್ರೀತಿ, ವಿಶ್ವಾಸ ಇದೆ. ನಮ್ಮವರಿಂದಲೇ ನೋವಾದಾಗ ನನ್ನ ಭಾವನೆ ಹೇಳಿಕೊಂಡಿದ್ದೇನೆ. ಸಂಕ್ರಾಂತಿ ಬಳಿಕ ಎಲ್ಲವೂ ಸುಖಾಂತ್ಯವಾಗಬೇಕು” ಎಂದು ಹೇಳಿದರು.

“ನಮ್ಮಂತಹವರ ಮೇಲೆ ಗದಾಪ್ರಹಾರ ಆದರೆ ಪರಿಣಾಮ ಬೇರೆಯೇ ಇರುತ್ತದೆ. ಎಷ್ಟರ ಮಟ್ಟಿಗೆ ಪರಿಣಾಮ ಆಗುತ್ತದೆ ಅಂತಾ ಯೋಚನೆ ಮಾಡಬೇಕು. ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಹಿಂದಿನದ್ದೇ ನಡೆಸಿಕೊಂಡು ಹೋಗುತ್ತೇನೆ ಎಂಬುದನ್ನು ಬಿಡಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...