‘ಮಹಾ’ ವಿಮೆ | ಆದೇಶ ವಾಪಸು ಪಡೆಯದಿದ್ದರೆ ಪರಿಣಾಮ ನೆಟ್ಟಗಾಗದು ಎಂದ ಸಿದ್ದರಾಮಯ್ಯ

Date:

  • ‘ಆರೋಗ್ಯ ವಿಮೆ ಜಾರಿ ಬಗ್ಗೆ ಬೊಮ್ಮಾಯಿ ಮಾತನಾಡಿ’
  • ‘ಮಹಾರಾಷ್ಟ್ರ ಸರ್ಕಾರ ಉದ್ಧಟತನ ಮೆರೆಯುತ್ತಿದೆ’

ರಾಜ್ಯದ ಗಡಿಯೊಳಗಿನ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಿರುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಗಡಿಯೊಳಗಿರುವ ಸುಮಾರು 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಕನ್ನಡಿಗರ ತೀವ್ರ ವಿರೋಧದ ಹೊರತಾಗಿಯೂ ರಾಜ್ಯದ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದ್ದು. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೆ ಇದ್ದರೆ ಪರಿಣಾಮ ನೆಟ್ಟಗಾಗದು” ಎಂದು ಎಚ್ಚರಿಕೆ ನೀಡಿದ್ದಾರೆ.

“ರಾಜ್ಯದಲ್ಲಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭರವಸೆ ನೀಡಿದ್ದರು. ಇವರಿಬ್ಬರ ಮಾತಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಕವಡೆ ಕಾಸಿನ ಕಿಮ್ಮತ್ತು ಕೊಟ್ಟಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಒಂದು ಸೀಟನ್ನೂ ಘೋಷಿಸಿಲ್ಲ, ಹೋಗಿ ಅವರನ್ನು ಪ್ರಶ್ನಿಸಿ; ಪತ್ರಕರ್ತನಿಗೆ ದೇವೇಗೌಡರ ಕುಟುಕು

“ರಾಜ್ಯದ ಗಡಿಯೊಳಗೆ ಆರೋಗ್ಯ ವಿಮೆ ಜಾರಿಗೆ ಮಹಾರಾಷ್ಟ್ರ ಸರ್ಕಾರ ಯತ್ನಿಸಿದಾಗಲೇ ನಾವು ವಿರೋಧಿಸಿದ್ದೆವು. ಅಲ್ಲಿಯ ವರೆಗೆ ತೆಪ್ಪಗಿದ್ದ ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಒತ್ತಡಕ್ಕೆ ಮಣಿದು ವೀರಾವೇಶದ ಮಾತುಗಳನ್ನಾಡಿದ್ದರು. ಆ ಆವೇಶ, ಬದ್ಧತೆಯನ್ನು ತೋರಿಸಬೇಕಾದ ಕಾಲ ಈಗ ಬಂದಿದೆ” ಎಂದು ಎಚ್ಚರಿಸಿದ್ದಾರೆ.

“ಗಡಿ ವಿವಾದ ಇತ್ಯರ್ಥಗೊಳ್ಳುವವರೆಗೆ ಎರಡೂ ರಾಜ್ಯಗಳು ವಿವಾದವನ್ನು ಕೆದಕಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಕೀತು ಮಾಡಿ ಎರಡೂ ರಾಜ್ಯಗಳ ಸದಸ್ಯರನ್ನೊಳಗೊಂಡ ಸಲಹಾ ಸಮಿತಿ ರಚಿಸಿದ್ದರು. ಆ ಸೂಚನೆಯನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಧಿಕ್ಕರಿಸಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಬೆಳಗಾವಿ ಗಡಿ ವಿವಾದ ನ್ಯಾಯಾಲಯದ ಕಟಕಟೆಯಲ್ಲಿದೆ. ಕನ್ನಡಿಗರಿಗೆ ನ್ಯಾಯ ಸಿಗುತ್ತದೆ ಎನ್ನುವ ಭರವಸೆ ನಮಗೆ ಇದೆ. ಈ ನಡುವೆ ರಾಜಕೀಯ ಲಾಭದ ದುರುದ್ದೇಶದಿಂದ ಮಹಾರಾಷ್ಟ್ರ ಆಗಾಗ ಗಡಿತಂಟೆಯನ್ನು ಕೆದಕುವ ಕಿಡಿಗೇಡಿತನ ಮಾಡುವುದು ಖಂಡನೀಯ. ಕನ್ನಡಿಗರು ಇದನ್ನು ಸಹಿಸುವುದಿಲ್ಲ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಚರಾಜ್ಯಗಳ ಫಲಿತಾಂಶ; ಜನರ ತೀರ್ಮಾನ ಗೌರವಿಸುತ್ತೇವೆ: ಸಿದ್ದರಾಮಯ್ಯ

ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದು, ಇನ್ನುಳಿದ ಮೂರು...

ಬೆಂಗಳೂರು | ನಿವೃತ್ತ ಐಎಎಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎಂದು 28...

ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಅವರಿಂದ ದೂರು ಚುನಾವಣಾ...