ಕಾಂಗ್ರೆಸ್‌ ಸರ್ಕಾರಕ್ಕೆ ಪ್ರತಿಯಾಗಿ ಅಧಿವೇಶನದಲ್ಲಿ ನಿರ್ಣಯ ಮಂಡಿಸಿದ ಬಿಜೆಪಿ

Date:

ತೆರಿಗೆ ಅನ್ಯಾಯ ವಿಚಾರವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಿರುವುದನ್ನು ವಿರೋಧಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧರಣಿ ಮುಂದುವರಿಸಿದರು.

- Advertisement -

ಹತ್ತು ನಿಮಿಷ ಕಲಾಪ ಮುಂದೂಡಿದ ಸಭಾಧ್ಯಕ್ಷ ಯು.ಟಿ. ಖಾದರ್, ತಮ್ಮ ಕಚೇರಿಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಮಧ್ಯೆ ಸಂಧಾನಕ್ಕೆ ಯತ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆದರೆ, ಬಿಜೆಪಿ ಸದಸ್ಯರು ಪಟ್ಟು ಸಡಿಲಿಸದ ಕಾರಣ ಸಂಧಾನ ಯತ್ನ ವಿಫಲವಾಯಿತು. ಪುನಃ ಕಲಾಪ ಆರಂಭವಾದಾಗಲೂ ವಿರೋಧ ಪಕ್ಷಗಳ ಸದಸ್ಯರು ಧರಣಿ‌ ಮುಂದುವರಿಸಿದರು. ಕೇಂದ್ರ ಸರ್ಕಾರದ ವಿರುದ್ಧದ ನಿರ್ಣಯಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.

“ಸದನದ ನಿಯಮಗಳನ್ನ ಗಾಳಿಗೆ ತೂರಿ ರಾಜ್ಯ ಕಾಂಗ್ರೆಸ್‌ ಸರ್ಕಾರ ತಂದ ಏಕಪಕ್ಷೀಯ, ರಾಜಕೀಯ ಪ್ರೇರಿತ ನಿರ್ಣಯ ಮಂಡಿಸಿದೆ” ಎಂದು ಆರೋಪಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌ ಅಶೋಕ್‌ ನಿರ್ಣಯ ಮಂಡಿಸಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಸಹಕಾರಿ ಒಕ್ಕೂಟ ವ್ಯವಸ್ಥೆಯ ಬಗ್ಗೆ ತೋರಿರುವ ಬದ್ಧತೆ, ಕರ್ನಾಟಕಕ್ಕೆ ನೀಡಿರುವ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಎನ್ ಡಿಎ ಮೈತ್ರಿಕೂಟದ ವತಿಯಿಂದ ಸದನದಲ್ಲಿ ನಿರ್ಣಯ ಮಂಡಿಸಿರುವ ಪ್ರತಿಯನ್ನು ಆರ್‌ ಅಶೋಕ್‌ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

“ತೆರಿಗೆ ಸಂಗ್ರಹ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ವಿಫಲವಾಗಿರುವ ಸಿಎಂ ಸಿದ್ದರಾಮಯ್ಯನವರು ತಮ್ಮ ತಪ್ಪುಗಳನ್ನು ಮರೆಮಾಚುವ ಉದ್ದೇಶದಿಂದ ಕೇಂದ್ರ ಸರ್ಕಾರವನ್ನ ಪದೇ ಪದೇ ದೂಷಿಸುವ ಪ್ರವೃತ್ತಿಯನ್ನು ಕೈಬಿಡಬೇಕೆಂದು ನಿರ್ಣಯದ ಮೂಲಕ ಒತ್ತಾಯ ಮಾಡಲಾಯಿತು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...