ಲೋಕಸಭಾ ಚುಣಾವಣೆ | 17 ಚುನಾವಣೆಗಳಲ್ಲಿ ಕರ್ನಾಟಕದಲ್ಲಿ ಎಲ್ಲ ಸ್ಥಾನಗಳನ್ನೂ ಒಂದೇ ಪಕ್ಷ ಗೆದ್ದಿದ್ದು ಒಮ್ಮೆ ಮಾತ್ರ

Date:

ಲೋಕಸಭಾ ಚುನಾವಣಾ ಕಾವು ರಂಗೇರಿದೆ. ಕರ್ನಾಟಕದ 28 ಸ್ಥಾನಗಳ ಪೈಕಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕೆಂದು ಕಾಂಗ್ರೆಸ್‌ ಭಾರೀ ಕಸರತ್ತು ನಡೆಸುತ್ತಿದೆ. ಇತ್ತ, ಬಿಜೆಪಿ-ಜೆಡಿಎಸ್‌ ಮೈತ್ರಿಯು ರಾಜ್ಯದ ಎಲ್ಲ ಕ್ಷೇತ್ರಗಳನ್ನು ಗೆಲ್ಲುತ್ತದೆ. ರಾಜ್ಯದಲ್ಲಿ ‘ಸ್ವೀಪ್’ ಮಾಡುತ್ತೇವೆಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಅದು ಅಷ್ಟು ಸುಲಭವಲ್ಲ ಎಂಬುದನ್ನು ರಾಜಕೀಯ ಇತಿಹಾಸ ಹೇಳುತ್ತಿದೆ.

- Advertisement -

ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕರ್ನಾಟಕದಲ್ಲಿ ಪಕ್ಷವೊಂದಕ್ಕೆ ಅಂತಹ ‘ಸ್ವೀಪ್‌’ ಮಾಡಲು ಸಾಧ್ಯವಾಗಿದ್ದು ಒಮ್ಮೆ ಮಾತ್ರ. 1971ರಲ್ಲಿ ತೀವ್ರ ವಿರೋಧದ ನಡುವೆ ಕಾಂಗ್ರೆಸ್ ಈ ಸಾಧನೆಯನ್ನು ಒಮ್ಮೆ ಮಾತ್ರ ಸಾಧಿಸಿದೆ. ಅದಾದ ಬಳಿಕ, ರಾಜ್ಯದ ಜನರು ಒಂದೇ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕರ್ನಾಟಕದಲ್ಲಿ ಈ ಬಾರಿ ಗೆಲುವು ನಮ್ಮದೇ, ಎಲ್ಲ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹೇಳಿಕೊಂಡಿದೆ. ಆದರೆ, ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಈ ಎರಡೂ ಪಕ್ಷಗಳಿಗೆ ಆ ದಿಗ್ವಿಜಯ ಸಾಧ್ಯವೇ? ಅದೂ, ಬಿಜಪಿ ನೇತೃತ್ವದ ಎನ್‌ಡಿಎ ಸರ್ಕಾರ 10 ವರ್ಷಗಳ ಕಾಲ ಅಧಿಕಾರ ನಡೆಸಿರುವ ಇಂತಹ ಸಮಯದಲ್ಲಿ ಎಂಬುದು ಗಮನಾರ್ಹ.

1951ರಿಂದ ಈವರೆಗಿನ ಚುನಾವಣಾ ಅಂಕಿಅಂಶಗಳ ಪ್ರಕಾರ, ಒಂದು ಪಕ್ಷ ಒಂದು ಬಾರಿ ಮಾತ್ರವೇ ರಾಜ್ಯದಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆ ಸಾಧನೆಯನ್ನು 1971ರಲ್ಲಿ ಕಾಂಗ್ರೆಸ್ ಮಾಡಿದೆ. ಇಂದಿರಾ ಗಾಂಧಿಯವರ ನಾಯಕತ್ವದಲ್ಲಿ ಕಾಂಗ್ರೆಸ್ ಬಡತನವನ್ನು ಕಡಿಮೆ ಮಾಡುವತ್ತ ಗಮನಹರಿಸುವ ಅಭಿಯಾನ ನಡೆಸಿತ್ತು. ಪಕ್ಷದಲ್ಲಿನ ವಿಭಜನೆಯನ್ನು ನಿವಾರಿಸಿಕೊಂಡಿತ್ತು. ಪರಿಣಾಮವಾಗಿ, ಹಿಂದಿನ ಚುನಾವಣೆಯಲ್ಲಿ ಕಳೆದುಕೊಂಡ ಅನೇಕ ಸ್ಥಾನಗಳನ್ನು ಮರಳಿ ಗಳಿಸುವ ಮೂಲಕ ಕಾಂಗ್ರೆಸ್‌ ಪ್ರಚಂಡ ವಿಜಯವನ್ನು ಗಳಿಸಿತು. ಕರ್ನಾಟಕದಲ್ಲಿ (ಮೈಸೂರು ರಾಜ್ಯ) 27ಕ್ಕೆ 27 ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದು ಬೀಗಿತ್ತು. ಆಗ 70.87% ಮತಗಳು ಕೈ ಪಕ್ಷದ ಪಾಲಾಗಿದ್ದವು.

ಆ ಚುನಾವಣೆಯಲ್ಲಿಯೂ ಕಾಂಗ್ರೆಸ್ – ತಮಿಳುನಾಡಿನ ಕೆ ಕಾಮರಾಜ್ ಮತ್ತು ಕರ್ನಾಟಕದಲ್ಲಿ ಎಸ್ ನಿಜಲಿಂಗಪ್ಪ ಅವರಂತಹ ಪ್ರಭಾವಿ ನಾಯಕ ತೀವ್ರ ವಿರೋಧವನ್ನು ಎದುರಿಸಿತ್ತು. 1969ರಲ್ಲಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆದ ಸಭೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ನಿರ್ಣಯ ಕೈಗೊಳ್ಳಲಾಗಿತ್ತು.

ಆದರೂ,  ‘ಗರೀಬಿ ಹಟಾವೋ’ ಘೋಷಣೆಯೊಂದಿಗೆ ಇಂದಿರಾ ಗಾಂಧಿ ಭಾರತದಾದ್ಯಂತ ಗೆಲ್ಲುವಲ್ಲಿ ಯಶಸ್ವಿಯಾದರು. ಆದರೆ, ಕೆಲವು ವರ್ಷಗಳ ನಂತರ ತುರ್ತುಪರಿಸ್ಥಿತಿ ಹೇರುವ ಮೂಲಕ ಚುನಾವಣಾ ದುರುಪಯೋಗದ ಆರೋಪಕ್ಕೆ ಗುರಿಯಾದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ವರ್ಷಗಳ ಬಳಿಕ ಏಪ್ರಿಲ್‌ನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು

ಕರ್ನಾಟಕವು ತನ್ನ ನೆರೆಯ ಆಂಧ್ರ ಮತ್ತು ತಮಿಳುನಾಡುಗಳಿಗಿಂತ ಭಿನ್ನವಾಗಿ ರಾಷ್ಟ್ರೀಯ ಮಟ್ಟದಲ್ಲಿ ಪ್ರಭಾವ ಬೀರಬಲ್ಲ ಪ್ರಬಲ ಪ್ರಾದೇಶಿಕ ಪಕ್ಷವನ್ನು ಕಟ್ಟುವಲ್ಲಿ ವಿಫಲವಾಗಿದೆ ಎಂಬುದು ರಹಸ್ಯವಲ್ಲ. ಆದರೆ, ಯಾವುದೇ ರಾಷ್ಟ್ರೀಯ ಪಕ್ಷ – ಕಾಂಗ್ರೆಸ್ ಅಥವಾ ಬಿಜೆಪಿ – ಚುನಾವಣೆಗಳನ್ನು ‘ಸ್ವೀಪ್’ ಮಾಡಲು ಅವಕಾಶ ಕೊಟ್ಟಿಲ್ಲ. ಅದರಲ್ಲಿ, ಪ್ರಾದೇಶಿಕ ಪಕ್ಷಗಳ ಪಾಲೂ ಗಮನಾರ್ಹವಾಗಿದೆ ಎಂಬುದು ಸತ್ಯ. ಇದೀಗ, ಪ್ರಮುಖ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ ರಾಷ್ಟ್ರೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡ ಹೊರತಾಗಿಯೂ ಅಂತಹ ಗೆಲುವು ಸಾಧ್ಯವಿಲ್ಲ ಎಂಬುದನ್ನು ಸದ್ಯದ ರಾಜಕೀಯ ಪರಿಸ್ಥಿತಿಗಳು ಸೂಚಿಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...