ಬೀದರ್‌ | ಅಲ್ಪಸಂಖ್ಯಾತರಿಗೆ ಪ್ರಚೋದಿಸಿ, ಬಹುಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಸಲು ಅವಕಾಶ ನೀಡುವುದು ಹೇಡಿತನ

Date:

Advertisements

ಬೀದರ್‌ ನಗರದ ಗುರುನಾನಕ ದೇವ ಕಾಲೇಜಿನಲ್ಲಿ ಯುವಕರು ಜೈಶ್ರೀರಾಮ ಹಾಡು ಹಾಕಿದಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ವಿರೋಧಿಸಿ, ಹಿಂದು ಯುವಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ, ಕೂಡಲೇ ಹಲ್ಲೆ ಮಾಡಿರುವ ಎಲ್ಲರನ್ನೂ ಬಂಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಪ್ರಚೋದಿಸಿ, ಬಹುಸಂಖ್ಯಾತರ ಮೇಲೆ ಹಲ್ಲೆ, ಕೊಲೆ, ದಬ್ಬಾಳಿಕೆ ನಡೆಸಲು ಅವಕಾಶ ನೀಡಿ ತನ್ನ ಹೇಡಿತನ ತೋರಿಸುತ್ತಿದೆ. ಬೀದರಿನ ಜಿಎನ್‌ಡಿ ಕಾಲೇಜಿನ ಘಟನೆ, ನ್ಯೂಟೌನ್ ಸಿಪಿಐ ಮೇಲೆ ರೌಡಿ ರಸೂಲ್ ಚಾಕು ಇರಿತ ಮತ್ತು ಚನ್ನಗಿರಿ ಪೋಲಿಸ್ ಸ್ಟೇಷನ್ ಮೇಲೆ ದಾಳಿಯನ್ನು ಕೇಂದ್ರ ಸಚಿವ ಖೂಬಾ ಖಂಡಿಸಿದ್ದಾರೆ.

“ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಗುರುನಾನಕ ಕಾಲೇಜಿಗೆ ತೆರಳಿ, ಹಲ್ಲೆ ಮಾಡಿರುವ ವಿದ್ಯಾರ್ಥಿಗಳಿಗೆ ರಕ್ಷಿಸುವಂತೆ ಕಾಲೇಜಿನವರಿಗೆ ತಿಳಿಸಿರುವುದು ನಾಚಿಕೆಗೇಡಿತನ ಮತ್ತು ಪಕ್ಷಪಾತ ಧೋರಣೆ ತೋರಿಸುತ್ತದೆ. ಇವರಿಗೆ ಹಿಂದೂ ಜನರು ಮತ ಹಾಕಿ ಗೆಲ್ಲಿಸಿದ್ದಕ್ಕೆ ಒಳ್ಳೆಯ ಉಪಕಾರ ಮಾಡುತ್ತಿದ್ದಾರೆ” ಎಂದು ಸಚಿವ ಖೂಬಾ ಆಕ್ರೋಶ ಹೊರಹಾಕಿದ್ದಾರೆ.

Advertisements

ಸಚಿವರಾದ ಈಶ್ವರ ಖಂಡ್ರೆ ಮತ್ತು ರಹೀಂ ಖಾನ್ ಒತ್ತಡಕ್ಕೆ ಮಣಿದು ಹಲ್ಲೆಗೊಳಗಾದ ಹಿಂದೂ ಯುವಕರ ಮೇಲೂ ಎಫ್‌ಐಆರ್ ಮಾಡಲಾಗಿದ್ದು, ಕೂಡಲೇ ಕೇಸ್‌ ವಾಪಸ್ ಪಡೆಯಬೇಕು. ಜಿಲ್ಲಾಡಳಿತವಾದರೂ ನ್ಯಾಯ ಕೊಡುವ ಕೆಲಸ ಮಾಡಬೇಕೆಂದು ಗುರುವಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ʼಎನ್‌ಎಸ್‌ಯುಐʼ ಕುಮ್ಮಕ್ಕು :

“ಸುಮಾರು ದಿನಗಳಿಂದ ಈ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿನಿಯರಿಗೆ ಅನ್ಯ ಕೋಮಿನವರು ಅನಗತ್ಯವಾಗಿ
ಚುಡಾಯಿಸುವುದು, ತೊಂದರೆ ಕೊಡುವುದು ಮಾಡುತ್ತಿದ್ದಾರೆ. ಹಿಂದೂ ಯುವಕರ ಜೊತೆ ವಿನಾಕಾರಣ ಜಗಳಕ್ಕೆ ಇಳಿಯುವುದು ಮಾಡುತ್ತಿದ್ದಾರೆ ಎಂದು ಯುವಕರು ನನ್ನ ಗಮನಕ್ಕೆ ತಂದಿದ್ದಾರೆ, ಇದಕ್ಕೆ ಎನ್‌ಎಸ್‌ಯುಐ ಕುಮ್ಮಕ್ಕು ನೀಡುತ್ತಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ ಚಲೋ | ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಹೋರಾಟಗಾರ್ತಿ ಕೆ ನೀಲಾ

ಇಂತಹ ಘಟನೆಗಳಿಗೆ ಕಾಲೇಜು ಆಡಳಿತ ಮಂಡಳಿ ಆಸ್ಪದ ನೀಡಬಾರದು. ಹಲ್ಲೆ ಮಾಡಿರುವ ವಿದ್ಯಾರ್ಥಿಗಳನ್ನು ಕೂಡಲೇ ಕಾಲೇಜಿನಿಂದ ಹೊರಹಾಕಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಪೋಷಕರಿಗೆ ತಿಳಿಸಲು ಕಾಲೇಜು ಆಡಳಿತ ಮಂಡಳಿ ಕ್ರಮ ತೆಗೆದುಕೊಳ್ಳಬೇಕೆಂದು ಎಂದು ಖೂಬಾ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X