ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂದ ಪುತ್ರ ಪ್ರಿಯಾಂಕ್‌ ಖರ್ಗೆ

Date:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಪ್ರಸ್ತಾವನೆ ವಿಚಾರವಾಗಿ ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂಬುದನ್ನು ಮಗ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ.

ಕಲಬುರಗಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ಪ್ರಧಾನಿ, ಉಪಪ್ರಧಾನ ಮಂತ್ರಿ ಯಾರಾಗಬೇಕು ಎಂಬ ವಿಚಾರ ಬಂದಾಗ ಆ ಸಮಾಜದ ನಾಯಕರಿಗೆ ಜಾತಿಯ ಲೇಪನ ಹಚ್ಚುವುದು ತಪ್ಪು. ಅವರೂ ಸಮರ್ಥರಲ್ಲವಾ? ಆ ಸಮುದಾಯದವರ (ಪರಿಶಿಷ್ಟ ಜಾತಿ) ದಕ್ಷತೆ ನೋಡುವುದಿಲ್ಲವಾ?” ಎನ್ನುವ ಮೂಲಕ ತಮ್ಮ ತಂದೆ ಪ್ರಧಾನಿ ಹುದ್ದೆಗೆ ಅರ್ಹ ವ್ಯಕ್ತಿ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

“ನರೇಂದ್ರ ಮೋದಿ ಅವರಿಗೆ ಸ್ಥಾನ ಮಾನ ಕೊಡಬೇಕಾದರೆ ಅವರ ಜಾತಿ ಕೇಳಲಿಲ್ಲ. ಅವರು ಎಷ್ಟು ಸಮರ್ಥರು ಎನ್ನುವುದನ್ನು ಕಳೆದ ಹತ್ತು ವರ್ಷಗಳಿಂದ ನೋಡುತ್ತಿದ್ದೇವೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೈತ್ರಿಕೂಟದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಸತ್ತಿಗೆ ಕಳುಹಿಸುವುದು ನಮ್ಮ ಮುಂದಿರುವ ಮುಖ್ಯ ಗುರಿ. ಯಾರು ಪ್ರಧಾನಿ, ಯಾರು ಉಪ ಪ್ರಧಾನಿ ಎಂಬ ಸವಾಲು ಸದ್ಯಕ್ಕೆ ನಮ್ಮ ಮುಂದೆ ಇಲ್ಲ. ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ 200ರಿಂದ 250 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರಾಷ್ಟ್ರಪತಿ, ಪ್ರಧಾನಿ, CJI ಇತ್ಯಾದಿ ಹುದ್ದೆಗೆ ಜಾತಿ, ಧರ್ಮ, ವೈಯಕ್ತಿಕ ಜೀವನ ಮುಖ್ಯವಲ್ಲ, ಉದಾಹರಣೆ ಡಾ// ಬಿ ಆರ್ ಅಂಬೇಡ್ಕರ್, ಅಬ್ದುಲ್ ಕಲಾಂ, ಇತ್ಯಾದಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...

ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

ಶುಕ್ರವಾರ ನಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ವೈಟ್...