ಆರ್‌ಟಿಐ ಅರ್ಜಿದಾರರನ್ನೇ ‘ಕಪ್ಪು ಪಟ್ಟಿ’ಗೆ ಸೇರಿಸಿ, ನಾಗರಿಕರ ಹಕ್ಕು ಹತ್ತಿಕ್ಕಲು ಮುಂದಾದ ಮಾಹಿತಿ ಆಯೋಗ

Date:

​ಮಾಹಿತಿ ಹಕ್ಕು ಕಾಯಿದೆಯಡಿ ಪ್ರಶ್ನೆ ಕೇಳುವ ನಾಗರಿಕರನ್ನು ‘ಕಪ್ಪು ಪಟ್ಟಿ’ಗೆ ಸೇರಿಸುತ್ತಿರುವ ಕರ್ನಾಟಕ ಮಾಹಿತಿ ಆಯೋಗದ ವಿಲಕ್ಷಣ ಮತ್ತು ಕಾನೂನು ಬಾಹಿರವಾಗಿದ್ದು, ಇಂತಹ ನಡವಳಿಕೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿ ನೀಡಬೇಕಾದ ಆಯೋಗವೇ ನಾಗರಿಕರ ಹಕ್ಕನ್ನು ಹತ್ತಿಕ್ಕಲು ಮುಂದಾಗಿದೆ ಎಂಬ ಆರೋಪಗಳು ವ್ಯಕ್ತವಾಗಿವೆ.

- Advertisement -

​​ಇತ್ತೀಚೆಗೆ ಕರ್ನಾಟಕ ಮಾಹಿತಿ ಆಯೋಗವು ನೀಡಿರುವ ಹಿಂಬರಹವೊಂದು(ಸಂಖ್ಯೆ: ಕಮಾಆ/605/ಮಾ.ಮಾ.ಹಿ/2025) ಸ್ವತಃ ಆಯೋಗದ ಮಿತಿಗಳನ್ನು ಬಯಲು ಮಾಡಿದೆ. ದ್ವಿತೀಯ ಮೇಲ್ಮನವಿ ಸಲ್ಲಿಸಿದ ನಂತರ ಅರ್ಜಿದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಅಥವಾ ಒಂದು ಅರ್ಜಿಗೆ ₹1,000 ದಂಡ ವಿಧಿಸಲು ಮಾಹಿತಿ ಹಕ್ಕು ಕಾಯಿದೆ 2005ರ ಯಾವುದೇ ಕಲಂ ಅಥವಾ ಸೆಕ್ಷನ್‌ನಲ್ಲಿ ಅವಕಾಶವಿಲ್ಲ ಎಂದು ಆಯೋಗವೇ ಒಪ್ಪಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಹೀಗಿದ್ದರೂ ಕೂಡಾ, ರಾಜ್ಯದ ಹಲವು ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಅರ್ಜಿದಾರರನ್ನು ಕಪ್ಪು ಪಟ್ಟಿಗೆ ಸೇರಿಸಿರುವುದು ಆಯೋಗದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ​​ಮಾಹಿತಿ ಕೇಳುವವರ ಮೇಲೆ ನಿರ್ಬಂಧ ಹೇರಲು ಹೊರಟಿದ್ದ ಅಧಿಕಾರಿಗಳಿಗೆ ಒರಿಸ್ಸಾ ಉಚ್ಛ ನ್ಯಾಯಾಲಯವು (WP (C) 29216/2025) ತಕ್ಕ ಪಾಠ ಕಲಿಸಿದೆ. ವರ್ಷಕ್ಕೆ ಕೇವಲ 12 ಅರ್ಜಿ ಸಲ್ಲಿಸಬೇಕು ಎಂಬ ಆಯೋಗದ ಆದೇಶವನ್ನು ನ್ಯಾಯಾಲಯವು ವಜಾಗೊಳಿಸಿದೆ.

​ನಾಗರಿಕರಿಗೆ ಮಾಹಿತಿ ಕೇಳುವ ಹವ್ಯಾಸವಿದ್ದರೂ ಕೂಡ, ಅವರ ಹಕ್ಕನ್ನು ಕಸಿದುಕೊಳ್ಳುವುದು ಕಾನೂನು ಬಾಹಿರವೆಂದು ನ್ಯಾಯಾಲಯ ಗುಡುಗಿದೆ. ಕರ್ನಾಟಕದ ಅಧಿಕಾರಿಗಳು ಇದೇ ಒರಿಸ್ಸಾ ಆಯೋಗದ ಹಳೆಯ ಆದೇಶವನ್ನು ಮುಂದಿಟ್ಟುಕೊಂಡು ಸಾವಿರಾರು ಅರ್ಜಿಗಳನ್ನು ತಿರಸ್ಕರಿಸುತ್ತಿರುವುದು ಈಗ ಕಾನೂನು ಸಂಕಷ್ಟಕ್ಕೆ ದಾರಿ ಮಾಡಿಕೊಟ್ಟಿದೆ. ​

​ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನದ ಮಧ್ಯ ಕರ್ನಾಟಕ ಪ್ರಾಂತ್ಯದ ಅಧ್ಯಕ್ಷ ಸಿ ಪಿ ತಿಪ್ಪೇಸ್ವಾಮಿ ಈ ಕುರಿತು ರಾಜ್ಯ ಮುಖ್ಯ ಮಾಹಿತಿ ಆಯುಕ್ತರಿಗೆ ಪತ್ರ ಬರೆದು ತೀವ್ರವಾಗಿ ಖಂಡಿಸಿದ್ದು, “ಒರಿಸ್ಸಾ ಉಚ್ಛ ನ್ಯಾಯಾಲಯದ ತೀರ್ಪು ನಾಗರಿಕರ ಹಕ್ಕನ್ನು ಎತ್ತಿ ಹಿಡಿದಿದೆ. ಕರ್ನಾಟಕದಲ್ಲಿ ಮಾಹಿತಿ ಅಧಿಕಾರಿಗಳು ಮನಬಂದಂತೆ ಅರ್ಜಿದಾರರನ್ನು ಕಪ್ಪು ಪಟ್ಟಿಗೆ ಸೇರಿಸಿರುವುದು ಕಾನೂನಿನ ಉಲ್ಲಂಘನೆ. ಕೂಡಲೇ ಇಂತಹ ಎಲ್ಲ ಕಾನೂನು ಬಾಹಿರ ‘ಕಪ್ಪು ಪಟ್ಟಿ’ಗಳನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಪಾಪನಾಶ ದೇವಸ್ಥಾನ ಪೂಜೆಗೆ ತೆರಳಿದ ಬಿಜೆಪಿ ಮುಖಂಡರು; ಅವಕಾಶ ನೀಡದ ಪೊಲೀಸರು

​ಮಾಹಿತಿ ಕೇಳುವುದು ನಾಗರಿಕರ ಸಾಂವಿಧಾನಿಕ ಹಕ್ಕು. ಅದನ್ನು ಹತ್ತಿಕ್ಕಲು ಕಪ್ಪು ಪಟ್ಟಿಯಂತಹ ಬೆದರಿಕೆ ತಂತ್ರಗಳನ್ನು ಬಳಸುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕಿದೆ. ಇಲ್ಲದಿದ್ದರೆ ಆರ್‌ಟಿಐ ಕಾಯಿದೆಯ ಮೂಲ ಆಶಯವೇ ಮಣ್ಣುಪಾಲಾಗಲಿದೆ.

ವರದಿ : ಜಗದೀಶ್‌ ನಗರಕೆರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...