ಅನಗತ್ಯ ನೀರು ಪೋಲು ತಡೆಗೆ ‘ವಾಟರ್‌ ಟ್ಯಾಪ್ ಮಾಸ್ಕ್‌’ ಅಳವಡಿಕೆ ಕಡ್ಡಾಯ: ಜಲಮಂಡಳಿ ಅಧ್ಯಕ್ಷ

Date:

  • ವಾಣಿಜ್ಯ ಮಳಿಗೆಗೆಳು, ಕೈಗಾರಿಕೆಗಳು, ಅಪಾರ್ಟ್‌ಮೆಂಟ್‌ಗಳು, ಐಷಾರಾಮಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಕಡ್ಡಾಯ
  • ಮನೆಗಳಲ್ಲಿ ಸ್ವಯಂ ಪ್ರೇರಿತವಾಗಿ ಏರಿಯೇಟರ್‌ ಅಳವಡಿಕೆಗೆ ಮನವಿ, ಕಡಿಮೆ ಬೆಲೆಯಲ್ಲಿ ಏರಿಯೇಟರ್‌ ಲಭ್ಯ
  • ವಾಷ್ ಬೇಸಿನ್, ಕಿಚನ್, ಕೈ ಮತ್ತು ಕಾಲು ತೊಳೆಯುವ ಸ್ಥಳಗಳು, ಸ್ವಚ್ಛತೆಗಾಗಿ ಮೀಸಲಿರುವ ನಲ್ಲಿಗಳಿಂದ ಹೆಚ್ಚಿನ ನೀರು ಪೋಲಾಗುವುದನ್ನು ತಡೆಯಲು ಕ್ರಮ

“ಅನಗತ್ಯವಾಗಿ ನೀರು ಪೋಲಾಗುವುದನ್ನ ತಡೆಯುವ ನಿಟ್ಟಿನಲ್ಲಿ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ಅಪಾರ್ಟ್‌ಮೆಂಟ್‌ಗಳಲ್ಲಿ, ಐಷಾರಾಮಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್‌ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ” ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದರು.

ಜಲಮಂಡಳಿ ಪ್ರಧಾನ ಕಚೇರಿಯಲ್ಲಿ ಬೆಂಗಳೂರು ನಗರ ಪ್ಲಂಬರ್‌ ಅಸೋಸಿಯೇಷನ್‌ ಪದಾಧಿಕಾರಿಗಳ ಜೊತೆ ಸಭೆಯಲ್ಲಿ ಮಾತನಾಡಿದ ಅವರು, “ಈ ಏರಿಯೇಟರ್‌ಗಳು ಕಡಿಮೆ ದರದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ನೀರಿನ ಬಿಲ್ ಅನ್ನು ಗಣನೀಯವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತವೆ” ಎಂದರು.

“ಏರಿಯೇಟರ್‌ ಅಳವಡಿಕೆ ಇಲ್ಲದೇ ಇರುವಂತಹ ನಲ್ಲಿಗಳಿಂದ ಹೆಚ್ಚಿನ ಪ್ರಮಾಣದ ನೀರು ಪೋಲಾಗುತ್ತದೆ. ಈ ನಲ್ಲಿಗಳಲ್ಲಿ ಏರಿಯೇಟರ್‌ ಅಳವಡಿಸುವುದರಿಂದ ಶೇಕಡಾ 60 ರಿಂದ 85 ರಷ್ಟು ನೀರಿನ ಉಳಿತಾಯ ಸಾಧ್ಯ. ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ ಬಳಿಸಿದಂತೆ “ವಾಟರ್‌ ಟ್ಯಾಪ್ ಮಾಸ್ಕ್‌” ಗಳನ್ನು ಬಳಸುವುದು ಅಗತ್ಯವಾಗಿದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಏರಿಯೇಟರ್ ಅಳವಡಿಸುವುದು ಬಹಳ ಸುಲಭ ಪ್ರಕ್ರಿಯೆ ಆಗಿದ್ದು, ಜನರು ತಾವೇ ಅಳವಡಿಸಿಕೊಳ್ಳಬಹುದು. ಅಗತ್ಯವಿದ್ದರೆ ಮಾತ್ರ ಪ್ಲಂಬರ್‌ಗಳ ಸಹಾಯ ಪಡೆಯಬಹುದು” ಎಂದು ಹೇಳಿದರು.

ಮಾರ್ಚ್‌ 21 ರಿಂದ 31ರ ವರೆಗೆ ಗಡುವು

“ಮಾರ್ಚ್‌ 21 ರಿಂದ ಮಾರ್ಚ್‌ 31ರ ವರೆಗೆ ಸ್ವಯಂ ಪ್ರೇರಿತರಾಗಿ ನಲ್ಲಿಗಳಿಗೆ ಏರಿಯೇಟರ್‌ ಅಳವಡಿಸುವುದನ್ನ ಕಡ್ಡಾಯಗೊಳಿಸಲಾಗಿದೆ. 10 ದಿನಗಳಲ್ಲಿ ತಮಗೆ ಸಿಗುವ ಏರಿಯೇಟರ್‌ಗಳನ್ನು ನಲ್ಲಿಗಳಿಗೆ ಅಳವಡಿಸಿಕೊಳ್ಳಬೇಕು. ಗಡುವಿನ ಅವಧಿಯಲ್ಲಿ ಈ ಏರಿಯೇಟರ್‌ (ವಾಟರ್‌ ಟ್ಯಾಪ್ ಮಾಸ್ಕ್‌ಗಳನ್ನು) ಅಳವಡಿಸಿಕೊಳ್ಳದೇ ಇರುವ ಕಟ್ಟಡ ಗಳಲ್ಲಿ ಜಲಮಂಡಳಿಯಿಂದ ಪರವಾನಗಿ ಹೊಂದಿರುವ ಪ್ಲಂಬರ್‌ಗಳ ಸಹಾಯದಿಂದ ಏರಿಯೇಟರ್‌ಗಳನ್ನು ಅಳವಡಿಸಲಾಗುವುದು ಮತ್ತು ಈ ವೆಚ್ಚವನ್ನು ಕಟ್ಟಡ ಮಾಲೀಕರಿಂದ ಭರಿಸುವಂತೆ ಸೂಚಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅಗತ್ಯ ಸೇವೆಗಳ ಗೈರು ಮತದಾರರಿಗೆ (ಎವಿಇಎಸ್‌) ಅಂಚೆ ಮತದಾನ ಸೌಲಭ್ಯ ವ್ಯವಸ್ಥೆ

ಮನೆಗಳಲ್ಲಿ ಸ್ವಯಂ ಪ್ರೇರಿತರಾಗಿ ಏರಿಯೇಟರ್‌ ಅಳವಡಿಕೆಗೆ ಮನವಿ

“ಮನೆಯಲ್ಲಿ ಕೈ ತೊಳೆಯುವ, ಪಾತ್ರೆ ತೊಳೆಯುವ, ಶವರ್, ವಾಷ್ ಬೇಸಿನ್ ನಲ್ಲಿಗಳು ಸೇರಿದಂತೆ ಅನಗತ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುವ ಕಡೆಗಳಲ್ಲಿ ಸಾರ್ವಜನಿಕರು ಏರಿಯೇಟರ್‌ಗಳನ್ನು ಅಳವಡಿಸಿಕೊಳ್ಳಬೇಕು. ಈ ಉಪಕರಣ ಮಾರುಕಟ್ಟೆಯಲ್ಲಿ 60 ರೂಪಾಯಿಯಿಂದ ಲಭ್ಯವಿದೆ. ಇದರಿಂದ ಜನರ ಮನೆಯಲ್ಲಿ ನೀರಿನ ಬಳಕೆ ಗಣನೀಯವಾಗಿ ಕಡಿಮೆಯಾಗುತ್ತದೆ. ಹಾಗೆಯೇ, ನೀರಿನ ಬಿಲ್‌ ಕೂಡಾ ಕಡಿಮೆ ಆಗುತ್ತದೆ” ಎಂದರು.

ಜಲಮಂಡಳಿಯಿಂದ ಪರವಾನಗಿ ಹೊಂದಿರುವ ಪ್ಲಂಬರ್‌ಗಳಿಗೆ ತರಬೇತಿ

“ಜಲಮಂಡಳಿಯಿಂದ ಪರವಾನಗಿ ಹೊಂದಿರುವಂತಹ 1,500 ಪ್ಲಂಬರ್‌ಗಳಿದ್ದಾರೆ. ಇವರು ತಾವು ಕೆಲಸ ಮಾಡುತ್ತಿರುವ ಹಾಗೂ ಮುಂದೆ ಮಾಡಲಿರುವ ಕಟ್ಟಡಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್‌ ಅಳವಡಿಸುವುದರ ಬಗ್ಗೆ ಮಾಲೀಕರಲ್ಲಿ ಜಾಗೃತಿ ಮೂಡಿಸಬೇಕು. ಉತ್ತಮ ಗುಣಮಟ್ಟದ “ವಾಟರ್‌ ಟ್ಯಾಪ್ ಮಾಸ್ಕ್‌ (ಏರಿಯೇಟರ್‌)” ಅಳವಡಿಸುವುದರಿಂದ ನೀರಿನ ಉಳಿತಾಯ ಸೇರಿದಂತೆ ಗ್ರಾಹಕರಿಗೆ ನೀರಿನ ಬಿಲ್‌ ಕೂಡಾ ಕಡಿಮೆಯಾಗುತ್ತದೆ” ಎಂದರು.

“ವಾಣಿಜ್ಯ ಮಳಿಗೆಗಳಲ್ಲಿ, ಕೈಗಾರಿಕೆಗಳಲ್ಲಿ, ಅಪಾರ್ಟ್‌ಮೆಂಟ್‌ಗಳಲ್ಲಿ, ಐಷಾರಾಮಿ ಹೋಟೆಲ್‌ಗಳು ಹಾಗೂ ರೆಸ್ಟೋರೆಂಟ್‌ಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಇದನ್ನು ಅಳವಡಿಸುವುದು ಕಡ್ಡಾಯವಾಗಿದೆ” ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದರು.

ಹೆಚ್ಚಿನ ಸಂಖ್ಯೆಯ ಏರಿಯೆಟರ್ ಅಳವಡಿಸುವ ಪ್ಲಂಬರ್‌ಗಳಿಗೆ ಪ್ರಶಂಸಾ ಪತ್ರ

“ಹೆಚ್ಚಿನ ಸಂಖ್ಯೆಯಲ್ಲಿ ಏರಿಯೆಟರ್‌ಗಳನ್ನು ಅಳವಡಿಸುವ ಪ್ಲಂಬರ್‌ಗಳನ್ನು ಪ್ರೋತ್ಸಾಹಿಸಲಾಗುವುದು. ಜಲಮಂಡಳಿಯ ಪರವಾನಗಿ ಹೊಂದಿರುವ ಪ್ಲಂಬರ್‌ಗಳು ಹೆಚ್ಚಿನ ಜನರನ್ನ ಈ ನಿಟ್ಟಿನಲ್ಲಿ ಪ್ರೇರೆಪಿಸಬೇಕು. ಈ ಮೂಲಕ ನೀರಿನ ಸದುಪಯೋಗವನ್ನು ಪ್ರೋತ್ಸಾಹಿಸುವುದು ನಮ್ಮ ಉದ್ದೇಶವಾಗಿದೆ” ಎಂದು ತಿಳಿಸಿದರು.

ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಇಂದಿನಿಂದಲೇ ಅಂದರೆ, ಮಾರ್ಚ್‌ 19ರಿಂದಲೇ ನಲ್ಲಿಗಳಿಗೆ ಏರಿಯೇಟರ್‌ ಅಳವಡಿಸುವ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಮಾರ್ಚ್‌ 19 ಮತ್ತು ಮಾರ್ಚ್‌ 20ರಂದು ಜಲಮಂಡಳಿಯ  ಇತರೆ ಕಚೇರಿಗಳಲ್ಲಿ ಏರಿಯೇಟರ್‌ ಅಳವಡಿಸಲು ಸೂಚನೆ ನೀಡಲಾಗಿದೆ. ಮಾರ್ಚ್ 21 ರಿಂದ ಇತರರಿಗೆ ಕಡ್ಡಾಯಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುರಹಂಕಾರಿಗಳಿಗೆ ಉತ್ತರ ಕೊಡಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ

ಎನ್​ಡಿಎ ಸರ್ಕಾರದ ಪ್ರಧಾನಿ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ...

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...