ಮಹಿಳೆಗೆ ಅಪಮಾನ, ಜಾತಿನಿಂದನೆ ಕೇಸ್: ಕೊನೆಗೂ ಪುನೀತ್‌ ಕೆರೆಹಳ್ಳಿ ಅರೆಸ್ಟ್‌

Date:

ಮಹಿಳೆಯ ಘನತೆಗೆ ಧಕ್ಕೆ ಬರುವಂತೆ ಪೋಸ್ಟ್ ಹಾಕಿ, ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ನಿಂದಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಪುನೀತ್‌ ಕೆರೆಹಳ್ಳಿ ಕೊನೆಗೂ ಬಂಧನಕ್ಕೆ ಒಳಗಾಗಿದ್ದಾರೆ.

ಈಗಾಗಲೇ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ಪುನೀತ್‌ ಕೆರೆಹಳ್ಳಿ 2013ರಲ್ಲಿ ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿ ಬಿದ್ದಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದ ಆ ಪ್ರಕರಣ ಖುಲಾಸೆಯಾಗಿರುವುದು ಇತ್ತೀಚೆಗೆ ಬಯಲಾಗಿತ್ತು. ಗೋ ರಕ್ಷಣೆ ಹೆಸರಲ್ಲಿ ಇದ್ರೀಸ್ ಪಾಷಾ ಎಂಬ ವ್ಯಕ್ತಿಯನ್ನು ಕೊಂದ ಆರೋಪವೂ ಪುನೀತ್‌ ಕೆರೆಹಳ್ಳಿ ಅಂಡ್ ಗ್ಯಾಂಗ್ ಮೇಲೆ ಇದೆ. ಜೊತೆಗೆ ವಿಧಾನಸೌಧಕ್ಕೆ ಕಲ್ಲು ಹೊಡೆಯುವ ಮತ್ತು ಬಸ್ಸಿಗೆ ಬೆಂಕಿ ಹಚ್ಚುವ ಬೆದರಿಕೆಯನ್ನು ಇತ್ತೀಚೆಗೆ ಹಾಕಿದ್ದರ ಕುರಿತು ಪ್ರಕರಣ ದಾಖಲಾಗಿತ್ತು.

ಇಂತಹ ಗಂಭೀರ ಪ್ರಕರಣಗಳ ಹಿನ್ನೆಲೆ ಇರುವ ಪುನೀತ್ ಕೆರೆಹಳ್ಳಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲವಾಗಿ ಬರೆಯುತ್ತಾ ಕನ್ನಡಪರ ಹೋರಾಟಗಾರ, ದಲಿತ ಮುಖಂಡ ಹರೀಶ್ ಭೈರಪ್ಪ ಅವರ ಕುರಿತು ಕೀಳುಮಟ್ಟದ ಭಾಷೆಯಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕಿದ್ದರು. ಈ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೈಲಿನಿಂದ ಬಿಡುಗಡೆಯಾದ ಬಳಿಕ ಗಾಂಧಿವಾದಿಯಂತೆ ಪ್ರತಿಭಟನೆಯನ್ನೂ ನಡೆಸಿ, ಬಿಜೆಪಿ ನಾಯಕರ ಬೆಂಬಲ ಗಿಟ್ಟಿಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಕೊನೆಗೂ ಬಂಧನವಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಕುರಿತು ಪ್ರತಿಕ್ರಿಯಿಸಿರುವ ಹರೀಶ್ ಭೈರಪ್ಪನವರು, “ಕೊನೆಗೂ ನನ್ನ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿ ಎನ್ನುವ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ. ನನ್ನ ಹಾಗೂ ನನ್ನ ಕುಟುಂಬದ ಮೇಲೆ ವೈಯಕ್ತಿಕ ದಾಳಿಗೆ ಇಳಿದು ತನ್ನ ಹೀನ ಮನಸ್ಥಿತಿಯನ್ನು ಪ್ರದರ್ಶನ ಮಾಡಿದ, ಸಂಘ ಪರಿವಾರದ ಮುಖಂಡ ಎಂದು ಹೇಳಿಕೊಳ್ಳುವ ವಿಕೃತ ಮನಸ್ಸಿನ ಹಿಂದೂ ಮುಖವಾಡದ ಕೊಲೆ ಆರೋಪಿ ಹಾಗೂ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿ ಸಮಾಜಘಾತಕ ಪುನೀತ್ ಕೆರೆಹಳ್ಳಿಯನ್ನು ನೆನ್ನೆಯಿಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದರು. ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೇಳಿದರು. ಪೊಲೀಸರ ಬೇಡಿಕೆ ಪುರಸ್ಕರಿಸಿದ ನ್ಯಾಯಾಧೀಶರ ಪುನೀತ್ ಕೆರೆಹಳ್ಳಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ಇದು ಹೋರಾಟಗಾರರ ಕುಟುಂಬವನ್ನ ಟಾರ್ಗೆಟ್ ಮಾಡುವ ವಿಕೃತ ಮನಸ್ಸಿನ ಹಿಂದೂ ಹೋರಾಟಗಾರರಿಗೆ ಪಾಠವಾಗಬೇಕು. ನಾನು ಹೋರಾಟದ ಜೀವನದಲ್ಲಿ ಎಲ್ಲಾ ಅವಮಾನಗಳನ್ನು ಟೀಕೆಗಳನ್ನ ಅನುಭವಿಸಿದ್ದೇನೆ. ಇನ್ನು ಮುಂದೆಯೂ ಅನುಭವಿಸಲು ತಯಾರಿದ್ದೇನೆ. ಯಾಕೆಂದರೆ ಒಂದು ಸಿದ್ದಾಂತಕ್ಕೆ ಬದ್ಧನಾಗಿರುವ ನಾನು ಎಲ್ಲರಿಗೂ ಒಳ್ಳೆಯವನಾಗಲು ಸಾಧ್ಯವಿಲ್ಲ. ಬಲಪಂಥೀಯರು ನನ್ನನ್ನು ವಿರೋಧಿಸುತ್ತಾರೆ ಎಂದರೆ ನಾನು ಬಾಬಾ ಸಾಹೇಬರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇನೆ ಎಂದರ್ಥ” ಎಂದು ಹೇಳಿದ್ದಾರೆ.

“ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿಯ ಒಂದಷ್ಟು ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಒಂದಷ್ಟು ಮುಖಂಡರು ನನ್ನ ವಿರುದ್ಧ ಬರೆದಿರುವ ಆ ಅಸಹ್ಯಕರವಾದ ಭಾಷೆಯನ್ನು ಯಾರು ಬೆಂಬಲಿಸಿಲ್ಲ. ಈ ವಿಚಾರವಾಗಿ ಇವನ ಜೊತೆ ನಾವು ನಿಲ್ಲಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂಬ ಮಾಹಿತಿ ನನಗಿದೆ. ಈ ರೀತಿಯಾದ ಒಂದು ನೈತಿಕತೆಯ ತೀರ್ಮಾನ ತೆಗೆದುಕೊಂಡಿದ್ದರೆ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ” ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಏನಿದು ಪುನೀತ್ ಕೆರೆಹಳ್ಳಿ ಪ್ರಕರಣ?: ಪೂರ್ವ ವಿವರಗಳಿಗೆ ’ಇಲ್ಲಿ ಕ್ಲಿಕ್’ ಮಾಡಿ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...