ಐಪಿಎಲ್ ಬೆಟ್ಟಿಂಗ್ | ಸಾಲಕ್ಕೆ ತುತ್ತಾಗಿ ರಾಯಚೂರಿನ ಯುವಕ ಆತ್ಮಹತ್ಯೆ

Date:

Advertisements

ಐಪಿಎಲ್‌ ಬೆಟ್ಟಿಂಗ್ ದಂಧೆ ತಡೆಯಲು ಕರ್ನಾಟಕ ಪೊಲೀಸರು ಎಷ್ಟೇ ಕ್ರಮವಹಿಸಿದರೂ ತಡೆಯಲಾಗುತ್ತಿಲ್ಲ. ಮೊಬೈಲ್ ಆ್ಯಪ್‌ ಮೂಲಕ ಅಕ್ರಮವಾಗಿ ಐಪಿಎಲ್ ಬೆಟ್ಟಿಂಗ್ ದಂಧೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಶ್ರಮವಿಲ್ಲದೇ, ಹಣ ಗಳಿಸುವ ದುರಾಸೆಯಿಂದ ಐಪಿಎಲ್‌ ಬೆಟ್ಟಿಂಗ್‌ನಲ್ಲಿ ತೊಡಗಿಕೊಳ್ಳುವ ಯುವಕರು ಹಣವನ್ನೇಲ್ಲ ಕಳೆದುಕೊಳ್ಳುತ್ತಿದ್ದಾರೆ. ಇದರ ಜತೆಗೆ ಮೈ ತುಂಬಾ ಸಾಲ ಮಾಡಿಕೊಂಡು ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ.

ಇದೀಗ, ಇಂತಹದ್ದೆ ಒಂದು ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ. 29 ವರ್ಷದ ಮುದಿಬಸವ ಎಂಬ ಯುವಕ ಐಪಿಎಲ್‌ ಬೆಟ್ಟಿಂಗ್‌ ಕಟ್ಟಿದ್ದಾನೆ. ಆದರೆ, ಬೆಟ್ಟಿಂಗ್ ಕಟ್ಟಿದ ಎಲ್ಲ ಮ್ಯಾಚ್‌ಗಳು ಸೋತಿದ್ದವು. ಇದರಿಂದ ಯುವಕ ಹೆಚ್ಚಾಗಿ ಸಾಲ ಮಾಡಿಕೊಂಡಿದ್ದನು. ಸಾಲಗಾರರ ಕಿರುಕುಳ ತಾಳಲಾರದೇ ನಗರದ ಲಾಡ್ಜ್‌ವೊಂದರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಯುವಕ ಮೂಲತಃ ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದವನು. ಬೆಟ್ಟಿಂಗ್‌ನಿಂದ ಸೋತ ನಂತರ ಹಣ ಪಾವತಿಸಲಾಗದೆ ಯುವಕ ಕಿರುಕುಳಕ್ಕೆ ಒಳಗಾಗಿದ್ದ ಎನ್ನಲಾಗಿದೆ. ಸಾಲಗಾರರ ಕಾಟಕ್ಕೆ ಬೇಸತ್ತ ಮುದಿಬಸವ ಮನನೊಂದು ಸಿಂಧನೂರು ನಗರದ ಸಾಯಿ ರೆಸಿಡೆನ್ಸಿ ಲಾಡ್ಜ್‌ನ ರೂಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೂಮಿನ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡು ಲಾಡ್ಜ್‌ ಸಿಬ್ಬಂದಿ ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Advertisements

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಸಿಂಧನೂರು ನಗರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಘಟನೆ ಸಂಬಂಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಸಾಂಕ್ರಾಮಿಕವಾಗಿ ಹಬ್ಬಿದ ಐಪಿಎಲ್‌ ಬೆಟ್ಟಿಂಗ್

ರಾಯಚೂರು ಜಿಲ್ಲೆಯಾದ್ಯಂತ ಐಪಿಎಲ್‌ ಬೆಟ್ಟಿಂಗ್ ಸಾಂಕ್ರಾಮಿಕವಾಗಿ ಹಬ್ಬಿದೆ. ಮೊಬೈಲ್ ಆಪ್ ಮೂಲಕ ಯಾವುದೇ ಸ್ಥಳದಲ್ಲಿ ಕುಳಿತು ಬೆಟ್ಟಿಂಗ್ ತೊಡಗಿಕೊಳ್ಳಬಹುದಾದ್ದರಿಂದ ಅತಿ ಹೆಚ್ಚು ಯುವಕರು ಬೆಟ್ಟಿಂಗ್‌ನಲ್ಲಿ ತೊಡಗಿಕೊಂಡು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಾವಳಿ ನಡೆದಾಗ ಬೆಟ್ಟಿಂಗ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಬುಕ್ಕಿಗಳು ಯುವಕರನ್ನು ಗುರುತಿಸಿ ಹಣದ ಆಮಿಷ ಒಡ್ಡಿ ಬೆಟ್ಟಿಂಗ್ ಖೆಡ್ಡಾಕ್ಕೆ ಸಲೀಸಾಗಿ ಬೀಳಿಸಿಕೊಳ್ಳುತ್ತಿದ್ದಾರೆ. ರಾಜ್ಯದ ಹಲವೆಡೆ ಬೆಟ್ಟಿಂಗ್ ದಂಧೆ ಅವ್ಯಾಹತವಾಗಿ ನಡೆದಿದ್ದು, ಪಾಲಕರ ಆತಂಕಕ್ಕೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ ಖರೀದಿ; ವಿದೇಶಕ್ಕೆ ಸಿಮ್ ರವಾನೆ ಮಾಡುತ್ತಿದ್ದವನ ಬಂಧನ

ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆಕೋರರು ತರಹೇವಾರಿ ಆ್ಯಪ್‌ಗಳ ಮೂಲಕ ದಂಧೆ ಶುರು ಮಾಡಿಕೊಂಡಿದ್ದಾರೆ. ಗ್ರಾಹಕರ ಮೊಬೈಲ್‌ಗೆ ಬೆಟ್ಟಿಂಗ್ ಆ್ಯಪ್ ಡೌನ್‌ಲೋಡ್ ಮಾಡಿಕೊಡುತ್ತಾರೆ. ಫೋನ್ ಪೇ, ಗೂಗಲ್ ಪೇ, ಪೇಟಿಎಂ, ತರ ಆ್ಯಪ್‌ಗಳ ಮೂಲಕ ಆನ್‌ ಲೈನ್ ಮೂಲಕವೇ ಹಣ ವರ್ಗಾಯಿಸಿಕೊಳ್ಳುತ್ತಾರೆ. ಜಿಲ್ಲೆಯಲ್ಲಿ ನಾಲ್ಕು ವರ್ಷಗಳಲ್ಲಿ ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳಲ್ಲಿ 22 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದು, ಈ ಕೇಸ್‌ಗಳಲ್ಲಿ 27 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟಾರೆ ₹1.04 ಲಕ್ಷ ವಶಪಡಿಸಿಕೊಳ್ಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X