ನಿವೃತ್ತಿಗೂ ಎರಡು ತಿಂಗಳು ಮೊದಲೇ ಐಪಿಎಸ್‌ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ

Date:

ನಿವೃತ್ತಿಗೂ ಎರಡು ತಿಂಗಳು ಮೊದಲೇ ಕರ್ನಾಟಕದ ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕರ್ನಾಟಕದ ಕೂಲ್ಐಪಿಎಸ್ಅಧಿಕಾರಿಗಳಲ್ಲಿ ಒಬ್ಬರಾದ ಪ್ರತಾಪ್ರೆಡ್ಡಿ ಅವರು ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ವರ್ಷ ಮೇ ತಿಂಗಳು ನಿವೃತ್ತರಾಗುತ್ತಿದ್ದರು. ಆದರೆ, ವೈಯಕ್ತಿಕ ಕಾರಣ ನೀಡಿ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ರಾಜೀನಾಮೆ ರಾಜ್ಯ ಪೊಲೀಸ್ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಪ್ರತಾಪ್ ರೆಡ್ಡಿ ಅವರ ಹಿನ್ನೆಲೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಾಪ್ ರೆಡ್ಡಿ ಅವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. 1964ರ ಜುಲೈ 1ರಲ್ಲಿ ಜನಿಸಿದ ಅವರು ಬಿ.ಟೆಕ್ ಪದವೀಧರರು. 1991ರಲ್ಲಿ ಕರ್ನಾಟಕ ಕೆಡರ್ ಐಪಿಎಸ್ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿದರು. ಕರ್ನಾಟಕದಲ್ಲಿ ಹಾಸನ ಜಿಲ್ಲೆಯಲ್ಲಿ ಸಹಾಯಕ ಸೂಪರಿಟೆಂಡೆಂಟ್ಆಗಿ ಪ್ರತಾಪ್ರೆಡ್ಡಿ ಅವರು ಕೆಲಸ ಆರಂಭಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್‌ಪಿಯಾಗಿ, ಸಿಐಡಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಭೇದಿಸಿದ್ದಾರೆ.

ಬ್ಯಾಂಕಿಂಗ್ ವಂಚನೆಗಳು, ಸೈಬರ್ ಕ್ರೈಂಗಳಲ್ಲಿ ಅವರು ಅಪಾರವಾದ ಜ್ಞಾನವನ್ನು ಹೊಂದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಅವರನ್ನು ಕಮಲ್ ಪಂತ್ ಅವರ ಬಳಿಕ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿತ್ತು. ಬಳಿಕ ಅವರನ್ನು ವರ್ಗಾವಣೆ ಮಾಡಿ ದಯಾನಂದ್ ಅವರನ್ನು ನಗರ ಪೊಲೀಸ್ ಆಯುಕ್ತರಾಗಿ ಸರ್ಕಾರ ನೇಮಕ ಮಾಡಿತ್ತು. ಸಿ.ಎಚ್.ಪ್ರತಾಪ್ ರೆಡ್ಡಿ ಅವರು ಸಿಬಿಐನಲ್ಲಿಯೂ ಕೆಲಸ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರೀತಿಸಿದ ಯುವತಿಗೆ ಮತ್ತೊಬ್ಬನೊಂದಿಗೆ ವಿವಾಹೇತರ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

ಸಿ.ಎಚ್.ಪ್ರತಾಪ್ ರೆಡ್ಡಿ ಅವರು ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಮುಂಬೈ ಮತ್ತು ಬೆಂಗಳೂರು ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಬ್ಯಾಂಕಿಂಗ್ ಮತ್ತು ಸೈಬರ್ ಸೆಕ್ಯುರಿಟಿ ವಿಭಾಗದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿಯೂ ಗುರುತಿಸಿಕೊಂಡಿದ್ದರು. ಪ್ರತಾಪ್ರೆಡ್ಡಿ ಅವರು ರಾಷ್ಟ್ರಪತಿ ಪದಕ ಮತ್ತು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ತಿ ತೆರಿಗೆ | ಓಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ

ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ 'ಒನ್ ಟೈಮ್ ಸೆಟ್ಲ್ ಮೆಂಟ್'(OTS)...

ಕಾಂಗ್ರೆಸ್‌ ಸರ್ಕಾರಕ್ಕೆ ಪ್ರತಿಯಾಗಿ ಅಧಿವೇಶನದಲ್ಲಿ ನಿರ್ಣಯ ಮಂಡಿಸಿದ ಬಿಜೆಪಿ

ತೆರಿಗೆ ಅನ್ಯಾಯ ವಿಚಾರವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ಖಂಡನಾ...

ಇಂಡಿಯಾ ಒಕ್ಕೂಟಕ್ಕೆ ಹೆದರಿ ಅರವಿಂದ್ ಕೇಜ್ರಿವಾಲ್‌ ಬಂಧಿಸಲು ಕೇಂದ್ರದಿಂದ ಸಂಚು: ಮೋಹನ್ ದಾಸರಿ

"ಇಂಡಿಯಾ ಒಕ್ಕೂಟದಲ್ಲಿ ಎಎಪಿ-ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ...

ಮಂಡ್ಯ | ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ: ಸುಮಲತಾ ಅಂಬರೀಶ್

ನಿನ್ನೆ(ಫೆ.22) ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ...