ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯಾ ಆರಗ ಜ್ಞಾನೇಂದ್ರ ಅವರೇ?: ಕಾಂಗ್ರೆಸ್‌ ಕಿಡಿ

Date:

  • ʼಜಾನುವಾರು ವ್ಯಾಪಾರಿಯನ್ನು ಹತ್ಯೆಗೈದ ಕೊಲೆಗಡುಕನ ಬಂಧನ ಯಾಕಿಲ್ಲ?ʼ
  • ಆರಗ ಜ್ಞಾನೇಂದ್ರ ಅವರು ಕೊಲೆ ಆರೋಪಿಯ ರಕ್ಷಣೆಗೆ ನಿಂತಿದ್ದಾರೆಯೇ: ಪ್ರಶ್ನೆ

“ಒಬ್ಬ ಕೊಲೆ ಆರೋಪಿಯನ್ನು ಬಂಧಿಸಲಾಗಿಲ್ಲ ಅಂದರೆ ಏನರ್ಥ? ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯೇ ಆರಗ ಜ್ಞಾನೇಂದ್ರ ಅವರೇ?” ಎಂದು ಕಾಂಗ್ರೆಸ್‌ ಟೀಕಿಸಿದೆ.

ಸಾತನೂರಿನಲ್ಲಿ ನಡೆದ ಜಾನುವಾರು ವ್ಯಾಪಾರಿ ಹತ್ಯೆಗೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಸಾತನೂರಿನಲ್ಲಿ ಜಾನುವಾರು ವ್ಯಾಪಾರಿಯನ್ನು ಹತ್ಯೆಗೈದ ಕೊಲೆಗಡುಕನನ್ನು ಇನ್ನೂ ಬಂಧಿಸಲಿಲ್ಲ. ಆತ ರಾಜಾರೋಷವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುತ್ತಿದ್ದಾನೆ” ಎಂದು ಕಿಡಿ ಕಾರಿದೆ.

“ಜಾನುವಾರು ವ್ಯಾಪಾರಿಯನ್ನು ಕೊಲೆ ಮಾಡಿದ್ದೂ ಅಲ್ಲದೆ, ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುವ ಕೊಲೆಗಡುಕನ ಧೈರ್ಯದ ಹಿಂದಿನ ಕಾರಣವೇನು? ಗೃಹಸಚಿವರು ಕೊಲೆ ಆರೋಪಿಯನ್ನು ತಮ್ಮದೇ ಮನೆಯಲ್ಲಿಟ್ಟುಕೊಂಡು ವಿಡಿಯೋ ಮೂಲಕ ಸಿದ್ದರಾಮಯ್ಯ ಅವರಿಗೆ ಬೆದರಿಕೆ ಹಾಕಿಸುತ್ತಿದ್ದಾರೆಯೇ? ಆರಗ ಜ್ಞಾನೇಂದ್ರ ಕೊಲೆ ಆರೋಪಿಯ ರಕ್ಷಣೆಗೆ ನಿಂತಿರುವರೆ” ಎಂದು ಪ್ರಶ್ನಿಸಿದೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಬೊಮ್ಮಾಯಿ ಸೋಲಿಸಲು ಅಖಾಡ ಸಿದ್ಧಮಾಡಿಕೊಂಡಿತೇ ಪಂಚಮಸಾಲಿ ಸಮುದಾಯ?

ಮಂಡ್ಯ ಮೂಲದ ಇದ್ರಿಸ್ ಪಾಷ(45) ಎಂಬಾತ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಇದಕ್ಕೆ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ಕಾರಣ ಎಂಬ ಆರೋಪಗಳು ಕೇಳಿಬಂದಿವೆ.

ಮಾರ್ಚ್ 31ರ ರಾತ್ರಿ ಪುನೀತ್ ಕೆರೆಹಳ್ಳಿ ಹಾಗೂ ಇತರೆ ನಾಲ್ವರು ಸಾತನೂರು ಬಳಿ ಜಾನುವಾರು ಇವೆ ಎಂದು ಕ್ಯಾಂಟರ್​ಗೆ ಅಡ್ಡ ಹಾಕಿ ವಾಹನ ನಿಲ್ಲಿಸಿದ್ದರು. ಅಕ್ರಮ ಜಾನುವಾರು ಸಾಗಾಣಿಕೆ ಬಗ್ಗೆ ಪುನೀತ್ ಕೆರೆಹಳ್ಳಿ ದೂರ ಕೊಟ್ಟಿದ್ದರು. ಜೊತೆಗೆ ಕ್ಯಾಂಟರ್ ಗೆ ಅಡ್ಡ ಹಾಕಿದ್ದಕ್ಕೆ ಚಾಲಕ ಕೂಡ ಪುನೀತ್ ಮೇಲೆ ದೂರು ಕೊಟ್ಟಿದ್ದರು. ಮಾರನೇ ದಿನ ಇದ್ರಿಸ್ ಎಂಬುವವರ ಮೃತದೇಹ ಸಿಕ್ಕಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

“ಬಂಗಾರಪೇಟೆ, ಕೆಂಗೇರಿ, ಕೃಷ್ಣರಾಜಪುರ, ಮಂಡ್ಯ, ಚನ್ನಪಟ್ಟಣ, ಹೊಸೂರು, ಹಿಂದೂಪುರ, ಕುಪ್ಪಂ, ಮಾಲೂರು,...

ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್...

ಪ್ರಜಾಪ್ರಭುತ್ವ, ಜಾತ್ಯತೀತತೆ ಹಾಗೂ ಮಾನವ ಹಕ್ಕುಗಳ ಉಳಿವಿಗಾಗಿ ಆಂದೋಲನಕ್ಕೆ ಕರೆ

ಸೆಂಟರ್ ಫಾರ್ ಪ್ರೊಟೆಕ್ಟಿಂಗ್ ಡೆಮಾಕ್ರೆಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ ಕರೆ ...

ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

"ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ...