ಚುನಾವಣಾ ಆಯೋಗಕ್ಕೆ ವ್ಯಂಗ್ಯಚಿತ್ರ ಕಳುಹಿಸಲು ಜನವರಿ 19 ಕೊನೆ ದಿನ

Date:

Advertisements

ಇನ್ನೇನು ಕೆಲವೇ ತಿಂಗಳುಗಳಲ್ಲಿ 2024ರ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಿ ಚುನಾವಣಾ ಆಯೋಗಕ್ಕೆ ಕಳುಹಿಸಲು ಜನವರಿ 19 ಕೊನೆ ದಿನಾಂಕವಾಗಿದೆ.

“ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರ ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ನಡೆಯಲಿರುವ ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ” ಎಂದು ಹೇಳಿದೆ.

ಮುಂಬರುವ 2024 ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಜನವರಿ 21 ರಂದು ಬೆಳಗ್ಗೆ 9 ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ.

Advertisements

ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ಜತೆಗೆ, ಆ ವ್ಯಂಗ್ಯ ಚಿತ್ರಗಳಿಗೆ ಗೌರವಧನ ಸಹ ನೀಡಲಾಗುತ್ತದೆ.

ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯುವತಿಯರ ಜೊತೆ ಅಸಭ್ಯ ವರ್ತನೆ ತೋರಿದ ಮೂವರು ಕಾಮುಕರು: ದೂರು ದಾಖಲು

ಷರತ್ತು ಹಾಗು ನಿಬಂಧನೆಗಳು

  • ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು.
  • ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.
  • ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು 1800X2400 ಅಳತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.
  • ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ 25 ಚಿತ್ರಗಳಿಗೆ ಗೌರವಧನ ನೀಡಲಾಗುವುದು.
  • ಚಿತ್ರಗಳನ್ನು mediacellceokarnataka@gmail.com ವಿಳಾಸಕ್ಕೆ ಕಳುಹಿಸಬೇಕು ಹಾಗೂ ಇಮೇಲ್‌ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.
  • ಚಿತ್ರಗಳನ್ನು ಜನವರಿ 19ರಂದು ಸಂಜೆ 5 ಗಂಟೆ ಒಳಗಾಗಿ ಕಳುಹಿಸಬೇಕು.
  • ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅವರಿಗೆ ಇರುತ್ತದೆ.
  • ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ಜನವರಿ 21 ರಂದು ಬೆಳಗ್ಗೆ 9 ಗಂಟೆಗೆ ಹಾಜರಿರಬೇಕು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇಷಾದ್ರಿ ರಸ್ತೆ, ಬೆಂಗಳೂರು. ದೂರವಾಣಿ: 9480841211.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X