ಕಸಾಪದ ಆಡಳಿತಾಧಿಕಾರಿಯಾಗಿ ಕೆ ಎಂ ಗಾಯತ್ರಿ ನೇಮಿಸಿ ರಾಜ್ಯ ಸರ್ಕಾರ ಆದೇಶ

Date:

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಹಣ ಹಾಗೂ ಅಧಿಕಾರ ದುರ್ಬಳಕೆ ಸೇರಿ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಕಸಾಪಗೆ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ ಎಂ ಗಾಯತ್ರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಆದೇಶದ ಬೆನ್ನಲ್ಲೇ ಕೆ ಎಂ ಗಾಯತ್ರಿ ಅವರು ಕಸಾಪ ಕೇಂದ್ರ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಸಾಪದಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳ ವಿಚಾರಣೆಗೆ ಸಂಬಂಧಿಸಿದಂತೆ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ಆದೇಶ ಹೊರಡಿಸಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತದಾನದ ಹಕ್ಕನ್ನು ಚುನಾವಣಾ ಆಯೋಗ ರಕ್ಷಿಸುತ್ತಿದೆಯೇ?

ವಿಚಾರಣೆಗೆ ಸಂಬಂಧಿಸಿದಂತೆ ಕಸಾಪದವರು ನಿಗದಿತ ಕಾಲಾವಧಿಯಲ್ಲಿ ಹಾಜರಾಗದಿರುವುದು, ಅಗತ್ಯ ದಾಖಲಾತಿಗಳನ್ನು ಒದಗಿಸದಿರುವ ಕಾರಣ ನೀಡಿ ಆಡಳಿತಾಧಿಕಾರಿ ನೇಮಿಸುವಂತೆ ಸಹಕಾರ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಶಿಫಾರಸು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಪ್ರಸ್ತುತ ಅಧ್ಯಕ್ಷರಾಗಿದ್ದ ಮಹೇಶ್ ಜೋಶಿ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ.

ಮುಂದಿನ ಮೂರು ತಿಂಗಳವರೆಗೆ ಅಥವಾ ಕಸಾಪದ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಯುವವರೆಗೆ ಆಡಳಿತಾಧಿಕಾರಿಯಾಗಿ ಗಾಯತ್ರಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...