ಕಲಬುರಗಿ | ಕುಡಿಯುವ ನೀರು ಸಿಗದೇ ಪರದಾಡಿದ ಜನ; ಸಾರ್ವಜನಿಕರ ಆಕ್ರೋಶ

Water Tank
  • ಕಳೆದ ಒಂದು ವಾರದಿಂದಲೂ ನೀರಿನ ಸಮಸ್ಯೆ
  • ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ವಿರುದ್ಧ ಕಿಡಿ

ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಕಳೆದ ಒಂದು ವಾರದಿಂದ ಕುಡಿಯುವ ನೀರು ಸಿಗದೇ ಸಾರ್ವಜನಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಡಳಿತ ವ್ಯವಸ್ಥೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಕಲಬುರಗಿ ವಿಶ್ವವಿದ್ಯಾಲಯದ ಬಳಿಯಿರುವ ಸಿದ್ದೇಶ್ವರ ಕಾಲೋನಿಯು ಕಲಬುರಗಿ ಗ್ರಾಮಾಂತರ ಮತ ಕ್ಷೇತ್ರಕ್ಕೆ ಸೇರುತ್ತದೆ. ಹಲವು ವರ್ಷಗಳಿಂದ ಇದೇ ಸ್ಥಳದಲ್ಲಿ ವಾಸಿಸುತ್ತಿರುವ ಜನರು ಹಲವು ಮೂಲಭೂತ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಇಲ್ಲಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ತಿಳಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಕಳೆದ ಒಂದು ವಾರದಿಂದ ಈ ಭಾಗಕ್ಕೆ ಸರಿಯಾಗಿ ನೀರು ಬರುತ್ತಿಲ್ಲವೆಂದು ಅಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: 2050ರ ವೇಳೆಗೆ ನೀರಿನ ಕೊರತೆ ಎದುರಿಸಲಿರುವ ಬೆಂಗಳೂರು

ಸರ್ಕಾರಿ ಟ್ಯಾಂಕ್‌ನಲ್ಲಿ ಬರುವ ನೀರು ಎಲ್ಲರಿಗೂ ಸಾಕಾಗುತ್ತಿಲ್ಲ. ಇಲ್ಲಿನ ಬಹುತೇಕ ಜನ ಇದೇ ನೀರನ್ನು ಆಶ್ರಯಿಸಿರುವುದರಿಂದ ಸಮಸ್ಯೆ ಮತ್ತಷ್ಟು ಹೆಚ್ಚಿದಂತಾಗಿದೆ.

ಪಾಲಿಕೆಯವರು ವಾರಗಟ್ಟಲೇ ನೀರು ಬಿಡದೇ ಇರುವುದರಿಂದ ಸಾರ್ವಜನಿಕರು ಪರೆದಾಡುವಂತಾಗಿದೆ. ಚುನಾವಣೆ ಪ್ರಾರಂಭವಾದಾಗಿನಿಂದ ಕಾಲೋನಿಯಲ್ಲಿ ಹೊಸ ನೀರಿನ ಟಾಕೀಗಳನ್ನು ನಾಮಕಾವಸ್ತೆಗೆ ನಿರ್ಮಾಣ ಮಾಡುತಿದ್ದಾರೆ ಎಂದು ಇಲ್ಲಿನ ಜನರ ಕಿಡಿಕಾರಿದ್ದಾರೆ.

LEAVE A REPLY

Please enter your comment!
Please enter your name here