ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯ ಪಾಕಿಸ್ತಾನ ಹೇಳಿಕೆ: ಸಾಹಿತಿಗಳ ಖಂಡನೆ

Date:

Advertisements

ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯೊಬ್ಬರು ಬೆಂಗಳೂರಿನ ಮುಸ್ಲಿಂ ಸಮುದಾಯ ಹೆಚ್ಚಾಗಿರುವ ಸ್ಥಳವನ್ನು ಭಾರತವಲ್ಲ, ಪಾಕಿಸ್ತಾನ ಎಂದು ಹೇಳಿರುವುದು ವರದಿಯಾಗಿದ್ದು, ಈ ಬೆಳವಣಿಗೆ ಆಘಾತ ಉಂಟು ಮಾಡಿದೆ ಎಂದು ಜಾಗೃತ ಕರ್ನಾಟಕದ ನಾಗರಿಕರ ವೇದಿಕೆ ಖಂಡಿಸಿದೆ.

‘ಸರ್ವ ಧರ್ಮ ಸಮಭಾವದ ಸಂವಿಧಾನವನ್ನು ಒಪ್ಪಿಕೊಂಡಿರುವ ದೇಶ ನಮ್ಮದು. ಈಗಾಗಲೇ ವಿವಿಧ ರೀತಿಯಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾಗಿರುವ ಮುಸ್ಲಿಂ ಸಮುದಾಯವನ್ನೇ ಗುರಿಯಾಗಿಸಿರುವ ಹಲವು ದೌರ್ಜನ್ಯಗಳಿಗೆ ದೇಶ ಸಾಕ್ಷಿಯಾಗುತ್ತಿದೆ. ಇಂತಹ ವೇಳೆಯಲ್ಲಿ ನ್ಯಾಯಪೀಠದಿಂದ ಬರುವ ಇಂತಹ ಅಭಿಪ್ರಾಯಗಳು ಜನರ ಮಧ್ಯೆ ಇರುವ ಸಾಮರಸ್ಯ ಹದಗೆಡಿಸಲು ಕಾರಣವಾಗಬಹುದು. ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು,” ಎಂದು ವೇದಿಕೆ ಆಗ್ರಹಿಸಿದೆ.

”ಈ ಹಿಂದೆ ಕರ್ನಾಟಕ ಹೈಕೋರ್ಟ್‌ನ ಮತ್ತೊಬ್ಬ ನ್ಯಾಯಮೂರ್ತಿಯೊಬ್ಬರು, ಪ್ರಕರಣ ಒಂದರ ವಿಚಾರಣೆ ವೇಳೆ ಮನುಸ್ಮೃತಿಯು ಆಚಾರ, ವ್ಯವಹಾರ, ಪ್ರಾಯಃಶ್ಚಿತ್ತ ಬೋಧಿಸುತ್ತದೆ ಎಂದು ಪ್ರಶಂಸಿಸುವ ಹೇಳಿಕೆ ನೀಡಿದ ಕೆಲವೇ ವಾರಗಳಲ್ಲಿ ಪಾಕಿಸ್ತಾನ ಹೇಳಿಕೆ ಕಳವಳಕಾರಿ ಪ್ರಸಂಗ ನ್ಯಾಯಾಲಯದಲ್ಲಿ ವರದಿಯಾಗಿರುವುದು ಆಘಾತಕಾರಿ ವಿದ್ಯಮಾನ. ಇವೆಲ್ಲವೂ ಬಹುತ್ವ ಭಾರತಕ್ಕೆ ಪೆಟ್ಟು ನೀಡುವಂತಿವೆ,” ಎಂದು ಪ್ರೊ. ಕೆ. ಮರುಳಸಿದ್ದಪ್ಪ, ಡಾ. ಜಿ. ರಾಮಕೃಷ್ಣ, ಪ್ರೊ. ಎಸ್‌.ಜಿ. ಸಿದ್ದರಾಮಯ್ಯ, ರುದ್ರಪ್ಪ ಹನಗವಾಡಿ, ಬಿ. ಶ್ರೀಪಾದ ಭಟ್‌, ಡಾ. ಮೀನಾಕ್ಷಿ ಬಾಳಿ, ಕೆ. ಎಸ್‌. ವಿಮಲಾ, ಡಾ. ಎನ್‌. ಗಾಯತ್ರಿ, ಟಿ. ಸುರೇಂದ್ರ ರಾವ್‌, ವಸಂತ್‌ ರಾಜ್‌ ಎನ್‌. ಕೆ., ವಾಸುದೇವ ಉಚ್ಚಿಲ, ಡಾ. ಬಂಜಗೆರೆ ಜಯಪ್ರಕಾಶ್‌, ಡಾ. ವಸುಂಧರಾ ಭೂಪತಿ, ಇಂದಿರಾ ಕೃಷ್ಣಪ್ಪ ಸೇರಿದಂತೆ ಅನೇಕ ಸಾಹಿತಿಗಳು, ಚಿಂತಕರು, ವಿಮರ್ಶಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದು ದೇಶ ಒಂದು ಚುನಾವಣೆ- ಒಕ್ಕೂಟ ವ್ಯವಸ್ಥೆ ಧ್ವಂಸಕ್ಕೆ ಅಡಿಗಲ್ಲು

”ವೈಯಕ್ತಿಕ ನೆಲೆಯಲ್ಲಿ ನಡೆಯಬೇಕಾದ ಪೂಜೆ, ಹಬ್ಬಗಳು ಸಾರ್ವಜನಿಕ ಪ್ರಚಾರ ಸಾಧನವಾಗುವುದು ಮತ್ತು ನ್ಯಾಯಾಂಗದಲ್ಲಿ ಇರುವವರು ರಾಜಕೀಯ ವ್ಯಕ್ತಿಗಳಿಂದ ದೂರ ಇರಬೇಕು ಎಂಬ ಸದಾಶಯ ಇಂದು ಗಡಿ ಮೀರಿದೆ. ಪ್ರಧಾನ ಮಂತ್ರಿಗಳು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಮನೆಯ ವ್ಯಕ್ತಿಗತ ಗಣೇಶ ಪೂಜೆಯಲ್ಲಿ ಪಾಲ್ಗೊಂಡು, ವಿಡಿಯೋ ಹಂಚಿಕೆಯಾಗುವುದೆಲ್ಲವೂ ಬಹುತ್ವ ಭಾರತದ ಅಡಿಗಲ್ಲು ಸಡಿಲವಾಗುತ್ತಿದೆಯೇ ಎಂಬ ಅನುಮಾನಕ್ಕೆ ಕಾರಣವಾಗಿವೆ. ಬಹುತ್ವ ಭಾರತದ ಸಾಂಸ್ಕೃತಿಕ ನೆಲೆಯಲ್ಲಿ ಬದುಕುತ್ತಿರುವ ನಾವೆಲ್ಲ ಇಂತಹ ಸ್ಥಿತಿಗಳು ಮರುಕಳಿಸದಂತೆ ಗಮನಹರಿಸುವ ಅಗತ್ಯವಿದೆ,” ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿರುವ ಗೋರಿಪಾಳ್ಯದಲ್ಲಿನ ಕ್ರಿಮಿನಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಅದು ಮಿನಿ ಪಾಕಿಸ್ತಾನವಾಗಿ ಬದಲಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರು ಇತ್ತೀಚೆಗೆ ಹೇಳಿದ್ದರು.

ಮೈಸೂರು ರಸ್ತೆಯ ಫ್ಲೈಓವರ್‌ನಲ್ಲಿ ನೋಡಿದರೆ ಪ್ರತಿ ಆಟೋ ರಿಕ್ಷಾದಲ್ಲಿಯೂ ಹತ್ತು ಜನರನ್ನು ತುಂಬಿಸಿರುತ್ತಾರೆ. ಮೈಸೂರು ರಸ್ತೆಯ ಮೇಲ್ಸೇತುವೆ ಸಾಗುವ ಗೋರಿಪಾಳ್ಯದಿಂದ ಮಾರುಕಟ್ಟೆವರೆಗಿನ ಪ್ರದೇಶ ಭಾರತದಲ್ಲಿ ಇಲ್ಲ. ಅದು ಪಾಕಿಸ್ತಾನದಲ್ಲಿದೆ. ಇದು ವಾಸ್ತವ” ಎಂದಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X