ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ

Date:

ತಮಿಳುನಾಡಿನಲ್ಲಿ ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ.

- Advertisement -

ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ ಹಿನ್ನೆಲೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಇಂದು ಸಂಜೆ 5 :45ಕ್ಕೆ ಲೋಕಭವನಕ್ಕೆ ಭೇಟಿ ನೀಡಿ, ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಕಗ್ಗೊಲೆ: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ರಾಜ್ಯ ಸರ್ಕಾರ ಕಳಿಸಿರುವ ಭಾಷಣದ ಪ್ರತಿಯಲ್ಲಿ ಕೆಲವು ಪ್ಯಾರಗಳನ್ನು ಕಡಿತಗೊಳಿಸಿ ಓದುವುದಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ ಅವರಿಗೆ ರಾಜ್ಯಪಾಲರು ಕಳಿಸಿದ್ದಾರೆ ಎನ್ನಲಾಗಿದೆ. ರಾಜ್ಯಪಾಲರು ಕಳಿಸಿರುವ ಭಾಷಣದ ಪ್ರತಿಯನ್ನು ರಾಜ್ಯ ಸರ್ಕಾರ ನಿರಾಕರಿಸಿದ್ದು, ತಾನು ಸಿದ್ಧಪಡಿಸಿರುವ ಸಂಪೂರ್ಣ ಭಾಷಣವನ್ನು ಓದಬೇಕೆಂದು ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ನಾಳೆಯಿಂದ ಜ.31ರವರೆಗೆ ವಿಧಾನಸಭೆ ಜಂಟಿ ಅಧಿವೇಶನ ನಡೆಯಲಿದ್ದು ರಾಜ್ಯಪಾಲರ ನಡೆ ಬಹಳ ಕುತೂಹಲ ಮೂಡಿಸಿದೆ. ಕೇಂದ್ರವು MahatmaGandhi NREGA ಹೆಸರನ್ನು ‘ರದ್ದುಗೊಳಿಸುವುದು’ ಸೇರಿದಂತೆ ಹಲವಾರು ವಿಷಯಗಳ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ-ಜೆಡಿ (ಎಸ್) ಒಕ್ಕೂಟದ ನಡುವೆ ಘರ್ಷಣೆ ನಿರೀಕ್ಷಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪಲ್ಲ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಯನ್ನು ರದ್ದುಗೊಳಿಸಿದ್ದ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯಾಗಿ ಬದಲಾಯಿಸಿದ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಿರ್ಣಯ ಅಂಗೀಕರಿಸಿತ್ತು. ಎಂಜಿಎನ್‌ಆರ್‌ಇಜಿಎ ಬದಲಿಗೆ ಇತ್ತೀಚೆಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಅಂಗೀಕರಿಸದಿರಲು ಮತ್ತು ಅದರ ವಿರುದ್ಧ ಕಾನೂನು ಹೋರಾಟವನ್ನು ಕೈಗೊಳ್ಳಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಹೀಗಾಗಿ ಕೇಂದ್ರಕ್ಕೆ ಮುಜುಗರ ತರುವ ಅಂಶಗಳು ರಾಜ್ಯಪಾಲರ ಭಾಷಣದಲ್ಲಿರುವುದರಿಂದ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡದಿರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವೇಳೆ ಜಂಟಿ ಅಧಿವೇಶನಕ್ಕೆ ರಾಜ್ಯಪಾಲರು ಬರದಿದ್ದರೆ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿದೆ. ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರ ಭಾಷಣದೊಂದಿಗೆ ಆರಂಭಿಸಬೇಕು ಎಂಬ ನಿಯಮವಿದೆ. ಆದ್ದರಿಂದ ಒಂದು ವೇಳೆ ಬರದಿದ್ದರೆ ದೊಡ್ಡ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿದೆ. ಜನವರಿ 22ರಂದು ಬೆಳಿಗ್ಗೆ 11 ಗಂಟೆಗೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...