ದಿನಕ್ಕೆ 14 ಗಂಟೆ ಕೆಲಸಕ್ಕೆ ಕರ್ನಾಟಕ ಐಟಿ ಕಂಪನಿಗಳಿಂದ ಪ್ರಸ್ತಾಪ; ಉದ್ಯೋಗಿಗಳಿಂದ ಆಕ್ರೋಶ

Date:

Advertisements

ಕರ್ನಾಟಕದ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಂದ 14 ಗಂಟೆ ಕೆಲಸ ನಿರ್ವಹಿಸುವ ನೂತನ ಪ್ರಸ್ತಾಪವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಕಂಪನಿಗಳ ಈ ನಡೆಗೆ ಕಾರ್ಮಿಕ ಸಂಘಗಳಿಂದ ಭಾರಿ ವಿರೋಧ ವ್ಯಕ್ತವಾಗಿದ್ದು, ಇದೊಂದು ಅಮಾನವೀಯ ನಡೆಯಾಗಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅಲ್ಲದೆ ಉದ್ಯೋಗ ಕಡಿತಗೊಳಿಸುವ ಕಾರಣದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯನ್ವಯ ರಾಜ್ಯ ಸರ್ಕಾರವು ತಿದ್ದುಪಡಿಯನ್ನು ಜಾರಿಗೊಳಿಸಲು ಮುಂದಾಗಿದೆ. ಈ ತಿದ್ದುಪಡಿಯಲ್ಲಿ ಐಟಿ ಕಂಪನಿಗಳು ದಿನಕ್ಕೆ 14 ಗಂಟೆ ಕಾರ್ಯನಿರ್ವಹಿಸುವ(12 ಗಂಟೆ ಕೆಲಸ ಹಾಗೂ 2 ಗಂಟೆ ಹೆಚ್ಚುವರಿ ಕೆಲಸ) ಪ್ರಸ್ತಾಪವನ್ನು ಸೇರಿಸಲು ಉದ್ದೇಶಿಸಿದೆ.

ಪ್ರಸ್ತುತ ಕಾರ್ಮಿಕ ಕಾನೂನಿನ ಅನ್ವಯ ಹೆಚ್ಚುವರಿ ಒಂದು ಗಂಟೆ ಒಳಗೊಂಡು 9 ಗಂಟೆಗಳ ಕಾಲ ಕೆಲಸ ನಿರ್ವಹಿಸಲು ಅನುಮತಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

ಐಟಿ ವಲಯದ ನೂತನ ಪ್ರಸ್ತಾಪವು, “ಐಟಿ/ಐಟಿಇಎಸ್/ಬಿಪಿಒ ವಲಯಗಳಲ್ಲಿ ದಿನಕ್ಕೆ 12 ಗಂಟೆಗಳಿಗೂ ಹೆಚ್ಚು ಸಮಯ ಹಾಗೂ ನಿರಂತರ ಮೂರು ನಿರಂತರ ತಿಂಗಳುಗಳಲ್ಲಿ 125 ಗಂಟೆಗಳು ಮೀರಬಾರದು” ಎಂದು ತಿಳಿಸಲಾಗಿದೆ.

ಐಟಿ ಕಂಪನಿಗಳ ಪ್ರಸ್ತಾಪದ ಬಗ್ಗೆ ರಾಜ್ಯ ಸರ್ಕಾರ ಚರ್ಚಿಸಿ ಶೀಘ್ರದಲ್ಲೆ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಸ್ತಾಪವು ಸಂಪುಟದಲ್ಲಿ ಚರ್ಚೆಯಾಗುವ ಸಂಭವವಿದೆ.

ರಾಜ್ಯ ಐಟಿ ಕಂಪನಿಗಳ 14 ಗಂಟೆ ಕೆಲಸದ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ಉದ್ಯೋಗಿಗಳ ಸಂಘ(ಕೆಐಟಿಯು) ಭಾರಿ ವಿರೋಧ ವ್ಯಕ್ತಪಡಿಸಿದೆ. ಈ ತಿದ್ದುಪಡಿಯು ಪ್ರಸ್ತುತ ಮೂರು ಪಾಳಿಗಳಲ್ಲಿರುವ ಪದ್ಧತಿಯ ಬದಲಿಗೆ ಎರಡು ಪದ್ಧತಿಯನ್ನು ಅನುಮತಿಸುವುದಾಗಿದೆ. ಇದರಿಂದ ಮೂರನೇ ಒಂದು ಭಾಗದಷ್ಟು ಕಾರ್ಮಿಕರನ್ನು ವಜಾಗೊಳಿಸುವ ಹುನ್ನಾರವಾಗಿದೆ ಎಂದು ಕೆಐಟಿಯು ತಿಳಿಸಿದೆ.

ಕೆಸಿಸಿಐ ವರದಿಯ ಪ್ರಕಾರ ಐಟಿ ವಲಯದ ಶೇ.45 ರಷ್ಟು ಉದ್ಯೋಗಿಗಳು ಒತ್ತಡದಂತ ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಶೇ.55 ರಷ್ಟು ಮಂದಿ ದೈಹಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಈಗ ಜಾರಿಗೆ ತರಲು ಹೊರಟಿರುವ ತಿದ್ದುಪಡಿ ಉದ್ಯೋಗಿಗಳನ್ನು ಮತ್ತಷ್ಟು ಆಘಾತಕ್ಕೆ ದೂಡುತ್ತದೆ ಎಂದು ಕೆಐಟಿಯು ತಿಳಿಸಿದೆ.

ಕೆಐಟಿಯು ಪತ್ರಿಕಾ ಪ್ರಕಟಣೆ: KITU Press Release _ 14hrWorkDay

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X