ಕರ್ನಾಟಕ-ಮಹಾರಾಷ್ಟ್ರ ಗಡಿಜನರಿಗೆ ವಿಮೆ | ಉದ್ಧಟತನದ ಪರಮಾವಧಿ ಎಂದ ಸಿಎಂ ಬೊಮ್ಮಾಯಿ

Date:

  • ಬಾಬು ಜಗಜೀವನ್ ರಾಮ್ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶಿಸಿದ ಮಹಾರಾಷ್ಟ್ರ
  • ʼತಕ್ಷಣ ತನ್ನ ಆದೇಶ ವಾಪಸ್ ಪಡೆದು, ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡಲಿʼ

ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ಮಹಾರಾಷ್ಟ್ರ ಸರ್ಕಾರ ವಿಮೆ ನೀಡುವ ಆದೇಶ ಮಾಡಿರುವುದು ಉದ್ಧಟತನ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಈ ಕುರಿತು ಸರಣಿ ಬುಧವಾರ ಸರಣಿ ಟ್ವೀಟ್‌ ಮಾಡಿರುವ ಅವರು, “ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಮ್‌ ಕೋರ್ಟ್‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ” ಎಂದು ದೂರಿದ್ದಾರೆ.

“ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು. ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಬಾಬು ಜಗಜೀವನ್ ರಾಮ್ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ. ತಕ್ಷಣ ತನ್ನ ಆದೇಶ ವಾಪಸ್ ಪಡೆದು, ಅಮಿತ್‌ ಶಾ ಅವರ ಸೂಚನೆಗೆ ಗೌರವ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗಡಿಯೊಳಗೆ ‘ಮಹಾ’ ಆರೋಗ್ಯ ವಿಮೆ ಜಾರಿ; ಆದೇಶ ವಾಪಾಸು ಪಡೆಯದಿದ್ದರೆ ಪರಿಣಾಮ ನೆಟ್ಟಗಾಗದು : ಸಿದ್ದರಾಮಯ್ಯ ಎಚ್ಚರಿಕೆ

“ದೇವೇಂದ್ರ ಫಡ್ನವೀಸ್ ಸರ್ಕಾರ ಇದೇ ರೀತಿ ಉದ್ಧಟತನ ಮುಂದುವರಿಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು” ಎಂದು ಎಚ್ಚರಿಸಿದ್ದಾರೆ.

“ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ” ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರೂಣ ಲಿಂಗ ಪತ್ತೆ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ರಾಜ್ಯ ಸರ್ಕಾರ

ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣವನ್ನು ರಾಜ್ಯ...

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ...

ಅನ್ ಬಾಕ್ಸಿಂಗ್ ಬಿಎಲ್‌ಆರ್‌ ಹಬ್ಬಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಡಿಸೆಂಬರ್‌ 1ರಿಂದ...