ವರ್ಗಾಯಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 27 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು, ಸಹಾಯಕ ಇಂಜಿನಿಯರ್‌ಗಳು ಹಾಗೂ ಜೂನಿಯರ್ ಇಂಜಿನಿಯರ್‌ಗಳನ್ನು ಸೇವೆಯಿಂದ ಅಮಾನತು ಪಡಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ.
ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ. ಅಮಾನತು ಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಕತಾರ್: 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ
ಅಮಾನತುಗೊಂಡ ಅಧಿಕಾರಿಗಳಲ್ಲಿ 5 ಮಂದಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳು (ಎಇಇ), 7 ಮಂದಿ ಸಹಾಯಕ ಎಂಜನಿಯರ್‌ಗಳು (ಎಇ) ಹಾಗೂ 15 ಮಂದಿ ಜೂನಿಯರ್ ಇಂಜಿನಿಯರ್‌ಗಳು (ಜೆಇ) ಸೇರಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.