ಕಾವೇರಿ ನೀರು ವಿವಾದ: ಸುಪ್ರೀಂಕೋರ್ಟ್‌ಗೆ ಕರ್ನಾಟಕ ಅಫಿಡೆವಿಟ್ ಸಲ್ಲಿಕೆ

Date:

ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಹಿನ್ನೆಲೆ ಕರ್ನಾಟಕ ಕೂಡ ಅಫಿಡವಿಟ್ ಸಲ್ಲಿಸಿದೆ. ನಾಳೆ (ಆಗಸ್ಟ್‌ 25) ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ(ಸಿಡಬ್ಲ್ಯುಎಂಎ) ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ ಸಹ ನೀರು ಹರಿಸಿ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆ. ಆದರೂ ತಮಿಳುನಾಡು ಇನ್ನೂ ಬೇಕು ಎಂದು ಹೇಳುವ ಮೂಲಕ ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ಅಫಿಡೆವಿಟ್​ನಲ್ಲಿ ಆರೋಪಿಸಿದೆ.

ಈ ಬಾರಿ ಕಾವೇರಿ ಕಣಿವೆ ಪ್ರದೇಶದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಸಿಡಬ್ಲ್ಯುಎಂಎ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ‌ ನೀರು ಹರಿಸುವಂತೆ ಕೇಳುತ್ತಿದೆ. ಆದರೆ, ನಮ್ಮ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ ಶೇ. 42 ಕಡಿಮೆ ನೀರು ಸಂಗ್ರಹವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಷ್ಯಾ | ಪುಟಿನ್‌ ವಿರುದ್ಧ ಬಂಡೆದಿದ್ದ ಯೆವ್ಗೆನಿ ಪ್ರಿಗೋಷಿನ್ ವಿಮಾನ ಅಪಘಾತದಲ್ಲಿ ಸಾವು; ಕೊಲೆ ಶಂಕೆ?

ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ. ಅದಾಗ್ಯೂ ಕರ್ನಾಟಕ ತಮಿಳುನಾಡಿಗೆ ನೀರು ಹರಿಸಿ ಪ್ರಾಧಿಕಾರದ ಆದೇಶವನ್ನು ಕರ್ನಾಟಕ ಪಾಲಿಸಿದೆ ಎಂದು ತಿಳಿಸಿದೆ.

ಮಳೆ ಶುರುವಾದ ಆರಂಭದಲ್ಲಿ ತಮಿಳುನಾಡು ಜಲಾಶಯಗಳಲ್ಲಿ 69 ಟಿಎಂಸಿ ನೀರಿತ್ತು. ಕರ್ನಾಟಕ ಆಗಸ್ಟ್ 22 ವರೆಗೂ 26 ಟಿಎಂಸಿ ನೀರು ಹರಿಸಿದೆ. ಇದರಿಂದ 96 ಟಿಎಂಸಿ ನೀರು ತಮಿಳುನಾಡು ಬಳಿ ಸಂಗ್ರಹವಾದಂತಾಯಿತು. ಸದ್ಯ ತಮಿಳುನಾಡು 21 ಟಿಎಂಸಿ ನೀರಿದೆ ಎಂದು ಹೇಳುತ್ತಿದೆ. ಕುರುವೈ ಬೆಳೆಗೆ 32 ಟಿಎಂಸಿ ನೀರು ಬೇಕಾಗಿದೆ. ಈಗಾಗಲೇ 22 ಟಿಎಂಸಿ ನೀರು ಬಳಕೆ ಮಾಡಿಕೊಂಡಿದೆ. ಬಾಕಿ 9.83 ಟಿಎಂಸಿ ನೀರು ಸೆಪ್ಟೆಂಬರ್ ಅಂತ್ಯದವರೆಗೂ ಬಳಸಬಹುದು. ಆದರೆ ಹೆಚ್ಚು ಪ್ರದೇಶದಲ್ಲಿ ಕುರುವೈ ಬೆಳೆದು ಅಗತ್ಯಕ್ಕಿಂತ ಹೆಚ್ಚು ನೀರಿನ ಬಳಕೆ ಮಾಡುತ್ತಿದೆ.

1.85 ಲಕ್ಷ ಎಕರೆ ಮೀರಿ ಕುರುವೈ ಬೆಳೆ ಬೆಳೆದಿದ್ದು, ಟ್ರುಬ್ಯುನಲ್ ಆದೇಶದ ಉಲ್ಲಂಘನೆಯಾಗಿದೆ. ಹೀಗೆ ತಮಿಳುನಾಡು ಜಲಾಶಯದ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ತನ್ನ ಅಫಿಡೆವಿಟ್‌ನಲ್ಲಿ ಆರೋಪಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...