ಅಪಹರಣ ಪ್ರಕರಣ | ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು​​; ಹಾಸನಕ್ಕೆ ತೆರಳದಂತೆ ಸೂಚನೆ

Date:

Advertisements

ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ.

ಕೆ.ಆರ್.ನಗರದ ನಿವಾಸಿಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್‌, ನಿರೀಕ್ಷಣಾ ಜಾಮೀನು ನೀಡಿದೆ. ಜೊತೆಗೆ, ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಆದೇಶ ಹೊರಡಿಸಿದೆ.

ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ, ತನಿಖೆಗೆ ಅವರು ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ ಎಂದು ಕೋರ್ಟ್‌ ಹೇಳಿದೆ.

Advertisements

ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತ ಮಹಿಳೆಗೆ ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ. ಯಾಕೆಂದರೆ, ಸ್ವತಃ ಸಂತ್ರಸ್ತ ಮಹಿಳೆಯೇ ಭವಾನಿ ರೇವಣ್ಣ ಬಟ್ಟೆ ಊಟ ಕಳುಹಿಸಿದ್ದರೆಂದು ಹೇಳಿದ್ದಾರೆ ಎಂದು ನ್ಯಾ. ಕೃಷ್ಣ ಎಸ್​ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಹೇಳಿದೆ.

ಮೇ 30ರಂದು ಭವಾನಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಅಲ್ಲದೆ, ಜಾಮೀನು ಅರ್ಜಿಯ ವಿಚಾರಣೆಯ ತೀರ್ಪು ಬರುವವರೆಗೆ ಮಧ್ಯಂತರ ಜಾಮೀನು ಅರ್ಜಿಯ ಅವಧಿಯನ್ನು ಮುಂದುವರಿಸಬೇಕೆಂದು ಸೂಚಿಸಿತ್ತು. ಜೂನ್ 15ರಂದು ಭವಾನಿ ರೇವಣ್ಣನವರ ಜಾಮೀನು ಅರ್ಜಿಯ ವಿಚಾರಣೆಯು ಮುಕ್ತಾಯಗೊಂಡಿದ್ದು, ತೀರ್ಪನ್ನು ಜೂನ್ 18ರಂದು ಪ್ರಕಟಿಸುವುದಾಗಿ ತಿಳಿಸಿತ್ತು. ಇದೀಗ, ಜಾಮೀನು ನೀಡಿ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಭವಾನಿ ರೇವಣ್ಣನವರ ಪತಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಅವರ ಪುತ್ರ – ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ಇಬ್ಬರೂ ತಮಗೆ ಲೈಂಗಿಕ ಕಿರುಕುಳ ನೀಡಿದ್ದರೆಂದು ಕೆಆರ್ ನಗರದ ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಹೆಚ್​.ಡಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ.

ಸಾಕ್ಷಿ ಹೇಳದಂತೆ ಸಂತ್ರಸ್ತೆಯನ್ನು ತಡೆಯಲು ಅಪಹರಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕೆಲಸವನ್ನು ರೇವಣ್ಣನವರೇ ಮಾಡಿಸಿದ್ದಾರೆಂದು ಹೇಳಲಾಗಿತ್ತು. ಅಲ್ಲದೇ, ರೇವಣ್ಣ ಅವರಿಗೆ ಸೇರಿದೆ ಎನ್ನಲಾದ ಫಾರ್ಮ್ ಹೌಸ್ ಒಂದರಲ್ಲಿ ಸಂತ್ರಸ್ಥೆಯನ್ನು ಪೊಲೀಸರು ರಕ್ಷಿಸಿದ್ದರು. ಅಪಹರಣಕ್ಕೆ ಬಳಸಲಾಗಿದ್ದ ಕಾರು ಭವಾನಿ ರೇವಣ್ಣನವರದ್ದು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ರೇವಣ್ಣ ಅವರ ಕುಮ್ಮಕ್ಕಿನಿಂದಲೇ ಮಹಿಳೆಯರ ಅಪಹರಣವಾಗಿದೆ. ಜೊತೆಗೆ, ಭವಾನಿ ರೇವಣ್ಣನವರ ಕಾರಿನ ಚಾಲಕ ಅಜಿತ್ ಎಂಬಾತನೂ ಭವಾನಿಯವರ ಸೂಚನೆಯ ಮೇರೆಗೆ ಅಪಹರಣದಲ್ಲಿ ಭಾಗಿಯಾಗಿದ್ದ ಎಂಬ ಆರೋಪಗಳು ಕೇಳಿಬಂದಿದ್ದವು.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಈಗಾಗಲೇ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಹೆಚ್​ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಸದ್ಯ ಹೆಚ್​ಡಿ ರೇವಣ್ಣ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ.

ಈ ಸುದ್ದಿ ಓದಿದ್ದೀರಾ? ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್​ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್​ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್​ ನೀಡಿತ್ತು.

ನೋಟಿಸ್​ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕತಿಸಿತ್ತು. ಹೀಗಾಗಿ, ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್​​ನ ಏಕ ಸದಸ್ಯ ಪೀಠ ಈ ಹಿಂದೆ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಕಾಯ್ದಿರಿಸಿತ್ತು. ಇದೀಗ, ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X