ಕೆಎಸ್‌ಐಐಡಿಸಿಯಿಂದ 143 ಕೋಟಿ ರೂ. ಲಾಭಾಂಶ: ಸಿಎಂ ಪರಿಹಾರ ನಿಧಿಗೆ 3 ಕೋಟಿ ರೂ. ದೇಣಿಗೆ

Date:

ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್‌ಐಐಡಿಸಿ) 2024-25ನೇ ಸಾಲಿನಲ್ಲಿ ಗಳಿಸಿರುವ ನಿವ್ವಳ ಲಾಭದಲ್ಲಿ 143.12 ಕೋಟಿ ರೂ. ಮೊತ್ತದ ಲಾಭಾಂಶದ (ಡಿವಿಡೆಂಡ್) ಚೆಕ್ ಅನ್ನು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ ಅವರು ಸೋಮವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಸ್ತಾಂತರಿಸಿದರು.

- Advertisement -

ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಲಾಭಾಂಶದ ಜೊತೆಗೆ, ನಿಗಮದ ವತಿಯಿಂದ ₹3 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ (ಸಿಎಂಆರ್‌ಎಫ್) ದೇಣಿಗೆಯಾಗಿ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಸಚಿವ ಎಂ.ಬಿ. ಪಾಟೀಲ, “ನಿಗಮವು 2024-25ನೇ ಸಾಲಿನಲ್ಲಿ ಎಲ್ಲ ತೆರಿಗೆ ಕಡಿತಗಳ ಬಳಿಕ ಒಟ್ಟು 188.41 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಇದರೊಂದಿಗೆ, 2025-26ನೇ ಸಾಲಿನಲ್ಲಿ ಸಂಸ್ಥೆಗೆ 19.34 ಕೋಟಿಯಷ್ಟು ಮೊತ್ತವು ವಿಶೇಷ ಲಾಭಾಂಶವಾಗಿ (ಡಿವಿಡೆಂಡ್) ಬಂದಿದೆ. ಸರ್ಕಾರದ ನಿಯಮಾನುಸಾರ, ಒಟ್ಟು ಲಾಭಾಂಶದ ಶೇ 30ರಷ್ಟನ್ನು ಇದೀಗ ಸರ್ಕಾರದ ಬೊಕ್ಕಸಕ್ಕೆ ಜಮೆ ಮಾಡಲಾಗಿದೆ” ಎಂದು ವಿವರಿಸಿದರು.

ಇದನ್ನು ಓದಿದ್ದೀರಾ? ‘ಐಪಿಎಲ್‌ಗೆ ಸೀಮಿತ’ ಎಂಬ ಟೀಕೆಗೆ ತಕ್ಕ ಉತ್ತರ: ಯುವ ತಾರೆ ಸೂರ್ಯವಂಶಿಯ ವಿಶ್ವದಾಖಲೆಯಾಟ

ಕೆಎಸ್‌ಐಐಡಿಸಿ ಸಂಸ್ಥೆಗೆ ಪ್ರಮುಖವಾಗಿ ಕ್ಯಾಮ್ಕೊ, ಕ್ಯಾಟ್ಕೊ, ಎಂಎಸ್‌ಐಎಲ್ ಮತ್ತು ಎಚ್‌ಜಿಎಂಎಲ್ ಮುಂತಾದ ಸಾರ್ವಜನಿಕ ಉದ್ದಿಮೆಗಳಿಂದ ಈ ಆದಾಯ ಹರಿದುಬಂದಿದೆ. “ರಾಜ್ಯದ ಸಾರ್ವಜನಿಕ ಉದ್ದಿಮೆಗಳು ಮತ್ತೆ ಲಾಭದ ಹಳಿಗೆ ಮರಳುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಅಲ್ಲದೆ, ಕಳೆದ ಮೂರು ವರ್ಷಗಳ ಅವಧಿಯಲ್ಲಿ ನಿಗಮವು ಸಾರ್ವಕಾಲಿಕ ದಾಖಲೆಯ ಪ್ರಮಾಣದಲ್ಲಿ ಲಾಭ ಗಳಿಸಿರುವುದು ಅತ್ಯಂತ ಸಕಾರಾತ್ಮಕ ವಿಚಾರವಾಗಿದೆ” ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕೆಎಸ್‌ಐಐಡಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಚಿದಾನಂದ್ ಅವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...