ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತ್‌ ತಿಮ್ಮಯ್ಯ ವಜಾ

Date:

Advertisements

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಶಾಂತ್ ತಿಮ್ಮಯ್ಯ ಅವರ ಹುದ್ದೆಯ ಅವಧಿ 2022ರಲ್ಲೇ ಮುಗಿದಿದ್ದು, ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ.

ಜಲ ಕಾಯ್ದೆಯಂತೆ ಹಾಗೂ ಅಧ್ಯಕ್ಷರ ನೇಮಕಾತಿಯ ನಿಯಮಾವಳಿಗಳ ಪ್ರಕಾರ ಶಾಂತ್ ತಿಮ್ಮಯ್ಯ ಅವರ ಅವಧಿ ಮುಗಿದಿರುವುದರಿಂದ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಅಧ್ಯಕ್ಷ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಿ ಆದೇಶಿಸಲಾಗಿದೆ.

ಶಾಂತ್ ಎ. ತಿಮ್ಮಯ್ಯ 2021ರ ನವೆಂಬರ್ 15ರಿಂದ ಅಧ್ಯಕ್ಷ ಹುದ್ದೆ ವಹಿಸಿಕೊಂಡಿದ್ದು, ಅವರ ಅವಧಿ 2022ರ ಮಾರ್ಚ್‌ 3 ರವರೆಗಿತ್ತು. ಕಾಯ್ದೆ, ನಿಯಮಾವಳಿಗಳ ಪ್ರಕಾರ, ಅಧ್ಯಕ್ಷ ಹುದ್ದೆ ಅವಧಿ ಜಯರಾಂ ಅವರ ನೇಮಕವಾದ 2019ರ ಜೂನ್ 20ರಿಂದ ಆರಂಭವಾಗಿದೆ. ಅದು 2022ರ ಮಾರ್ಚ್‌ 4ಕ್ಕೆ ಮುಗಿದಿದೆ. ಆ ಅವಧಿಯಲ್ಲಿ ಜಯರಾಂ ನಂತರ, ಆರು ಮಂದಿ ಅಧ್ಯಕ್ಷರಾಗಿದ್ದಾರೆ. ಹೀಗಾಗಿದ್ದರೂ, ಶಾಂತ್ ತಮ್ಮಯ್ಯ ಅವರ ನೇಮಕ ಆದೇಶದಲ್ಲಿ 2024ರ ನವೆಂಬರ್ 14ರವರೆಗೆ ಎಂದು ಅವಧಿ ತಪ್ಪಾಗಿ ನಮೂದಾಗಿದೆ. ಅದನ್ನು 2022ರಮಾರ್ಚ್‌ 4 ಎಂದು ಬದಲಿಸಿ, ತಿದ್ದುಪಡಿ ಆದೇಶವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಹೊರಡಿಸಿದೆ.

ಈ ಸುದ್ದಿ ಓದಿದ್ದೀರಾ? ಚೀನಾ ಭೂಪಟ ಸೇರಿದ ಅರುಣಾಚಲ ಪ್ರದೇಶ: ಏನಂತಾರೆ ಪ್ರಧಾನಿ ಮೋದಿ?

Advertisements
Bose Military School

ಈ ತಿದ್ದುಪಡಿ ಆದೇಶದಂತೆ, ಶಾಂತ್ ತಿಮ್ಮಯ್ಯ ಅವರ ಅವಧಿ ಮುಗಿದು ಹೋಗಿರುವುದರಿಂದ ಅವರನ್ನು ಅಧ್ಯಕ್ಷ ಹುದ್ದೆಯಿಂದ ಆಗಸ್ಟ್ 31ರಂದು ಬಿಡುಗಡೆ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಪಕ್ಷಪಾತ, ಕಾಯ್ದೆ ಉಲ್ಲಂಘನೆ ಆರೋಪ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಶಾಂತ್ ತಿಮ್ಮಯ್ಯ ನೇತೃತ್ವದ ‘ಸಿಂಗಲ್ ಸೋರ್ಸ್ ಕಮಿಟಿ’ ಸಭೆಯಲ್ಲಿ 17.85 ಕೋಟಿ ರೂ. ಮೌಲ್ಯದ ಜಾಗೃತಿ ಕಾರ್ಯ ಕ್ರಮಗಳನ್ನು ನಿರ್ವಹಿಸಲು ಕರ್ನಾ ಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ಕಾಯ್ದೆ -1999 ಅನ್ನು (ಕೆಟಿಪಿಪಿ) ಉಲ್ಲಂಘಿಸಲಾಗಿದೆ ಎಂದು ಜುಲೈ  3ರಂದು ಮಂಡಳಿಯ ಸದಸ್ಯ ಕಾರ್ಯದರ್ಶಿಯಾಗಿದ್ದ ಸೂರಿ ಪಾಯಲ್ ಅವರೇ ಸರ್ಕಾರಕ್ಕೆ ಪತ್ರ ಬರೆದಿದ್ದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಪಿ.ಆರ್. ರಮೇಶ್ ಅವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದರು. ಇದನ್ನೆಲ್ಲ ಆಧರಿಸಿ ಸರ್ಕಾರ ತನಿಖಾ ಸಮಿತಿ ರಚಿಸಿತ್ತು.

‘ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಜಾಗೃತಿ ಕಾರ್ಯಕ್ರಮಗಳ ಕಾರ್ಯಾದೇಶ ನೀಡುವಲ್ಲಿ ಕಾಯ್ದೆಗಳನ್ನು ಉಲ್ಲಂಘಿಸಿದ್ದಾರೆ. ಜಲಮಾಲಿನ್ಯ ಕಾಯ್ದೆ 1974 ಮತ್ತು ವಾಯುಮಾಲಿನ್ಯ ಕಾಯ್ದೆ 1981ರ ಪ್ರಕಾರ ಮಂಡಳಿ ಅಧ್ಯಕ್ಷರಿಗೆ ಯಾವುದೇ ಸಮಿತಿಯನ್ನು ರಚಿಸುವ ಅಧಿಕಾರ ಇಲ್ಲ. ಅಧ್ಯಕ್ಷ ಶಾಂತ್ ತಿಮ್ಮಯ್ಯ ಅದನ್ನು ಉಲ್ಲಂಘಿಸಿ ಏಕ ಸಮಿತಿಯನ್ನು ರಚಿಸಿದ್ದಾರೆ ಎಂದು ರಾಜ್ಯ ಸರ್ಕಾರ ನೇಮಿಸಿದ್ದ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ ಹೆಚ್ಚುವರಿ ನಿರ್ದೇಶಕ ಮಹದೇವ ಅವರ ತನಿಖಾ ಸಮಿತಿ ಪ್ರಾಥಮಿಕ ವರದಿ ನೀಡಿತ್ತು.

19.92 ಕೋಟಿ ರೂ. ಮೌಲ್ಯದ ಜಾಹೀರಾತು ನೀಡುವ ಬಗ್ಗೆ ಐದು ಸಂಸ್ಥೆಗಳ ಪ್ರಸ್ತಾವನೆ ಪರಿಗಣಿಸಿ, ನಾಲ್ಕು ಸಂಸ್ಥೆಗಳನ್ನು ಏಕಮೂಲ ಸಂಸ್ಥೆ ಎಂದು ಪರಿಗಣಿಸಿ, ಯೋಜಿತ ವ್ಯಕ್ತಿಗಳಿಗೆ ಗುತ್ತಿಗೆ ನೀಡುವ ಉದ್ದೇಶದಿಂದ, ಸ್ಪರ್ಧಾತ್ಮಕತೆ ನಿಯಂತ್ರಿಸುವ ಉದ್ದೇಶದಿಂದ ಪಕ್ಷಪಾತ ಎಸಗಿರುವುದು ಕಂಡುಬಂದಿದೆ ಎಂದೂ ವರದಿಯಲ್ಲಿ ತಿಳಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ʼಬಯಲು ಸೀಮೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿʼ

ಸುಮಾರು ವರ್ಷಗಳಿಂದ ಬಯಲು ಸೀಮೆ ಜಿಲ್ಲೆಗಳಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಹೋರಾಟ...

ಉಡುಪಿ | ಜಗತ್ತಿನಾದ್ಯಂತ ಪ್ರತೀ ವರ್ಷ ನೂರಾರು ಮುದ್ರಣ ಪತ್ರಿಕೆಗಳು ಮುಚ್ಚಿಕೊಳ್ಳುತ್ತಿವೆ – ರಾಜಾರಾಂ ತಲ್ಲೂರು

ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ...

ಹಾವೇರಿ | ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ತಹಶೀಲ್ದಾರ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಡಾ....

Download Eedina App Android / iOS

X