ಕೆಎಸ್‌ಆರ್‌ಟಿಸಿ | ರಾತ್ರಿ ಪಾಳಿ ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ ಥರ್ಮೋ ಫ್ಲಾಸ್ಕ್

Date:

Advertisements

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಸುರಕ್ಷತೆಗಾಗಿ ಮತ್ತೊಂದು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಿದ್ದು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಅಥವಾ ಚಾಲನೆ ಮಾಡುವ ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ ಥರ್ಮೋ ಫ್ಲಾಸ್ಕ್ ನೀಡಲು ನಿಗಮ ಮುಂದಾಗಿದೆ.

“ಹೌದು, ನಿಗಮದ 1,600 ಬಸ್‌ಗಳು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತವೆ. ಇತ್ತೀಚೆಗೆ, ನಡೆಸಿದ ಅಧ್ಯಯನದ ಪ್ರಕಾರ ನಿಗಮದ ವಾಹನಗಳು ರಾತ್ರಿ ವೇಳೆ ಕಾರ್ಯಾಚರಣೆಯಲ್ಲಿದ್ದಾಗ ಬೆಳಗಿನ ಜಾವ 3 ರಿಂದ 4 ಗಂಟೆಯ ಸಮಯದಲ್ಲಿ ಹೆಚ್ಚು ಅಪಘಾತಕ್ಕೆ ಒಳಪಟ್ಟಿರುವುದು” ತಿಳಿದುಬಂದಿದೆ.

“ಈ ಹಿನ್ನೆಲೆ, ನಿಗಮದ ಪ್ರಯಾಣಿಕರ ಹಾಗೂ ಸಿಬ್ಬಂದಿ ಸುರಕ್ಷತೆಯು ಪ್ರಥಮ ಆದ್ಯತೆಯಾಗಿದ್ದು, ಆ ನಿಟ್ಟಿನಲ್ಲಿ ರಾತ್ರಿ ವೇಳೆ, ಬಸ್‌ಗಳ ಕಾರ್ಯಾಚರಣೆ ಸಮಯದಲ್ಲಿ ಚಾಲಕರು ಸುರಕ್ಷಿತವಾಗಿ ವಾಹನ ಚಾಲನೆ ಮಾಡುವ ಅವಶ್ಯಕತೆ ಇರುವುದರಿಂದ, ಅವರ ಕಾರ್ಯ ಕ್ಷಮತೆಯನ್ನು ಉತ್ತಮಪಡಿಸುವ ಸಲುವಾಗಿ ಆ ಅವಧಿಯಲ್ಲಿ ರಿಫ್ರೆಸ್ ಆಗಲು ಕಾಫಿ-ಟೀ ಸೇವಿಸಿ (ಆ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಯಾವುದೇ  ಹೋಟೆಲುಗಳ ಲಭ್ಯತೆಯು ಇರದ ಕಾರಣ) ವಾಹನವನ್ನು ಸುರಕ್ಷಿತವಾಗಿ ಚಾಲನೆ ಮಾಡಲು ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ ಥರ್ಮೋ ಫ್ಲಾಸ್ಕ್ ಅನ್ನು 1,600 ಬಸ್‌ಗಳಿಗೆ ಒದಗಿಸಲಾಗಿದೆ” ಎಂದು ನಿಗಮ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯತಮೆ ಹಿಂದೆ ಬಿದ್ದಿದ್ದ ಸ್ನೇಹಿತನ ಮೇಲೆ ಪ್ರಿಯಕರ ಹಲ್ಲೆ: ಬಂಧನ

“ಈ ಕ್ರಮದಿಂದಾಗಿ ನಿಗಮದ ಚಾಲಕರುಗಳು ರಾತ್ರಿ ವೇಳೆಯಲ್ಲಿ ವಾಹನಗಳು ನಿಲ್ಲಿಸಿದ ಹೋಟೆಲ್ ಇತ್ಯಾದಿ ಸ್ಥಳಗಳಿಂದ ಟೀ/ಕಾಫಿಯನ್ನು ಫ್ಲಾಸ್ಕ್‌ನಲ್ಲಿ ಸಂಗ್ರಹಿಸಿಕೊಂಡು, ಬೆಳಗಿನ ಜಾವದಲ್ಲಿ ಬಳಸಿ ಸುರಕ್ಷತೆಯಿಂದ ವಾಹನವನ್ನು ಚಾಲನೆ ಮಾಡಿ ಪ್ರಯಾಣಿಕರನ್ನು ಅವರವರ ಗಮ್ಯ ಸ್ಥಳಕ್ಕೆ ಸುರಕ್ಷಿತವಾಗಿ ತಲುಪಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X