ಕೆಎಸ್‌ಆರ್‌ಟಿಸಿ | ವಿದ್ಯಾರ್ಥಿ ಬಸ್​ ಪಾಸ್​ ವಿತರಣೆ ಆರಂಭ

Date:

Advertisements

2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ಶಾಲೆಗೆ ತೆರಳುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವಿದ್ಯಾರ್ಥಿ ಬಸ್ ಪಾಸ್ ನೀಡಲು ಮುಂದಾಗಿದ್ದು, ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಹೇಳಿದೆ.

ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು ಎಂದು ಪ್ರಕಟಣೆ ಹೊರಡಿಸಿದೆ.

  • ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
  • ವಿದ್ಯಾರ್ಥಿಗಳು ಮೇ 31ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
  • ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ₹30 ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿ ಪಡೆಯುತ್ತಾರೆ.
  • ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು Declaration Forme ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್​​ಸೈಟ್​ನಲ್ಲಿ (https://ksrtc.karnataka.gov.in/studentpass) ಡೌನ್​ಲೋಡ್​​ ಮಾಡಿಕೊಳ್ಳಬೇಕು. ಅರ್ಜಿ ಸಲ್ಲಿಸುವಾಗ ಸಬ್ಮಿಟ್ ಮಾಡಬೇಕು.
  • ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸ್ ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಪಾಸುಗಳನ್ನು ಜೂ.1 ರಿಂದ ನಿಗದಿತ ಪಾಸ್ ಕೌಂಟರ್​ಗಳಲ್ಲಿ ವಿತರಿಸಲಾಗುತ್ತದೆ.
  • ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ಯುಪಿಐ ಮುಖೇನ ಪಾವತಿಸಿ ಪಾಸ್‌ ಪಡೆಯಬಹುದು.
  • ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಅಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು, ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯಬಹುದು. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸ್‌ಗಳನ್ನು ಪಡೆಯಬಹುದು.
  • ನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್​ ವಿಳಾಸ: https://ksrtc.karnataka.gov.in

ಪಾಸ್ ದರ

Advertisements
  • ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಾಸ್ ದರ – 150 ರೂ.
  • ಪ್ರೌಢ ಶಾಲಾ ವಿದ್ಯಾರ್ಥಿಗಳ ಪಾಸ್ ದರ- 750 ರೂ.
  • ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪಾಸ್​ ದರ – 150 ರೂ.
  • ಪ್ರೌಢ ಶಾಲಾ ವಿದ್ಯಾರ್ಥಿನಿಯರ (ಗಡಿ ಭಾಗದ ಆಚೆಗೆ) – 150 ರೂ.
  • ಕಾಲೇಜು- ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ- 1050 ರೂ.
  • ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
  • ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ (12 ತಿಂಗಳ ಅವದಿ) 1310 ರೂ.
  • ಐಟಿಐ, ಡಿಪ್ಲೊಮಾ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 160 ರೂ.
  • ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಪಾಸ್ ದರ- 1550 ರೂ.
  • ವೃತ್ತಿಪರ ಕೋರ್ಸ್ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
  • ಸಂಜೆ ಕಾಲೇಜು ವಿದ್ಯಾರ್ಥಿಗಳ ಪಾಸ್ ದರ- 1350 ರೂ.
  • ಸಂಜೆ ಕಾಲೇಜು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪಾಸ್ ದರ – 150 ರೂ. ಈ ಪಾಸ್​ಗಳನ್ನು ಪಡೆಯಲು ಆನ್​ ಲೈನ್​ನಲ್ಲೇ ಅರ್ಜಿ ಸಲ್ಲಿಸಬೇಕು.
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X