ರಾಯಚೂರು | ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿತ: ಓರ್ವ ಕಾರ್ಮಿಕ ಸಾವು; ನಾಲ್ವರಿಗೆ ಗಾಯ

Date:

ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗಿನ ಜಾವ 3 ಗಂಟೆ ಸುಮಾರಿಗೆ ನಡೆದಿದೆ.

- Advertisement -

ಹಟ್ಟಿ ಚಿನ್ನದ ಗಣಿಯ ಮಲ್ಲಪ್ಪ‌ ಶಾಫ್ಟ್ ವಿಭಾಗದಲ್ಲಿ‌ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೌನೇಶ್ (48) ಮೃತಪಟ್ಟಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಕಂಪನಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗುರುವಾರ ರಾತ್ರಿ ಪಾಳಿಯಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಿದ್ದರು. ಭೂಮಿಯ ಕೆಳಮೈ ವಿಭಾಗದಲ್ಲಿ ಕಾರ್ಯ ನಿರ್ವಹಿಸುವಾಗ ಭೂಕುಸಿತವಾಗಿ ಈ ದುರ್ಘಟನೆ ಸಂಭವಿಸಿದೆ.

ಚಿನ್ನ ತೆಗೆಯುವ ಮುನ್ನ ಕೆಳಮೈ ನಲ್ಲಿ ನಿರಂತರ ಹೇರ್ ಬ್ಲಾಸ್ಟ್ ಮಾಡುವ ವೇಳೆ ಇಂತಹ ದುರ್ಘಟನೆಗಳು ಸಂಭವಿಸುತ್ತವೆ. ಆದರೂ ಕಂಪನಿ ಕಾರ್ಮಿಕರಿಗೆ ರಕ್ಷಣೆ ನೀಡದೇ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಕಂಪನಿ 50 ಲಕ್ಷ ರೂ. ಪರಿಹಾರ ಘೋಷಿಸುವಂತೆ ಮೃತನ ಸಂಬಂಧಿಕರು, ಕಾರ್ಮಿಕ ಸಂಘಟನೆಗಳ ಮುಖಂಡರು ಒತ್ತಾಯಿಸಿದರು .

ಗಣಿ ಕಂಪನಿ ಆಸ್ಪತ್ರೆಗೆ ಕಾರ್ಯನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪ ಪ್ರಧಾನ ವ್ಯವಸ್ಥಾಪಕರು, ಅಧಿಕಾರಿಗಳು ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...