ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳ ಪತ್ತೆ: ತನಿಖೆಗೆ ಸ್ಪೀಕರ್ ಸೂಚನೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ಅನಾಥವಾಗಿ ಬಿದ್ದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಗಂಭೀರ ವಿಚಾರವನ್ನು ಗಣನೆಗೆ ತೆಗೆದುಕೊಂಡಿರುವ ವಿಧಾನಸಭಾ ಸ್ಪೀಕರ್ ಹಾಗೂ ಸ್ಥಳೀಯ ಶಾಸಕರೂ ಆಗಿರುವ ಯು.ಟಿ. ಖಾದರ್ ಫರೀದ್ ಅವರು, ಈ ಬಗ್ಗೆ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಯುಐಡಿಎಐ (UIDAI) ಅಧಿಕಾರಿಗಳಿಗೆ ಸೂಚಿಸಿದ್ದಾರೆ.
​
ಮಾರ್ಚ್ 03 ರಂದು ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ ಎಚ್ಚೆತ್ತ ಸಾರ್ವಜನಿಕರು ಪುದು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪಂಚಾಯಿತಿ ಅಧ್ಯಕ್ಷರು ಹಾಗೂ ಸ್ಥಳೀಯರು ಸೇರಿ ನದಿ ತೀರದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ. ನಂತರ ಈ ಕುರಿತು ಸ್ಪೀಕರ್ ಯು.ಟಿ. ಖಾದರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

- Advertisement -

ಇದನ್ನು ಓದಿದ್ದೀರಾ? ಫಿಫಾ ವಿಶ್ವಕಪ್ 2026 | ಯುದ್ಧಗಳ ಕಾರ್ಮೋಡದ ನಡುವೆ ಫುಟ್‌ಬಾಲ್ ಹಬ್ಬಕ್ಕೆ 100 ದಿನಗಳ ಕ್ಷಣಗಣನೆ
​
ಘಟನೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಸ್ಪೀಕರ್ ಯು.ಟಿ. ಖಾದರ್, ಬೆಂಗಳೂರಿನ ಖನಿಜ ಭವನದಲ್ಲಿರುವ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ (ಯುಐಡಿಎಐ) ಯೋಜನಾ ವ್ಯವಸ್ಥಾಪಕರಿಗೆ ಬುಧವಾರ (ಮಾ. 04) ಅಧಿಕೃತ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

​”ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕರ ಪ್ರಮುಖ ದಾಖಲೆಯಾದ ಆಧಾರ್ ಕಾರ್ಡ್‌ಗಳು ನದಿ ತೀರದಲ್ಲಿ ಪತ್ತೆಯಾಗಲು ಕಾರಣವೇನು ಮತ್ತು ಇದರ ಹಿಂದಿರುವ ದುಷ್ಕರ್ಮಿಗಳು ಯಾರು ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಕೂಡಲೇ ಪತ್ತೆ ಹಚ್ಚಿ, ತಮ್ಮ ಇಲಾಖೆಯ ಮುಖಾಂತರ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಸ್ಪೀಕರ್ ಯು.ಟಿ. ಖಾದರ್ ನಿರ್ದೇಶನ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ಕೈಲೊಂದು ಕ್ಯಾಮೆರಾ, ಜೀವಂತ ಬದುಕಿಗೆ ಮುಖಾಮುಖಿ

ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...