ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

Date:

ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು, ರಾಜಕೀಯ ನಾಯಕರು ಹಲವು ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪ್ರಕರಣವನ್ನು ಬಹಿರಂಗವಾಗಿ ಖಂಡಿಸಿದ ಕೆಲವೇ ಕೆಲವರಲ್ಲಿ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರು ಕೂಡ ಒಬ್ಬರು. ಇವರು ಈ ಬಗ್ಗೆ ಪದೇ ಪದೆ ದನಿ ಎತ್ತುತ್ತಾ ಬರುತ್ತಿದ್ದಾರೆ. ಮತ್ತೊಮ್ಮೆ ಈ ಕುರಿತು ಪೋಸ್ಟ್ ಮಾಡಿದ್ದಾರೆ.

- Advertisement -

ದರ್ಶನ್ ಬಂಧನ ವಿಚಾರದಲ್ಲಿ ಪೊಲೀಸರು ಯಾವುದೇ ಪ್ರಭಾವ, ಆಮಿಷಕ್ಕೆ ಒಳಗಾಗದೆ ಸರಿಯಾಗಿ ಕೆಲಸ ಮಾಡಿ ಪ್ರಕರಣದಲ್ಲಿ ಅಮಾಯಕ, ಮುಗ್ಧರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಬಗ್ಗೆ ಮತ್ತೇ ಪೋಸ್ಟ್‌ ಮಾಡಿದ ಅವರು, “ಕಾನೂನು ಉಲ್ಲಂಘಿಸಿ ಶ್ರೀಮಂತರು ಹಾಗೂ ಶಕ್ತಿಶಾಲಿಗಳು ಸುದ್ದಿಯಲ್ಲಿದ್ದಾರೆ. ಇವರ ಹಿಂಸಾತ್ಮಕ ಕೃತ್ಯಗಳಿಂದ ಬಡವರು, ಮಹಿಳೆಯರು ಮತ್ತು ಮಕ್ಕಳು ಬದುಕು ನಾಶವಾಗಿದೆ. ಇಂಥ ಅಪರಾಧ ಕೃತ್ಯಗಳನ್ನು ಹೊರಗಡೆ ತಂದ ನಮ್ಮ ರಾಜ್ಯದ ಪೊಲೀಸರು ಹಾಗೂ ಮಾಧ್ಯಮಗಳಿಗೆ ಹ್ಯಾಟ್ಸ್‌ ಆಫ್” ಎಂದಿದ್ದಾರೆ.

ಮುಂದುವರೆದು, “ಈ ವಿಚಾರಣೆಯನ್ನು ತೀವ್ರಗೊಳಿಸಿ, ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಾಗ ನ್ಯಾಯ ಖಂಡಿತ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ?” ಎಂದು ಪ್ರಜ್ವಲ್ ರೇವಣ್ಣ, ನಟ ದರ್ಶನ್, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸೂರಜ್ ರೇವಣ್ಣ ಪ್ರಕರಣವನ್ನು ಉಲ್ಲೇಖಿಸಿ ಹೇಳಿದ್ದಾರೆ.

ಟ್ವೀಟ್‌ನ ಕೊನೆಯಲ್ಲಿ ರಮ್ಯಾ ಅವರು ಪ್ರಜ್ವಲ್‌ ರೇವಣ್ಣ, ದರ್ಶನ್‌, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹಾಗೂ ಸೂರಜ್‌ ರೇವಣ್ಣ ಅವರ ಹೆಸರನ್ನು ಹ್ಯಾಷ್‌ ಟ್ಯಾಗ್‌ನಲ್ಲಿ ಬಳಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಾಹೀರಾತು ನಿಯಮ ತಿದ್ದುಪಡಿ | ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಬರಲಿದೆ ಹೊಸ ನೀತಿ : ಡಿಸಿಎಂ ಡಿಕೆಶಿ

ಸದ್ಯ ಇವರು ಮಾಡಿದ ಎಕ್ಸ್ ಪೋಸ್ಟ್​​ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ನೆಟ್ಟಿಗರು ಕಮೆಂಟ್ಸ್​ ಮಾಡುತ್ತಿದ್ದಾರೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ಪ್ರಜ್ವಲ್‌ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿದೆ. ಇದೀಗ, ಮಾಜಿ ಪ್ರಧಾನಿ ದೇವೇಗೌಡರ ಮತ್ತೊಬ್ಬ ಮೊಮ್ಮಗ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಪುತ್ರ ಸೂರಜ್‌ ರೇವಣ್ಣ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...