ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ: ಪ್ರತಿಪಕ್ಷ ನಾಯಕ ಆರ್‌ ಅಶೋಕ

Date:

ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಎಲ್ಲರೂ ಜಾತಿ ಸಮೀಕ್ಷೆಯಲ್ಲಿ ಹಾಗೂ ಸಿಎಂ ಬದಲಾವಣೆಯ ಕ್ರಾಂತಿಯಲ್ಲಿ ನಿರತರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಉತ್ತರ ಕರ್ನಾಟಕದಲ್ಲಿ ವಿವಿಧೆಡೆ ಮಳೆ ಹಾನಿ ಪರಿಶೀಲನೆ ವೇಳೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಷ್ಕಿಗೆ ಎಕರೆಗೆ 25,000 ರೂ. ನೀರಾವರಿ ಜಮೀನಿಗೆ ಎಕರೆಗೆ 50,000 ರೂ. ಪರಿಹಾರ ನೀಡಬೇಕು. ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ನೀಡಿದರೂ. ರೈತರು ಖರ್ಚು ಮಾಡಿದಷ್ಟಾದರೂ ನೀಡಲಿ. ಸರ್ಕಾರವೇ ಕಳಪೆ ಬೀಜ ನೀಡಿದೆ ಎಂದು ರೈತರು ಹೇಳಿದ್ದಾರೆ. ನಾನೂ ಸೇರಿದಂತೆ ಬಿಜೆಪಿ ನಾಯಕರು ಪ್ರವಾಹವಾದ ಕಡೆಗಳಲ್ಲಿ ಪ್ರವಾಸ ಮಾಡಿದ್ದೇವೆ. ಆದರೆ ಸರ್ಕಾರದ ವತಿಯಿಂದ ಯಾರೂ ಪ್ರವಾಸ ಮಾಡಿಲ್ಲ. ಬಿಜೆಪಿ ಅವಧಿಯಲ್ಲಿ ಹಾನಿಯಾದಾಗ, ದುಪ್ಪಟ್ಟು ಪರಿಹಾರ ನೀಡಲಾಗಿತ್ತು. ಬೆಳೆ ಪರಿಹಾರ ಹಾಗೂ ಮನೆ ಹಾನಿ ಪರಿಹಾರವನ್ನು ಡಬಲ್‌ ಮಾಡಲಾಗಿತ್ತು. ಮನೆ ಬಾಗಿಲಿಗೆ ನೀರು ಬಂದರೂ 24 ಗಂಟೆಯೊಳಗೆ ಪರಿಹಾರ ನೀಡಲಾಗಿತ್ತು. ಜೊತೆಗೆ ಪ್ರತಿ ಮನೆಗೆ ಆಹಾರ ಕಿಟ್‌ಗಳನ್ನು ನೀಡಲಾಗಿತ್ತು. ಕೇಂದ್ರ ಸರ್ಕಾರಕ್ಕೆ ಕಾಯದೆ ರಾಜ್ಯ ಸರ್ಕಾರದಿಂದಲೇ ಪರಿಹಾರ ವಿತರಣೆ ಮಾಡಲಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಇನ್ನೂ ಮಳೆ ಹಾನಿ ಸಮೀಕ್ಷೆಗೆ ಕಾಯುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸರ್ಕಾರವೀಗ ಜಾತಿ ಸಮೀಕ್ಷೆಯಲ್ಲಿ ನಿರತವಾಗಿದೆ. ಅಧಿಕಾರಿಗಳು ಅದರಲ್ಲೇ ಇದ್ದಾರೆ. ಹಾಗಾಗಿ ಯಾರೂ ಪ್ರವಾಹ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ. ಬೆಳೆ ಹಾನಿಯಾದ ಕೂಡಲೇ ನವದೆಹಲಿಗೆ ಹೋಗಿ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಿದ್ದೆವು. ಈಗ ಕಾಂಗ್ರೆಸ್‌ನ ಯಾವುದೇ ಸಚಿವರು ದೆಹಲಿಗೆ ಹೋಗಿ ಭೇಟಿ ಮಾಡುತ್ತಿಲ್ಲ. ಸಿಎಂ ಬದಲಾವಣೆ ಯಾವಾಗ ಎಂದು ಚರ್ಚೆಯಾಗುತ್ತಿದೆ. ಶಾಸಕರು ನಾನೇ ಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನರಮೇಧ ನಡೆಸಿದವರೊಂದಿಗೆ ಭಾರತ ನಿಲ್ಲುವುದು ಅಕ್ಷಮ್ಯ ಅಪರಾಧ

ಬಿಜೆಪಿ ವತಿಯಿಂದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ. ಮನೆ ಹಾನಿ, ರಸ್ತೆ ಹಾನಿ, ಬೆಳೆ ಹಾನಿ ಮೊದಲಾದವನ್ನು ಪರಿಶೀಲಿಸಲಾಗಿದೆ. ಜನರು ಬೀದಿಗೆ ಬಂದು ನಿಲ್ಲುವ ಸ್ಥಿತಿ ಬಂದಿದೆ. ಈ ಸರ್ಕಾರಕ್ಕೆ ಜನರ ಸಂಕಷ್ಟ ಅರಿವಿಗೆ ಬರುತ್ತಿಲ್ಲ. ಮಳೆ ಹಾನಿಯಾದಾಗ ಅದರ ವರದಿ ಪಡೆಯಬೇಕು. ಎಲ್ಲಿ ಎಷ್ಟು ಹಾನಿಯಾಗಿದೆ ಎಂದು ತಿಳಿದು, ಮುಖ್ಯಮಂತ್ರಿಗಳು ಸಚಿವರ ಜೊತೆ ಚರ್ಚಿಸಿ ತಂಡಗಳನ್ನು ಪ್ರತಿ ಜಿಲ್ಲೆಗಳಿಗೆ ಕಳುಹಿಸಬೇಕು. ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡಕ್ಕೆ, ರಾಜ್ಯಕ್ಕೆ ಭೇಟಿ ಮಾಡಲು ಹೇಳಬೇಕು. ಸಚಿವರಿಗೆ ಕೆಲಸ ಕೊಡದೆ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ತೋರಿದ್ದಾರೆ. ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆಯೇ ಹೊರತು, ಯಾವ ಕ್ರಮ ಕೈಗೊಂಡಿದ್ದೇನೆ ಎನ್ನುತ್ತಿಲ್ಲ ಎಂದರು.

ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸೋಯಾಬೀನ್‌ ಬೆಳೆ ಹಾನಿ ವೀಕ್ಷಿಸಲಾಗಿದೆ. ಸರ್ಕಾರ ಬದುಕಿದ್ದರೆ ಕೇಂದ್ರ ಸರ್ಕಾರದ ಬಳಿ ಹೋಗಿ ಚರ್ಚಿಸಬೇಕಿತ್ತು. ಮೊದಲು ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿದ ಬಳಿಕ, ಕೇಂದ್ರ ಸರ್ಕಾರ ಪರಿಹಾರ ನೀಡುತ್ತದೆ. ಇದು ಸಾಮಾನ್ಯವಾಗಿ ನಡೆಯುವ ಪ್ರಕ್ರಿಯೆ. ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆದರೂ ಪ್ರಯೋಜನವಿಲ್ಲ. ರೈತರ ಜೊತೆ ನಿಂತು ಹೆಚ್ಚು ಪರಿಹಾರ ನೀಡುತ್ತೇನೆ ಎನ್ನಬೇಕಿತ್ತು. ಗ್ಯಾರಂಟಿಯೂ ಕೊಡಲ್ಲ, ಪರಿಹಾರವೂ ಇಲ್ಲ ಎಂಬಂತಾಗಿದೆ ಎಂದರು.

ನವೆಂಬರ್‌ನಲ್ಲಿ ಸಿಎಂ ಬದಲಾವಣೆಯಾಗಲಿದೆ ಎಂದು ನಾನು ಹೇಳಿದ್ದೆ. ಕ್ರಾಂತಿಯಾಗಲಿದೆ ಎಂದಿದ್ದ ರಾಜಣ್ಣ ಮನೆಗೆ ಹೋಗಿದ್ದಾರೆ. ಸಿಎಂ ಬದಲಾವಣೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ನಿಜ. ಸಿಎಂ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವುದಿಲ್ಲ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಠ ಬಿಡುವುದಿಲ್ಲ. ಆದರೆ ಬಿಜೆಪಿಯಿಂದ ಸರ್ಕಾರ ರಚನೆ ಮಾಡುವುದಿಲ್ಲ. ಚುನಾವಣೆ ನಡೆಯುವುದೇ ಸೂಕ್ತ ಎನ್ನುವುದು ನಮ್ಮೆಲ್ಲರ ಅಭಿಪ್ರಾಯ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ರಸ್ತೆಗಳು ಗುಂಡಿ ಬಿದ್ದಿವೆ. ಬೆಂಗಳೂರಿನಲ್ಲಿ ಹಳ್ಳ ಇಲ್ಲದ ರಸ್ತೆಯೇ ಇಲ್ಲ. ಇಂತಹ ಪರಿಸ್ಥಿತಿ ಈಗ ಇದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...