ವಿಧಾನ ಪರಿಷತ್ ಚುನಾವಣೆ | 2 ದಿನ ಮಾತ್ರ ಮದ್ಯ ಮಾರಾಟ ಬಂದ್

Date:

Advertisements

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ವಿಧಿಸಿದ್ದ ನಿರ್ಬಂಧ‌ದಲ್ಲಿ ಮಾರ್ಪಾಡು ಮಾಡಲಾಗಿದೆ. ಮತದಾನದ ದಿನ ಮತ್ತು ಎಣಿಕೆ‌‌ ದಿನದಂದು ಮಾತ್ರ ಮದ್ಯ ಮಾರಾಟಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿ ಆದೇಶ ಪ್ರಕಟಿಸಿದೆ.

ಫೆ.16 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮತ್ತು ಫೆ.20 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ‌‌ನ್ಯಾ.ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದೆ.

ಮದ್ಯ ಮಾರಾಟ ನಿಷೇಧ ಒಂದು ದಿನಕ್ಕೆ ಸೀಮಿತಗೊಳಿಸಿ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು‌. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರಿದ್ದ ವಿಭಾಗೀಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದೆ.

Advertisements

ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, “ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 135(ಸಿ) ಪ್ರಕಾರ ಯಾವುದೇ ಚುನಾಚಣೆ ಘೋಷಣೆ ಆದರೂ, ಚುನಾವಣೆಗೂ ಮುನ್ನ 48 ಗಂಟೆಗಳ ಕಾಲ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಬೇಕು ಎಂದು ತಿಳಿಸಲಾಗಿದೆ. ಅದರಂತೆ ಸರ್ಕಾರ ವಿಧಾನ ಪರಿಷತ್ ಉಪಚುನಾವಣೆಗೆ ಮತದಾನದ ದಿನಕ್ಕೂ ಮುನ್ನ 48 ಗಂಟೆಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ವಿವರಿಸಿದರು. ಅಲ್ಲದೆ, ಏಕ ಸದಸ್ಯಪೀಠ ಮದ್ಯಮಾರಾಟವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಿರುವ ಆದೇಶ ಕಾನೂನಿಗೆ ವಿರುದ್ದವಾಗಿದೆ” ಎಂದರು.

ಜತೆಗೆ, ಮದ್ಯ ಮಾರಾಟ ಮಾಡುವುದು ಮೂಲಭೂತ ಹಕ್ಕು ಅಲ್ಲ. ಆದ್ದರಿಂದ ಈ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು.‌ ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಜಿಲ್ಲಾಧಿಕಾರಿಗಳ ಆದೇಶವನ್ನು ಎತ್ತಿಹಿಡಿದಿದೆ.

ಅಲ್ಲದೆ, ಮತದಾನಕ್ಕೂ ಮುನ್ನ 48 ಗಂಟೆಗಳು ಹಾಗೂ ಮತ ಎಣಿಕೆ ದಿನದಲ್ಲಿ ಆಹಾರ ಪೂರೈಸಲು ಹೋಟೆಲ್‌ ಮತ್ತು ರೆಸ್ಟೋರೆಂಟ್ ಗಳಿಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು ?

ವಿಧಾನ ಪರಿಷತ್‌ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ, ಫೆ.14ರಂದು ಸಂಜೆ 5ರಿಂದ ಮತದಾನ ನಡೆಯುವ ಫೆ.16ರ ಮಧ್ಯರಾತ್ರಿ 12ರವರೆಗೆ ಮತ್ತು ಮತ ಎಣಿಕೆ ದಿನವಾದ ಫೆ.20ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ನಗರದ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿತ್ತು.

ಈ ಸುದ್ದಿ ಓದಿದ್ದೀರಾ? ಪರಿಷತ್ ಉಪಚುನಾವಣೆ | ಅರ್ಹ ಶಿಕ್ಷಕ ಮತದಾರರಿಗೆ ಫೆ.16 ರಂದು ವಿಶೇಷ ಸಾಂದರ್ಭಿಕ ರಜೆ

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ನ್ಯಾಯಪೀಠ, ಚುನಾವಣೆ ಮುಕ್ತಾಯಕ್ಕೆ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ‌ ಮಾರಾಟ ನಿರ್ಬಂಧಿಸಬಹುದು ಎಂಬ ಸರ್ಕಾರದ ವಾದವನ್ನು ತಿರಸ್ಕರಿಸಿತು.

ಜತೆಗೆ, ಮತದಾನದ ದಿನವಾದ ಫೆ.16 ಮತ್ತು ಮತ ಎಣಿಕೆ ದಿನವಾದ ಫೆ.20ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಮಾತ್ರ ನಗರದಲ್ಲಿ ಮದ್ಯ ಮಾರಾಟ‌ಕ್ಕೆ ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡಿತು. ಆ ಮೂಲಕ ನಗರ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ಆಯುಕ್ತರ ಆದೇಶವನ್ನು ಮಾರ್ಪಡಿಸಿತು. ಇದನ್ನು ಪ್ರಶ್ನಿಸಿ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X