ಮಸಣ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ: ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ

Date:

Advertisements

ಮಸಣ ಕಾರ್ಮಿಕರು ಯಾರೂ ಅನುಕೂಲವಂತರಲ್ಲ, ಶೋಷಿತ ಸಮುದಾಯ, ಆರ್ಥಿಕವಾಗಿ ತೀರಾ ಹಿಂದುಳಿದ ಸಮುದಾಯದ ಜನ ಮಾತ್ರ ಈ ರೀತಿ ಕೆಲಸ ಮಾಡುವುದು, ಅವರ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ನೀಡಬೇಕು. ಬೇಡಿಕೆಗಳನ್ನು ಈಡೇರಿಸುವ ಮೂಲಕ ಅವರ ನೆರವಿಗೆ ನಿಲ್ಲಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಬುಧವಾರದಿಂದ ಪ್ರಾರಂಭವಾದ ಬೃಹತ್ ಪ್ರತಿಭಟನಾ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಅವರು ಮಸಣ ಕಾರ್ಮಿಕರ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಘೋಷಿಸಿದರು.

ಮಸಣ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ಹುಟ್ಟು ಆಕಸ್ಮಿಕ ಸಾವು ಅನಿವಾರ್ಯ. ಸತ್ತಾಗ ಸೇವೆ ಮಾಡುವವರಿಗೂ ಸಾಕಷ್ಟು ಸಮಸ್ಯೆಗಳಿವೆ. ಮಸಣದಲ್ಲಿ ಕೆಲಸ ಮಾಡುವವರಿಗೆ ಯಾವುದೇ ಭದ್ರತೆ ಇಲ್ಲ. ಸಂವಿಧಾನದ ಪ್ರಕಾರ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಆದರೆ, ಮಸಣ ಕಾರ್ಮಿಕರು ಇಂದು ಸಮಸ್ಯೆಯ ಜೊತೆಯೇ ಬದುಕುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ₹30 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳಿದೆ. ಅದರಲ್ಲಿ $11 ಸಾವಿರ ಕೋಟಿಯನ್ನು ಗ್ಯಾರಂಟಿಗಳ ಅನುಷ್ಠಾನಕ್ಕೆ ಖರ್ಚು ಮಾಡಲಾಗಿದೆ. ಕೂಡಲೇ ಮಸಣ ಕಾರ್ಮಿಕರು ಬೇಡಿಕೆ ಇಟ್ಟಿರುವ 10 ಬೇಡಿಕೆಗಳನ್ನು ಈಡೇರಿಸಲಿ, ಅವರನ್ನು ನೌಕರರು ಎಂದು ಪರಿಗಣಿಸಿ” ಎಂದರು.

“ಚಿತಾಗಾರಗಳಲ್ಲಿ ಕೆಲಸ ಮಾಡುವವರಿಗೆ ಉದ್ಯೋಗ ಭದ್ರತೆ ಒದಗಿಸಿ ಕನಿಷ್ಠ ವೇತನ ನೀಡುವುದಾಗಿ ಹೇಳಿದ್ದಾರೆ. ಆದರೆ, ಇದೆಲ್ಲವೂ ಬಾಯಿ ಮಾತಿನಲ್ಲಿದ್ದು ಮಸಣ ಕಾರ್ಮಿಕರನ್ನು ಕಡೆಗಣಿಸಲಾಗಿದೆ. ಮಸಣ ಕಾರ್ಮಿಕರ ಹೋರಾಟದಲ್ಲಿ ನಾನು ಎಂದಿಗೂ ಜೊತೆಯಾಗಿರುತ್ತೇನೆ. ಮುಖ್ಯಮಂತ್ರಿಗಳ ಭೇಟಿಗೂ ಜೊತೆ ಬರುತ್ತೇನೆ. ಯಾವುದೇ ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಹೋರಾಟ ಮಾಡಿದರೂ ಆಮ್ ಆದ್ಮಿ ಪಕ್ಷ ನಿಮ್ಮ ಜೊತೆ ಕೈ ಜೋಡಿಸಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕ್ರಿಸ್​​​ಮಸ್​​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ : ತುಷಾರ್ ಗಿರಿನಾಥ್

ಮಸಣ ಕಾರ್ಮಿಕರ ಪ್ರಮುಖ ಬೇಡಿಕೆಗಳು

ಪ್ರತಿ ಸಾರ್ವಜನಿಕ ಮಸಣಕ್ಕೆ ಕಾರ್ಮಿಕರೊಬ್ಬರನ್ನು ಸ್ಥಳೀಯ ಸಂಸ್ಥೆಗಳ ಮಸಣ ನಿರ್ವಾಹಕ ನೌಕರನನ್ನಾಗಿ ನೇಮಿಸಿಕೊಳ್ಳಬೇಕು. ಗುಂಡಿ ಅಗೆಯುವ ಮತ್ತು ಮುಚ್ಚುವ ಕೆಲಸವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗವೆಂದು ಪರಿಗಣಿಸಿ, ಗುಂಡಿ ಅಗೆಯುವ ಮತ್ತು ಮುಚ್ಚುವ ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಕನಿಷ್ಠ ₹3500 ಕೂಲಿ ಪಾವತಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಲಾಗಿದೆ.

45 ವರ್ಷ ಮೇಲ್ಪಟ್ಟ ಮಸಣ ಕಾರ್ಮಿಕರಿಗೆ ಮಾಸಿಕ ₹3,000 ಸಹಾಯಧನ ನೀಡಬೇಕು. ಗುಂಡಿ ಅಗೆಯಲು ಸಲಕರಣೆ ಒದಗಿಸಬೇಕು. ಅವರಿಗೆ ಭವಿಷ್ಯ ನಿಧಿ ಯೋಜನೆ ಜಾರಿ ಮಾಡಬೇಕು.

ಮಸಣ ಕಾರ್ಮಿಕರಿಗೆ 5 ಎಕರೆ ನೀರಾವರಿ ಜಮೀನು ಉಚಿತವಾಗಿ ನೀಡಬೇಕು. ಹಿತ್ತಲು ನಿವೇಶನ ಸಹಿತ $10 ಲಕ್ಷ ಮೌಲ್ಯದ ಮನೆ ನೀಡಬೇಕು. ಮಸಣ ಕಾರ್ಮಿಕ ಕುಟುಂಬದ ಸದಸ್ಯರಿಗೆ ಮಾಸಿಕ 10 ಕೆ.ಜಿ. ಸಮಗ್ರ ಆಹಾರ ಮತ್ತು ಆರೋಗ್ಯ ಸಾಮಗ್ರಿ ಕಿಟ್ ವಿತರಿಸಬೇಕು. ಕೋವಿಡ್ ವಿಮೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಡಿ ಮಸಣ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷದಲ್ಲಿ ಕನಿಷ್ಠ 200 ದಿನ ಉದ್ಯೋಗ ನೀಡಬೇಕು. ಉದ್ಯೋಗ ನೀಡದೇ ಇರುವಾಗ ಹೈನುಗಾರಿಕೆ ಮತ್ತಿತರ ಉದ್ಯೋಗದಲ್ಲಿ ತೊಡಗಲು 75% ಸಹಾಯಧನ ಇರುವಂತೆ ₹5 ಲಕ್ಷ ಸಾಲ ನೀಡಬೇಕು.

ಮಸಣ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು. ಉದ್ಯೋಗ ಸಿಗದ 25 ವರ್ಷ ಮೇಲ್ಪಟ್ಟ ವಿದ್ಯಾವಂತರಿಗೆ ತಲಾ 10 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ ನೀಡಬೇಕು ಮತ್ತು ಎಲ್ಲ ಗ್ರಾಮಗಳಲ್ಲಿ ದಲಿತರಿಗೆ ಮಸಣಕ್ಕೆ ಸ್ಥಳ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಮಸಣ ಕಾರ್ಮಿಕ ಸಂಘ ಒತ್ತಾಯಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X