ನೆಪ ಹೇಳಿ ಸಾಮೂಹಿಕವಾಗಿ ಸರ್ಕಾರಿ ಶಾಲೆ ಮುಚ್ಚುವ ಪ್ರಕ್ರಿಯೆ ನಿಲ್ಲಲಿ

Date:

Advertisements

“ಶಾಲೆಗಳಲ್ಲಿ ಮಕ್ಕಳು ಮತ್ತು ಕಲಿಕೆಯೇ ಕೇಂದ್ರಬಿಂದು. ಮಕ್ಕಳಿಗೆ ಶಿಕ್ಷಣದ ಮೂಲಭೂತ ಹಕ್ಕಿನ ಭಾಗವಾಗಿ ನೀಡಬೇಕಾದ ಹಲವು ಉತ್ತೇಜಕಗಳು, ಅಗತ್ಯ ಮೂಲಸೌಕರ್ಯಗಳು ಹಾಗೂ ಪಾಠ ಮಾಡಲು ಅರ್ಹ ಶಿಕ್ಷಕರನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು. ಮುಖ್ಯವಾಗಿ ಯಾವುದೇ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಕ್ರಿಯೆ ಪೂರ್ಣವಾಗಿ ನಿಲ್ಲಬೇಕು” ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಹೇಳಿದೆ.

“ಶಾಲೆ ಪ್ರಾರಂಭವಾಗಿ ತಿಂಗಳುಗಳೇ ಕಳೆದು ಹೋದರೂ, ಇನ್ನೂ ಮಕ್ಕಳ ಕೈಗೆ ಪಠ್ಯಪುಸ್ತಕ ಸೇರಿಲ್ಲ. ಸಮವಸ್ತ್ರ, ಶೂ, ಸಾಕ್ಸ್ ಸಕಾಲಕ್ಕೆ ದೊರೆತಿಲ್ಲ. ಎಂಟರಿಂದ ಒಂಭತ್ತನೇ ತರಗತಿಗೆ ಹೋಗುತ್ತಿರುವ ಮಕ್ಕಳಿಗೆ ಕಳೆದ ಮೂರು ವರ್ಷದಿಂದ ಉಚಿತ ಬೈಸಿಕಲ್ ಸಿಕ್ಕಿಲ್ಲ” ಎಂದು ವೇದಿಕೆ ತಿಳಿಸಿದೆ.

“ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಸದನದಲ್ಲಿ ಸ್ಥಗಿತಗೊಂಡಿರುವ ಯೋಜನೆಯನ್ನು ಪುನರಾರಂಭಿಸಲಾಗುವುದು. ಮಕ್ಕಳಿಗೆ ಮುಂದಿನ ವರ್ಷದಿಂದ ಬೈಸಿಕಲ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದು ಸ್ವಾಗತಾರ್ಹ. ಇದರ ಜತೆಗೆ, ಮಕ್ಕಳಿಗೆ ಉಳಿದ ಉತ್ತೇಜಕಗಳು ಸಕಾಲಕ್ಕೆ ದೊರೆಯುವಂತೆ ಕ್ರಮವಹಿಸುವುದು ಕೂಡ ಆದ್ಯತೆಯ ವಿಷಯವಾಗಬೇಕು” ಎಂದು ಹೇಳಿದೆ.

Advertisements

“ಸಚಿವರು ಮಕ್ಕಳ ಕಲಿಕೆಗೆ ಪೂರಕವಾಗಿರುವ ವಿಷಯಗಳ ಬಗ್ಗೆ ಆದ್ಯತೆಯ ಮೇಲೆ ಗಮನ ಹರಿಸಿ, ಮುಂದಿನ ಶೈಕ್ಷಣಿಕ ವರ್ಷ 2024-25 ರಿಂದಲಾದರೂ ಎಲ್ಲ ಉತ್ತೇಜಕಗಳನ್ನು ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಒದಗಿಸಬೇಕು” ಎಂದು ವೇದಿಕೆ ಒತ್ತಾಯಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅತ್ಯಾಚಾರ ಆರೋಪಿಯನ್ನು ದುಬೈನಲ್ಲಿ ಸೆರೆಹಿಡಿದ ಪೊಲೀಸರು

ಹಕ್ಕೊತ್ತಾಯಗಳು

  1. ಎಲ್ಲ ಮಕ್ಕಳಿಗೆ ಪರಿಷ್ಕೃತ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ, 2 ಜತೆ ಸಮವಸ್ತ್ರ ಮತ್ತು 2 ಜತೆ ಷೂ ಹಾಗೂ ಸಾಕ್ಸ್ ವಿತರಣೆ ಮಾಡಬೇಕು.
  2. ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಮಾಡಬೇಕು. ವಿಳಂಬವಾದಲ್ಲಿ ಶಾಲೆ ಪ್ರಾರಂಭದಲ್ಲಿಯೇ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು.
  3. ಏಕೋಪಾಧ್ಯಾಯ / ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಖಾಯಂ ಶಿಕ್ಷಕರ ನೇಮಕ ಮಾಡಬೇಕು. ಖಾಯಂ ಶಿಕ್ಷಕರನ್ನು ಅತ್ಯಗತ್ಯವಿರುವ ಗ್ರಾಮೀಣ ಪ್ರದೇಶಗಳಿಗೆ ನಿಯೋಜನೆ ಮಾಡಬೇಕು.
  4. ಪ್ರೌಢ ಶಿಕ್ಷಣ ಮುಂದುವರಿಸಲು ಏಳನೇ ತರಗತಿಯಿಂದ ಎಂಟು ಅಥವಾ ಎಂಟರಿಂದ ಒಂಭತ್ತನೇ ತರಗತಿಗೆ ಹೋಗುತ್ತಿರುವ ಮಕ್ಕಳಿಗೆ ಉಚಿತ ಬೈಸಿಕಲ್ ನೀಡಬೇಕು.
  5. ಯಾವುದೇ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ/ ವಿಲೀನಗೊಳಿಸುವ ಪ್ರಕ್ರಿಯೆ ಪೂರ್ಣವಾಗಿ ನಿಲ್ಲಬೇಕು.
  6. ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಭಾಗವಾಗಿ ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತಿ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು.
  7. ಈ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸ್ಥಿತಿಗತಿ ಅರಿಯಲು ಸಿ ಆರ್ ಪಿ, ಶಿಕ್ಷಣ ಸಂಯೋಜಕರು, ಬಿಆರ್‌ಸಿ, ಬಿಆರ್‌ಪಿ, ಬಿಇಒ, ಡಿಡಿಪಿಐ ಮತ್ತು ಡಯಟ್ ಸಿಬ್ಬಂದಿ ಶಾಲೆಗಳಿಗೆ ಭೇಟಿ ನೀಡಿ ವಿವರವಾದ ವರದಿ ಸಲ್ಲಿಸಲು ಕ್ರಮ ವಹಿಸಬೇಕು.
  8. ಸಂವಿಧಾನದಲ್ಲಿನ ಮೂಲಭೂತ ಹಕ್ಕಾಗಿರುವ 21ಎ ಅನ್ನು ಕೊಡಮಾಡುವ ಶಿಕ್ಷಣ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ, ಪರಿಣಾಮಕಾರಿಯಾಗಿ ಜಾರಿಗೊಳಿಸಲು ಹಾಗೂ ನಿಗದಿತ ಸಮಯದಲ್ಲಿ ಎಲ್ಲ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಕಾಲಮಿತಿ ಯೋಜನೆ ರೂಪಿಸಬೇಕು.
  9. ಶಾಲಾ ಹಂತದಲ್ಲಿ ಸಂವಿಧಾನ ಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಶಾಲಾ ಅಭಿವೃದ್ಧಿ ಮತ್ತು ಮೇಲು ಉಸ್ತುವಾರಿ ಸಮಿತಿಗಳನ್ನು ಪ್ರಜಾಸತ್ತಾತ್ಮಕವಾಗಿ ರಚಿಸಿ ಬಲವರ್ಧನೆಗೊಳಿಸಲು ಪರಿಣಾಮಕಾರಿ ತರಬೇತಿ ಒದಗಿಸಲು ಕ್ರಮ.
  10. ಬಾಲ್ಯಪೂರ್ವ ಆರೈಕೆ ಮತ್ತು ಶಿಕ್ಷಣವೂ ಒಳಗೊಂಡಂತೆ ಕನಿಷ್ಠ 12ನೆಯ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸಲು ಸಂವಿಧಾನ ಹಾಗೂ ಶಿಕ್ಷಣಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

Download Eedina App Android / iOS

X