ಕುರುಬರಾಗಿ ನಾವು ಜನಿಸಿರಬಹುದು, ಅಪ್ಪಟ ವಿಶ್ವ ಮಾನವರಾಗಿ ಬಾಳೋಣ: ಸಿಎಂ ಸಿದ್ದರಾಮಯ್ಯ ಕರೆ

Date:

Advertisements

ಕನಕದಾಸರು ಆಕಸ್ಮಿಕವಾಗಿ ಕುರುಬರಾಗಿ ಹುಟ್ಟಿದ ವಿಶ್ವಶ್ರೇಷ್ಠ ಮಾನವೀಯ ಚೈತನ್ಯರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ದಾಸಪಂಥಕ್ಕೆ ಪ್ರವೇಶಿಸುವ ಮೊದಲು ಕನಕರು ಪಾಳೇಗಾರರಾಗಿದ್ದರು. ಆದಿಕೇಶವನ ಭಕ್ತರಾಗಿ ದಾಸರಾಗಿ, ದಾಸಶ್ರೇಷ್ಠರೂ ಆದರು. ಆದರೆ ಕನಕದಾಸರ ಕೀರ್ತನೆಗಳಲ್ಲಿ ಅತ್ಯುನ್ನತ ಮಾನವೀಯ ಮೌಲ್ಯಗಳಿವೆ ಎಂದು ವಿವರಿಸಿದರು.

ನಾನು ಕುರುಬನಾಗಿ ಜನಿಸಿದ್ದೇನೆ. ನೀವುಗಳೂ ಕುರುಬ ಸಮುದಾಯದಲ್ಲಿ ಜನಿಸಿರಬಹುದು. ಹಾಗಂದ ಮಾತ್ರಕ್ಕೆ ಕುರುಬರಾಗೇ ಸಾಯಬೇಕಾ? ಅಪ್ಪಟ ಮನುಷ್ಯರಾಗಿ ಸಾಯಬೇಕು ಅಲ್ವಾ ಎಂದರು.

Advertisements

ಕನಕದಾಸರನ್ನು ಶೂದ್ರ ಜಾತಿಯವ ಎನ್ನುವ ಕಾರಣಕ್ಕೆ ಕೃಷ್ಣನ ದರ್ಶನಕ್ಕೆ ಬಿಡಲಿಲ್ಲ. ಕುವೆಂಪು ಅವರು ಹೇಳಿದಂತೆ ನಾವೆಲ್ಲಾ ವಿಶ್ವ ಮಾನವರಾಗಲು ಸಾಧ್ಯವಾಗದಿದ್ದರೂ ವಿಶ್ವ ಮಾನವರಾಗುವ ಮಾರ್ಗದಲ್ಲಿ ಸಾಗಬೇಕು. ಆ ಮೂಲಕ ನಾವೆಲ್ಲಾ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಕನಕದಾಸರ 500 ನೇ ಜಯಂತಿಯನ್ನು ಮಾಡಿದ್ದು ನಾನೇ. ಅಲ್ಲಿಯವರೆಗೂ 400 ನೇ ಜಯಂತಿಯನ್ನು ಯಾರೂ ಆಚರಿಸಿರಲಿಲ್ಲ.

ಸುಖಾ ಸುಮ್ಮನೆ ಎಲ್ಲರಿಗೂ ಚಪ್ಪಾಳೆ ತಟ್ಟಬೇಡಿ. ನಿಮ್ಮಲ್ಲೊಂದು ತತ್ವ ಇರಲಿ. ಮೂರು ವರ್ಷಗಳಿಂದ ಕನಕಶ್ರೀ ಪ್ರಶಸ್ತಿಯನ್ನೇ ಕೊಟ್ಟಿಲ್ಲ. ಆದರೂ ಅವರಿಗೂ ಚಪ್ಪಾಳೆ ತಟ್ಟೋದು, ಇಲ್ಲಿ ಬಂದು ನನಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ನಿಮಗೆ ಸ್ಪಷ್ಟತೆ ಇರಲಿ. ಕನಕದಾಸರು ಒಂದು ಜಾತಿಗೆ ಸೇರಿದವರಲ್ಲ. ಕುರುಬ ಜಾತಿಯವರನ್ನು ಮೆಚ್ಚಿಸಲು ಕನಕ ಜಯಂತಿ ಮಾಡುತ್ತಿಲ್ಲ. ಕನಕದಾಸರು ವಿಶ್ವ ಮಾನವರಾಗಿದ್ದರು. ಅವರ ತತ್ವಾದರ್ಶಗಳನ್ನು ಪಾಲಿಸಿ ವಿಶ್ವ ಮಾನವರಾಗೋಣ ಎಂದು ಆಶಿಸಿದರು.

ಜಾತಿ ಗಣತಿ ಆರಂಭಿಸಿದ್ದೇ ನಾನು

ಪ್ರತಿಯೊಂದು ಜಾತಿ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯುವುದಕ್ಕೆ ಮತ್ತು ಸಂವಿಧಾನದ ಆಶಯಗಳನ್ನು ಕಾರ್ಯಕ್ರಮಗಳ ಮೂಲಕ ಎಲ್ಲಾ ಸಮುದಾಯಗಳಿಗೂ ತಲುಪಿಸುವುದಕ್ಕಾಗಿ ನಾನೇ ಜಾತಿಗಣತಿ ಆರಂಭಿಸಿದೆ ಎಂದು ವಿವರಿಸಿದರು.

ಅಂಬೇಡ್ಕರ್ ಅವರು ಹೇಳಿದ್ದ ಎಚ್ಚರಿಕೆ ಮಾತುಗಳನ್ನು ಮರೆಯಬಾರದು. ಜಾತಿ ಗಣತಿಗೆ ಕಾಂಗ್ರೆಸ್ ಬದ್ದವಾಗಿದೆ. ಇಡೀ ದೇಶದಲ್ಲಿ ಜಾರಿ ಮಾಡಲು ಕಾಂಗ್ರೆಸ್ ಬದ್ದವಾಗಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಂತ ಶ್ರೇಷ್ಠ ಕನಕದಾಸ ಜಯಂತಿಯನ್ನು ಉದ್ಘಾಟಿಸಿ ಸಮಾಜ ಸೇವಕ ದಿವಂಗತ ಲಿಂಗಪ್ಪ ಅವರಿಗೆ ಮರಣೋತ್ತರ ಕನಕಶ್ರೀ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಪಂಚ ರಾಜ್ಯಗಳ ಎಕ್ಸಿಟ್ ಪೋಲ್: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಸಾಧ್ಯತೆ

ಕನಕದಾಸರ ಕುರಿತ ಸಾಹಿತ್ಯ ಕೃಷಿ ಮಾಡದಿದ್ದರೂ ಕನಕದಾಸರ ತತ್ವಾದರ್ಶಗಳನ್ನು ಪಾಲಿಸುತ್ತಾ, ಜನ ಸೇವಕರಾಗಿದ್ದ ಲಿಂಗಪ್ಪ ಅವರನ್ನು ಕನಕಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಅತ್ಯಂತ ಸೂಕ್ತ ಎಂದು ಮೆಚ್ಚುಗೆ ಸೂಚಿಸಿ ಲಿಂಗಪ್ಪ ಅವರ ಕುಟುಂಬಕ್ಕೆ ಅಭಿನಂದನೆ ಸಲ್ಲಿಸಿದರು.

ತಿಂಥಣಿಯ ಕನಕಗುರು ಪೀಠದ ಸಿದ್ದರಾಮಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಮಾಜಿ ಸಚಿವ ಎಚ್. ಎಂ. ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X