ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯ; ಉಲ್ಲಂಘಿಸಿದ ವಾಣಿಜ್ಯ ಮಳಿಗೆಗಳ ಪರವಾನಗಿ ಅಮಾನತು

Date:

ಫೆ.28 ರೊಳಗೆ 60% ಕನ್ನಡವುಳ್ಳ ನಾಮಫಲಕಗಳನ್ನು ಅಳವಡಿಸದ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್‌ಗಳು ಮುಂತಾದವುಗಳ ಪರವಾನಗಿಯನ್ನು ಅಮಾನತು ಗೊಳಿಸಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.

- Advertisement -

ಈ ಬಗ್ಗೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿರೋಶ್ ಪ್ರಕಟಣೆ ನೀಡಿದ್ದಾರೆ. “ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ಈ ಹಿಂದೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಫೆ.2 ಮತ್ತು ಫೆ.12ರಂದು ನಡೆದ ಸಭೆಯಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲ ವಾಣಿಜ್ಯ ಉದ್ದಿಮೆಗಳು ಫೆ.28 ರೊಳಗೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವಂತೆ ಎಲ್ಲ ವಾಣಿಜ್ಯದಾರರಿಗೆ ಸೂಚಿಸಿದ್ದರು” ಎಂದು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

“ಫೆ.29 ರಿಂದ ಅನ್ವಯವಾಗುವಂತೆ, ಪಾಲಿಕೆಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸದೇ ಇರುವ ವಾಣಿಜ್ಯ ಉದ್ದಿಮೆಗಳನ್ನು ಇಲಾಖಾ ವತಿಯಿಂದ ನೀಡಿರುವ ಉದ್ದಿಮೆ ಪರವಾನಿಗೆಗಳನ್ನು ಅಮಾನತುಗೊಳಿಸಲು ಜತೆಗೆ, ಅಂತಹ ವಾಣಿಜ್ಯ ಉದ್ದಿಮೆಗಳನ್ನು ಬೀಗಮುದ್ರೆ ಮಾಡಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...