ಲೋಕಸಭಾ ಚುನಾವಣೆ | ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

Date:

ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ, ಜೂನ್ 4ರಂದು ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

- Advertisement -

ರಾಜ್ಯದಲ್ಲಿ ಏ.26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿತ್ತು. ಹೀಗಾಗಿ, ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆ ಜೂ. 4ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದೇಶದಾದ್ಯಂತ ಏಳು ಹಂತದಲ್ಲಿ ನಡೆಯುವ ಮತದಾನದ ಫಲಿತಾಂಶ ಜೂನ್‌ 4ರಂದು ಪ್ರಕಟವಾಲಿದೆ. ಈ ಹಿನ್ನಲೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ

ಮತ ಎಣಿಕೆ ನಡೆಯುವ ಸಮಯದಲ್ಲಿ ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ–ಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್​ ಜಾರಿ ಮಾಡಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆ, ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ ಹಾಕುವಂತಿಲ್ಲ,‌ ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ, ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಸೇರಿದಂತೆ ಒಟ್ಟು ಹನ್ನೆರಡು ಷರತ್ತುಗಳನ್ನು ಆದೇಶದಲ್ಲಿ ತಿಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....