ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.
ಏ.26ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆ ಹಿನ್ನೆಲೆ, ಎಲ್ಲ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 11.55ಕ್ಕೆ ವಿಸ್ತರಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು
ಇತ್ತ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲ ನಾಲ್ಕು ದಿಕ್ಕುಗಳಿಗೆ ಏ.26ರ ಮಧ್ಯರಾತ್ರಿ 12.35ಕ್ಕೆ ಕೊನೆಯ ರೈಲು ಹೊರಡಲಿದೆ.