ಕಿದ್ವಾಯಿಯಲ್ಲಿ ಲೋಪದೋಷ ಸಾಬೀತು; ಹಾಲಿ ನಿರ್ದೇಶಕ ಡಾ. ವಿ. ಲೋಕೇಶ್‌ ವರ್ಗಾವಣೆ

Date:

ಔಷಧ ಟೆಂಡರ್ ವಿಚಾರ ಸೇರಿದಂತೆ ಅನೇಕ ಲೋಪದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕ ಲೋಕೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಪ್ರತಿಷ್ಠಿತ ಕ್ಯಾನ್ಸರ್‌ ಆಸ್ಪತ್ರೆಗಳಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆ ಕೂಡ ಒಂದು. ಇಲ್ಲಿ ಅವ್ಯವಹಾರ ಹಾಗೂ ಆಡಳಿತ ವ್ಯವಸ್ಥೆ ಕುಸಿದ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಹಾಲಿ ನಿರ್ದೇಶಕ ಡಾ. ವಿ. ಲೋಕೇಶ್‌ ಅವರನ್ನು ನಿರ್ದೇಶಕ ಸ್ಥಾನದಿಂದ ತೆಗೆದು, ಅವರ ಸ್ಥಾನಕ್ಕೆ ಡಾ.ಸೈಯದ್ ಅಲ್ತಾಫ್ ನೇಮಕಗೊಂಡಿದ್ದಾರೆ.

ಕಿದ್ವಾಯಿಯಲ್ಲಿ ಅನುದಾನದ ದುರ್ಬಳಕೆ ಆಗುತ್ತಿದೆ, ರೋಗಿಗಳಿಂದ ಹೆಚ್ಚಿನ ಶುಲ್ಕ ಪಡೆಯಲಾಗುತ್ತಿದೆ,  ರೋಗಿಗಳಿಗೆ ಕಳಪೆ ಮಟ್ಟದ ಚಿಕಿತ್ಸೆ ನೀಡುತ್ತಿರುವುದು, ಔಷಧಗಳ ಕೊರತೆ, ಭ್ರಷ್ಟಾಚಾರ, ಸಂಸ್ಥೆಯ ಸಿಬ್ಬಂದಿಗಳು ಖಾಸಗಿ ಸಂಸ್ಥೆಗಳೊಂದಿಗೆ ಕೈಜೋಡಿಸಿ ಸಂಸ್ಥೆಗೆ ಆರ್ಥಿಕ ನಷ್ಟ ಉಂಟು ಮಾಡುತ್ತಿದ್ದಾರೆ. ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡದಿರುವುದು ಹಾಗೂ ಕೆ.ಟಿ.ಪಿ.ಪಿ. ನಿಯಮಗಳನ್ನು ಉಲ್ಲಂಘಿಸಿ ನಿಗದಿತ ಸಂಸ್ಥೆಗೆ ಹೆಚ್ಚಿನ ಲಾಭ ಬರುವಂತೆ ಟೆಂಡರ್‌ ನೀಡಿರುವುದರ ಕುರಿತು ಪತ್ರಿಕೆಯಲ್ಲಿ ವರದಿ ಹಾಗೂ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಖಜಾನೆ ಇಲಾಖೆ ಆಯುಕ್ತೆ ಡಾ. ಅರುಂಧತಿ ಚಂದ್ರಶೇಖರ್‌ ಅವರ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಸಮಿತಿ ಒಂದು ತಿಂಗಳ ಕಾಲ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಿತ್ತು. ವರದಿಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಹಾಲಿ ನಿರ್ದೇಶಕ ಡಾ. ವಿ. ಲೋಕೇಶ್‌ ಅವರನ್ನು ನಿರ್ದೇಶಕ ಸ್ಥಾನದಿಂದ ಸರ್ಕಾರ ಎತ್ತಂಗಡಿ ಮಾಡಿದೆ. ಸರ್ಜಿಕಲ್‌ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ.ಸೈಯದ್‌ ಅಲ್ತಾಫ್‌ ಅವರನ್ನು ತಾತ್ಕಾಲಿಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಹಾರಕ್ಕೆ ಹಣವಿಲ್ಲ, ಜಾಹೀರಾತಿಗೆ ಹಣವಿದೆ ಎಂದು ಸರ್ಕಾರ ಕುಟುಕಿದ ಕುಮಾರಸ್ವಾಮಿ

"ರಾಜ್ಯದ ರೈತರು ನಷ್ಟದಲ್ಲಿದ್ದಾರೆ, ಪರಿಹಾರ ಕೊಡೋಕೆ ಸರ್ಕಾರದ ಬಳಿ ಹಣವಿಲ್ಲ. ಆದ್ರೆ,...

ಗಲೀಜು ಬಟ್ಟೆ ಕಾರಣಕ್ಕೆ ರೈತನನ್ನು ಮೆಟ್ರೋಗೆ ಹತ್ತಲು ಬಿಡದ ಸಿಬ್ಬಂದಿ: ವಿಡಿಯೋ ವೈರಲ್ ಬಳಿಕ ಸೇವೆಯಿಂದ ವಜಾ

ಮೂಟೆ ಹೊತ್ತುಕೊಂಡು ರೈತನೋರ್ವ ಮೆಟ್ರೋ ರೈಲಿಗೆ ಹತ್ತುವಾಗ ಮೆಟ್ರೋ ಸಿಬ್ಬಂದಿ ಗಲೀಜು...

ಹೊಸದಾಗಿ GTDC ಗಳ ಸ್ಥಾಪನೆ: ಸಿ ಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ...