ವಿ ಪಿ ಸಿಂಗ್‌ ಜಾರಿಗೆ ತಂದ ಮಂಡಲ್‌ ಆಯೋಗದ ವರದಿ ಇನ್ನೂ ಸಂಪೂರ್ಣ ಅನುಷ್ಠಾನ ಆಗಿಲ್ಲ: ಎಚ್‌ ಕಾಂತರಾಜ್‌

Date:

  • ಸಾಮಾಜಿಕ ನ್ಯಾಯದ ಬಗ್ಗೆ ವಿ ಪಿ ಸಿಂಗ್‌ ಅವರಿಗಿದ್ದ ಬದ್ಧತೆ ಮಂಡಲ್‌ ವರದಿ ಜಾರಿಗೆ ಕಾರಣ
  • ಸಮಾಜದ ನಿಜ ಪರಿಸ್ಥಿತಿ ಅರ್ಥ ಮಾಡಿಕೊಳ್ಳಲು ಜಾತಿ ಗಣತಿ ಅನುಕೂಲ

“ಮಾಜಿ ಪ್ರಧಾನಿ ವಿ ಪಿ ಸಿಂಗ್‌ ಅವರು ಮಂಡಲ್‌ ಆಯೋಗದ ವರದಿ ಜಾರಿಗೆ ತಂದು, ಅದೇ ಕಾರಣಕ್ಕೆ ಅಧಿಕಾರ ಕಳೆದುಕೊಂಡರೂ ಮಂಡಲ್‌ ವರದಿಗೆ ತಾರ್ಕಿಕ ಅಂತ್ಯ ಸಿಗಬೇಕು ಎಂಬ ಅವರ ಆಶಯ ಇನ್ನೂ ಈಡೇರಿಲ್ಲ. ಹಿಂದುಳಿದ ವರ್ಗಗಳಿಗೆ 27% ಮೀಸಲಾತಿ ಸಮರ್ಪಕವಾಗಿ ಜಾರಿಯಾಗಿಲ್ಲ. ಆ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ” ಎಂದು ಕರ್ನಾಟಕ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಎಚ್‌ ಕಾಂತರಾಜ್‌ ಹೇಳಿದರು.

- Advertisement -

ಶುಕ್ರವಾರ ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮಂಡಲ್‌ ವರದಿ ಆಗಿದ್ದೇನು?” ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ವಿ ಪಿ ಸಿಂಗ್‌ ಹಿಂದುಳಿದ ವರ್ಗದವರಲ್ಲದಿದ್ದರೂ ರಾಜ ಮನೆತನಕ್ಕೆ ಸೇರಿದವರಾಗಿದ್ದರೂ ಸಾಮಾಜಿಕ ನ್ಯಾಯ ಕುರಿತ ಅವರ ಬದ್ಧತೆ ಮರೆಯಲಾರದ್ದು. ಅವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮಂಡಲ್‌ ಆಯೋಗದ ವರದಿ ಜಾರಿಗೊಳಿಸುವುದಾಗಿ ಹೇಳಿದ್ದರು. ಅದರಿಂದಾಗಿ ತಾವು ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ, ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರಿಗೆ ಅರಿವಿತ್ತು. ಆದರೆ ನಾನು ಮಾತು ಕೊಟ್ಟಿದ್ದೇನೆ, ನನಗೆ ಅಧಿಕಾರ ಕೊಟ್ಟಿದ್ದಾರೆ. ಮಾತಿನಂತೆ ನಡೆದುಕೊಳ್ಳುತ್ತೇನೆ ಎಂದು ಬದ್ಧತೆ ತೋರಿದ್ದರು. ಅದಕ್ಕಾಗಿ ಮನೆಯವರ ವಿರೋಧವನ್ನೂ ಎದುರಿಸಬೇಕಾಗಿ ಬಂತು. ಅಧಿಕಾರವನ್ನೂ ಕಳೆದುಕೊಳ್ಳಬೇಕಾಯಿತು” ಎಂದರು.

“ನಮ್ಮ ಸುತ್ತಮುತ್ತ ಅಸಮಾನತೆ ಇದ್ದರೆ ಅದನ್ನು ಸರಿಪಡಿಸಲು ಪ್ರಯತ್ನಿಸಬೇಕು. ಅದನ್ನೇ ಸಂವಿಧಾನವೂ ಹೇಳಿದೆ. ಸಾಮಾಜಿಕ ನ್ಯಾಯವನ್ನು ವಿರೋಧಿಸುವವರು ಯಥಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗಲು ಬಯಸುವವರು ಸಂವಿಧಾನ ವಿರೋಧಿಗಳು. ನಾನು ಸಂವಿಧಾನ ಹೇಳಿದಂತೆ ನಡೆದುಕೊಂಡಿದ್ದೇನೆ. ನಾನೇನೂ ತಪ್ಪು ಮಾಡಿಲ್ಲ ಎಂದು ಅಧಿಕಾರ ಕಳೆದುಕೊಂಡ ನಂತರ ವಿಪಿ ಸಿಂಗ್‌ ಹೇಳಿದ್ದರು” ಎಂದು ನೆನಪು ಮಾಡಿಕೊಂಡರು.

“ಮಂಡಲ ಆಯೋಗದ ವರದಿ ತಾರ್ಕಿಕ ಅಂತ್ಯ ಕಾಣಬೇಕು ಎಂದು ಮಾಜಿ ಪ್ರಧಾನಮಂತ್ರಿ ವಿ ಪಿ ಸಿಂಗ್‌ ಬಯಸಿದ್ದರು. ಆದರೆ ಹಿಂದುಳಿದ ವರ್ಗಗಳಿಗೆ ನೀಡಲಾಗಿದ್ದ 27% ಮೀಸಲಾತಿ ಇಂದಿಗೂ ಸಂಪೂರ್ಣವಾಗಿ ಜಾರಿಯಾಗಿಲ್ಲ. ಇತ್ತೀಚೆಗೆ ಕೇಂದ್ರದ ಸಚಿವರು ಸಂಸತ್ತಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ಮೀಸಲಾತಿ ಪ್ರಮಾಣ ಶೇ 50 ಮೀರಬಾರದು ಎಂಬ ಸುಪ್ರೀಂ ಕೋರ್ಟಿನ ನಿಲುವಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಜಾತಿ ಸಮೀಕ್ಷೆ, ಜನಗಣತಿ ಮಾಡಿ ದತ್ತಾಂಶ ಇಟ್ಟುಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್‌ ಹಲವು ಸಲ ಹೇಳಿದೆ. ಜಾತಿಯ ಅಂಶ ಸೇರಿಸಿ ಜನಗಣತಿ ಮಾಡುವಂತೆ ಕರ್ನಾಟಕ ಸರ್ಕಾರ ಹೇಳಿದ್ದು ಇದೇ ಉದ್ದೇಶದಿಂದ” ಎಂದರು.

“1993ರಲ್ಲಿ 14(4) ಅಡಿ ಉದ್ಯೋಗದಲ್ಲಿ ಮೀಸಲಾತಿ ಜಾರಿಗೆ ಬಂತು. 2008ರಲ್ಲಿ ಅರ್ಜುನ್‌ ಸಿಂಗ್‌ ಅವರು ಸಂವಿಧಾನಕ್ಕೆ 93ನೇ ತಿದ್ದುಪಡಿ ತಂದು ಮಂಡಲ್‌ ವರದಿ ಜಾರಿಗೆ ತರಬೇಕು ಎಂಬ ತೀರ್ಮಾನ ಮಾಡಿ ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಂದರೆ, ಐಐಟಿ, ಐಐಎಂ ತರಹದ ಸಂಸ್ಥೆಗಳಲ್ಲಿ ಮೀಸಲಾತಿ ಜಾರಿಗೆ ತರಲಾಯಿತು.

ಇದನ್ನೂ ಓದಿ ಸಿದ್ದರಾಮಯ್ಯ ಅವರಿಗೆ ಹಿಂದಿನಷ್ಟು ಸ್ವಾತಂತ್ರ್ಯ ಈಗ ಇಲ್ಲ- ಎಚ್‌ ಆಂಜನೇಯ

1937ರ ನಂತರ ಜಾತಿಗೆ ಸಂಬಂಧಿಸಿದ ಅಂಕಿ ಅಂಶವೇ ಇಲ್ಲ. ಸಮಾಜದ ನಿಜ ಪರಿಸ್ಥಿತಿ ಅರ್ಥ ಮಾಡಿಕೊಳ್ಳಲು ಜಾತಿ ಗಣತಿ ಅನುಕೂಲ. ಜಾತಿ ಎಣಿಸಿಕೊಳ್ಳಲು ಹೋಗಿ ಜಾತಿಯ ಸಮಾಜ ಕಟ್ಟಲಾಗುತ್ತಿದೆ ಎಂದು ಕೆಲವರು ಆರೋಪಿಸುತ್ತಿದ್ಧಾರೆ. ಜಾತಿಯನ್ನೇ ಪರಿಗಣಿಸಿ ಗಣತಿ ಮಾಡುವುದು, ಮೀಸಲಾತಿ ಕೊಡುವುದು ತಪ್ಪು ಎಂದು ನಾನೂ ಹೇಳುತ್ತೇನೆ. ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿ ಇ ಎಸ್‌ ವೆಂಕಟರಾಮಯ್ಯ ಅವರು ಕೂಡಾ ಇದನ್ನೇ ಹೇಳಿದ್ದರು. ಎಲ್ಲಾ ಜಾತಿಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ, ರಾಜಕೀಯ ಸ್ಥಿತಿ ಗಮನಿಸಿ ಮೀಸಲಾತಿಗೆ ಕೈ ಹಾಕಬೇಕು ಎಂದಿದ್ದರು” ಎಂದು ಹೇಳಿದರು.

ಸಮಾರಂಭದಲ್ಲಿ ಎಚ್‌ ಕಾಂತರಾಜ್‌, ಪತ್ರಕರ್ತರಾದ ಎಂ ಸಿದ್ದರಾಜು, ಲಕ್ಷ್ಮಣ ಕೊಡಸೆ, ಗಂಗಾಧರ ಮೊದಲಿಯಾರ್‌, ಕೆ ವಿ ಪ್ರಭಾಕರ, ಬಿ ಕೆ ರವಿ ಅವರಿಗೆ ವಿಪಿ ಸಿಂಗ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಾಜಿ ಸಚಿವ ಎಚ್‌ ಎಂ ರೇವಣ್ಣ, ಮಾಜಿ ಸಭಾಪತಿ ವಿ ಆರ್‌ ಸುದರ್ಶನ್‌, ಮಾಜಿ ಸಚಿವ ಎಚ್‌ ಆಂಜನೇಯ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಕೆ. ಆರ್‌ ನೀಲಕಂಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

800 ಉರ್ದು, 200 ಮರಾಠಿ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಸಭಾಪತಿ ಸಲೀಂ ಅಹ್ಮದ್‌ಗೆ ಮನವಿ

ಸರ್ಕಾರವು 800 ಉರ್ದು ಮತ್ತು 200 ಮರಾಠಿ ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಸ್‌ಐಟಿ ರಚನೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ...