ಮಂಗಳೂರು | ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ

Date:

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26 ರಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಎಲ್ಲೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡುತ್ತಿದ್ದಾರೆ. ಈ ನಡುವೆ, ಮಂಗಳೂರಿನ ಕಪಿತಾನಿಯೋ ಮತಗಟ್ಟೆಯ ಬಳಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಮಾಧ್ಯಮ ಪ್ರತಿನಿಧಿಗೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ, ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದ ನಡೆಸಿದ ಘಟನೆ ನಡೆದಿದೆ.

- Advertisement -

ಮಂಗಳೂರಿನ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ಸಂದೀಪ್ ಎಕ್ಕೂರು ಹಾಗೂ ಇನ್ನಿತರ ಕಾರ್ಯಕರ್ತರಿಂದ ಮಾತಿನ ಚಕಮಕಿ ನಡೆದಿದೆ. ಅಲ್ಲದೇ, ಇವರು ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದ ನಡೆಸಿದ್ದು, ಅಧಿಕಾರಿಯನ್ನ ತಳ್ಳಾಡಿ ಪುಂಡಾಟ ಮೆರೆದಿದ್ದಾರೆ. ಇತ್ತ ಇದನ್ನು ಚಿತ್ರೀಕರಣ ಮಾಡಿದ ಮಾಧ್ಯಮದವರ ಮೇಲೂ ಹರಿಹಾಯ್ದ ಇವರು ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಏನಿದು ಘಟನೆ?

ಮಂಗಳೂರಿನ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಮತದಾನ ಮಾಡಿ ಹೊರಗೆ ಬಂದಿದ್ದಾರೆ. ಈ ವೇಳೆ, ಮಾಧ್ಯಮ ಪ್ರತಿನಿಧಿಗಳು ಮತಗಟ್ಟೆಯ ಗೇಟಿನ ಹೊರಭಾಗದಲ್ಲಿ ಪದ್ಮರಾಜ್ ಅವರ ಹೇಳಿಕೆ ತೆಗೆದುಕೊಂಡಿದ್ದರು.

ಈ ವೇಳೆ, ಅಲ್ಲಿಗೆ ಬಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಎಕ್ಕೂರು ‘ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು’ ಎಂದು ಜಗಳ ಆರಂಭಿಸಿದ್ದಾನೆ. ಈ ವೇಳೆ, ಅಲ್ಲಿಯೇ ಇದ್ದ ಪೊಲೀಸ್ ಅಧಿಕಾರಿ ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಪತ್ರಕರ್ತರೊಂದಿಗೂ ಬಿಜೆಪಿ ಕಾರ್ಯಕರ್ತರ ತಂಡ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ಮತಗಟ್ಟೆಯ ಬಳಿ ಗಲಾಟೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ದ ಇಂದು ಸಂಜೆ ವೇಳೆಗೆ ಆತನ ಮೇಲೆ ಪ್ರಕರಣ ದಾಖಲು ಮಾಡಿ ಬಂಧನ ಮಾಡುತ್ತೇವೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ಈ ಎಚ್ಚರಿಕೆಯ ಬಳಿಕ ಪರಿಸ್ಥಿತಿ ಶಾಂತವಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...